ಚಿತ್ರದುರ್ಗ:ಚುನಾವಣೆಯ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾವು

ಸಮಗ್ರ ನ್ಯೂಸ್‌ : ಚುನಾವಣಾ ಕರ್ತವ್ಯದ ವೇಳೆ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮೇಗಳ ಗೊಲ್ಲರ ಹಟ್ಟಿಯಲ್ಲಿ ನಡೆದಿದೆ.

Ad Widget ... ..

ಸಾವನ್ನಪ್ಪಿದ ಸಿಬ್ಬಂದಿಯನ್ನು APRO ಯಶೋಧ (55) ಎಂದು ಗುರುತಿಸಲಾಗಿದೆ. ಯಶೋಧ ಮತಗಟ್ಟೆ ಸಂಖ್ಯೆ 202 ರಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದರು. ಈ ವೇಳೆ APRO ಯಶೋದಮ್ಮ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ.

Ad Widget

ಯಶೋಧಮ್ಮ ಬೊಮ್ಮಸಮುದ್ರ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಚಳ್ಳಕೆರೆ ತಾಲ್ಲೂಕು ಆಸ್ಪತ್ರೆಗೆ ಯಶೋಧಮ್ಮ ಮೃತದೇಹ ರವಾನಿಸಲಾಗಿದೆ. ಶಾಸಕ ರಘುಮೂರ್ತಿ ಭೇಟಿ ನೀಡಿ ಪರಿಶೀಲಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

Leave a Comment

Your email address will not be published. Required fields are marked *