ಸಮಗ್ರ ನ್ಯೂಸ್ : ಮತದಾನದ ವೇಳೆ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದ ಘಟನೆ ಕಡಬದ ಬಿಳಿನೆಲೆ ಮತಗಟ್ಟೆ ಬಳಿ ನಡೆದಿದೆ.
ಮತಗಟ್ಟೆ ಕೇಂದ್ರದ ಗೇಟಿನ ಬಳಿ ಪ್ರಚಾರಕ್ಕೆ ಯತ್ನಿಸಿದ್ದ ಒಂದು ರಾಜಕೀಯ ಪಕ್ಷದ ಕಾರ್ಯಕರ್ತರು ನಡೆಯನ್ನು ಇನ್ನೊಂದು ಪಕ್ಷದ ಕಾರ್ಯಕರ್ತರು ತೀವ್ರವಾಗಿ ಆಕ್ಷೇಪಿಸಿದ್ದಾರೆ.
ಈ ಸಂದರ್ಭ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ವಿಕೋಪಕ್ಕೆ ತಿರುಗುವ ಸಂದರ್ಭ ಪೊಲೀಸರು ಮಧ್ಯ ಪ್ರವೇಶಿಸಿ ಕಾರ್ಯಕರ್ತರನ್ನು ಚದುರಿಸಿದ್ದಾರೆ.