Ad Widget

ಹುಬ್ಬಳ್ಳಿ: ನೇಹಾ ಹಿರೇಮಠ ಮನೆಗೆ ಮಾಜಿ ಸಿಎಂ ಭೇಟಿ|ಕುಟುಂಬಕ್ಕೆ ಸಾಂತ್ವನ

ಸಮಗ್ರ ನ್ಯೂಸ್‌ : ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣದ ತನಿಖೆ ದಾರಿತಪ್ಪಿದೆ. ರಾಜ್ಯ ಸರ್ಕಾರಕ್ಕೆ ಯಾರನ್ನೂ ರಕ್ಷಣೆ ಮಾಡುವ ಉದ್ದೇಶವಿಲ್ಲದಿದ್ದರೆ, ಈಗಲೂ ಪ್ರಕರಣವನ್ನು ಸಿಬಿಐಗೆ ವಹಿಸಲಿ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget

ಇಂದು ನಿರಂಜನ ಹಿರೇಮಠ ಅವರ ಮನೆಗೆ ತೆರಳಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿ, ಆರೋಪಿಗೆ ಕಠಿಣ ಶಿಕ್ಷೆ ನೀಡುವ ಕುರಿತು ಭರವಸೆ ನೀಡಿದರು. ಈ ಸಂದರ್ಭದಲ್ಲಿ ನೇಹಾ ಹಿರೇಮಠಗೆ ಶ್ರದ್ದಾಂಜಲಿ ಸಲ್ಲಿಸಿದರು.

Ad Widget . Ad Widget . Ad Widget .

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿರಂಜನ್ ಹಿರೇಮಠ ಅವರ ಕುಟುಂಬಕ್ಕೂ ನಮಗೂ ಬಹಳ ಹಳೆಯ ಸಂಬಂಧವಿದೆ. ಕಮಡೊಳ್ಳಿಯಲ್ಲಿ ನಿರಂಜನ ಹಿರಿಯರು ನಮ್ಮ ಕುಟುಂಬದ ಗುರುಗಳು. ನೇಹಾ ಹತ್ಯೆ ಬಹಳ ಆಘಾತದ ಸಂಗತಿ. ಅಮಾಯಕ ಹೆಣ್ಣು ಮಗುವನ್ನು ಕ್ರೂರವಾಗಿ ಕೊಲೆ ಮಾಡಿರುವುದು ಎಲ್ಲರೂ ತಲೆತಗ್ಗಿಸುವಂತಹ ವಿಚಾರ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

Leave a Comment

Your email address will not be published. Required fields are marked *