ಸಮಗ್ರ ಉದ್ಯೋಗ: ಜವಾಹರ್ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಖಾಲಿ ಇರುವ ಅನೇಕ ಪ್ರೆಸಿಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು. ಸಿಲಿಕಾನ್ ಸಿಟಿಯಲ್ಲಿ ಉದ್ಯೋಗ ಮಾಡಲು ಬಯಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಮೇ 4, 2024 ಆಫ್ಲೈನ್ ಮೂಲಕ ಅಪ್ಲೈ ಮಾಡಬೇಕು.
ಶೈಕ್ಷಣಿಕ ಅರ್ಹತೆ:
ಜವಾಹರ್ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಫಿಜಿಕಲ್ ಸೈನ್ಸಸ್/ ಕೆಮಿಕಲ್ ಸೈನ್ಸಸ್/ ಲೈಫ್ ಸೈನ್ಸಸ್ನಲ್ಲಿ ಡಾಕ್ಟರೇಟ್ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಜವಾಹರ್ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 1, 2024ಕ್ಕೆ ಗರಿಷ್ಠ 60 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 2,25,000
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಆಡಳಿತಾಧಿಕಾರಿ
ಜವಾಹರಲಾಲ್ ನೆಹರು ಸುಧಾರಿತ ವೈಜ್ಞಾನಿಕ ಸಂಶೋಧನಾ ಕೇಂದ್ರ
ಜಕ್ಕೂರು
ಬೆಂಗಳೂರು-560064