Ad Widget .

ನೇಹಾ ನಿವಾಸಕ್ಕೆ ಪೊಲೀಸ್ ಭದ್ರತೆ, ತಂದೆಗೆ ಗನ್ ಮ್ಯಾನ್ ವ್ಯವಸ್ಥೆ ಮಾಡಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊನ್ನೆ ಸಿಎಂ ಸಿದ್ದರಾಮಯ್ಯ ಅವರು ನೇಹಾ ಹಿರೇಮಠ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ ಸಂದರ್ಭದಲ್ಲಿ ಮಗಳು ನೇಹಾ ಹತ್ಯೆ ನಡೆದ ಮೇಲೆ ತಮಗೂ ಜೀವ ಬೆದರಿಕೆ ಇದೆ ಎಂದು ನೇಹಾ ತಂದೆ ನಿರಂಜನ ಹಿರೇಮಠ್‌ ಅವರು ಹೇಳಿದರು. ಈ ಹಿನ್ನೆಲೆಯಲ್ಲಿ ಅವರಿಗೆ ಗನ್ ಮ್ಯಾನ್, ಮನೆಗೆ ಪೊಲೀಸ್ ಭದ್ರತೆಯನ್ನು ರಾಜ್ಯ ಸರ್ಕಾರ ಏರ್ಪಡಿಸಿದೆ.

Ad Widget . Ad Widget .

ಈ ಸಂದರ್ಭದಲ್ಲಿ ಸಿಎಂ ಬೆದರಿಕೆ ಇದ್ದರೆ ಭದ್ರತೆ ಒದಗಿಸುವುದಾಗಿ ಭರವಸೆ ನೀಡಿದ್ದರು. ಅದರಂತೆ ನೇಹಾ ತಂದೆಗೆ ಭದ್ರತೆ ವ್ಯವಸ್ಥೆ ಮಾಡಲಾಗಿದೆ.

Ad Widget . Ad Widget .

ಮಗಳ ಹತ್ಯೆ ನಂತರ ಅನೇಕರು ಬಂದು ಸಾಂತ್ವನ ಹೇಳಿ, ಧೈರ್ಯ ತುಂಬುತ್ತಿದ್ದಾರೆ. ಆದರೆ ಮಗಳ ಹತ್ಯೆಯಾದ ಐದನೇ ದಿನ, ಸಂತಾಪದ ನೆಪದಲ್ಲಿ ಒಬ್ಬರು ನಮ್ಮ ಮನೆಗೆ ಬಂದು ವಿಡಿಯೊ ಮಾಡಿಕೊಂಡು ಹೋಗಿದ್ದಾರೆ. ಕೆಲವೊಂದು ಅನುಮಾನಾಸ್ಪದ ಸನ್ನಿವೇಶ ಕಂಡು ಬಂದಿದೆ. ಕೊಲೆ ಮಾಡುವ ಮುನ್ನ ಆರೋಪಿ ಬಿಡ್ನಾಳದಲ್ಲಿ ಅನುಮಾನಾಸ್ಪದವಾಗಿ ಓಡಾಡಿದ್ದ ಎಂದು ತಿಳಿದು ಬಂದಿದೆ. ಇವತ್ತು ಕೆಲ ವ್ಯಕ್ತಿಗಳು ಯಾವುದೊ ಸಂಚು ಹಾಕಿದ್ದಾರೆ ಎಂಬ ಅನುಮಾನ ಬಂದಿದೆ. ಈ ವಿಷಯವನ್ನು ಪೊಲೀಸ್ ಆಯುಕ್ತರಿಗೆ ಹೇಳಿದ್ದೇವೆ, ಎಂದಿದರು.

Leave a Comment

Your email address will not be published. Required fields are marked *