Ad Widget

ಬೀದರ್ : ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ ರಾಜ್ಯಕ್ಕೆ ಸಂದ ಜಯ- ಈಶ್ವರ ಖಂಡ್ರೆ

ಸಮಗ್ರ ನ್ಯೂಸ್‌ : ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊನೆಗೂ 3454 ಕೋಟಿ ರೂ. ಬರ ಪರಿಹಾರ ಘೋಷಿಸಿದೆ. ಇದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ನಡೆಸಿದ ಹೋರಾಟಕ್ಕೆ ಸಂದ ಮೊದಲ ಜಯವಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.

Ad Widget . Ad Widget . Ad Widget . Ad Widget . Ad Widget . Ad Widget

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯ ಕೊರತೆಯಿಂದಾಗಿ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿತ್ತು, ಕಳೆದ ಸೆಪ್ಟೆಂಬರ್ ತಿಂಗಳಲ್ಲೇ ರಾಜ್ಯದಲ್ಲಿ ಬರದಿಂದ ಆಗಿರುವ ಬೆಳೆ ನಷ್ಟಕ್ಕೆ ಹಾಗೂ ನೀರಿನ ಕೊರತೆ ಇರುವ ಪ್ರದೇಶಗಳಲ್ಲಿ ಪರಿಹಾರ ಕಲ್ಪಿಸಲು ಎನ್.ಡಿ.ಆರ್.ನಿಯಮಾವಳಿಗಳ ರೀತಿ 18,171 ಕೋಟಿ ರೂ. ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು.

Ad Widget . Ad Widget . Ad Widget .

ಆದರೆ ಕೇಂದ್ರ ಸರ್ಕಾರ ರಾಜ್ಯದ ವಿಚಾರದಲ್ಲಿ ಮಲತಾಯಿ ಧೋರಣೆ ತೋರಿ, ಅನಗತ್ಯ ವಿಳಂಬ ಮಾಡಿ, ರಾಜ್ಯ ಜನತೆಗೆ ಘೋರ ಅನ್ಯಾಯ ಮಾಡಿತ್ತು ಎಂದರು. ಪರಿಹಾರ ನೀಡಲು ನಿರ್ದೇಶಿಸುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಬಳಿಕ ಆಗಬಹುದಾದ ಮುಖಭಂಗ ತಪ್ಪಿಸಿಕೊಳ್ಳಲು ಒಂದು ವಾರದೊಳಗೆ ಪರಿಹಾರ ನೀಡುವುದಾಗಿ ತಿಳಿಸಿದ್ದ ಕೇಂದ್ರ ಸರ್ಕಾರ ಈಗ 3454 ಕೋಟಿ ರೂ. ಪರಿಹಾರ ಮಾತ್ರ ಘೋಷಿಸಿದೆ.

ರಾಜ್ಯದಲ್ಲಿ ಆಗಿರುವ ನಷ್ಟ ಅಪಾರವಾಗಿದ್ದು, ಕೂಡಲೇ ಉಳಿದ ಹಣವನ್ನು ನ್ಯಾಯ ಸಮ್ಮತವಾಗಿ ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತೇನೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

Leave a Comment

Your email address will not be published. Required fields are marked *