Ad Widget .

ಅಮೆರಿಕಾದಲ್ಲಿ ಭೀಕರ ಕಾರು ಅಪಘಾತ| ಭಾರತದ ಮೂವರು ಮಹಿಳೆಯರು ಮೃತ್ಯು

ಸಮಗ್ರ ನ್ಯೂಸ್‌ : ಅಮೆರಿಕಾದಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗುಜರಾತ್‌ನ ಮೂವರು ಮಹಿಳೆಯರು ಸಾವನ್ನಪ್ಪಿದ ಘಟನೆ ನಡೆದಿದೆ.

Ad Widget . Ad Widget .

ಗುಜರಾತಿನ ಆನಂದ್ ಜಿಲ್ಲೆಯ ನಿವಾಸಿಗಳಾದ ರೇಖಾಬೆನ್ ಪಟೇಲ್, ಸಂಗೀತಾಬೆನ್ ಪಟೇಲ್ ಮತ್ತು ಮನೀಶಾಬೆನ್ ಪಟೇಲ್ ಅವರು ದಕ್ಷಿಣ ಕೆರೊಲಿನಾದ ಗ್ರೀನ್‌ವಿಲ್ಲೆ ಕೌಂಟಿಯಲ್ಲಿ ಎಸ್‌ಯುವಿ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

Ad Widget . Ad Widget .

I-85 ನಲ್ಲಿ ಉತ್ತರದ ಕಡೆಗೆ ಪ್ರಯಾಣಿಸುತ್ತಿದ್ದ SUV ಕಾರು ಎಲ್ಲಾ ಲೇನ್‌ಗಳನ್ನು ದಾಟಿ ಒಡ್ಡುಗಳ ಮೇಲೇರಿದೆ. ಕೊನೆಗೆ ಸೇತುವೆಯ ಎದುರು ಭಾಗದಲ್ಲಿದ್ದ ಮರಗಳಿಗೆ ಅಪ್ಪಳಿಸಿದೆ. ಅಪಘಾತದ ತೀವ್ರತೆಗೆ ಕನಿಷ್ಠ 20 ಅಡಿಗಳಷ್ಟು ಗಾಳಿಯಲ್ಲಿ ಕಾರು ಹಾರಿದೆ.

ಮಿತಿಗಿಂತ ಹೆಚ್ಚು ವೇಗದಲ್ಲಿ ಕಾರು ಚಲಾಯಿಸಲಾಗಿದೆ ಎಂದು ಮುಖ್ಯ ಉಪ ಕರೋನರ್ ಮೈಕ್ ಎಲ್ಲಿಸ್ ತಿಳಿಸಿದ್ದಾರೆ. ಸ್ಥಳಕ್ಕೆ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದವು.

ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ದಕ್ಷಿಣ ಕೆರೊಲಿನಾದ ಸ್ಥಳೀಯ ಅಧಿಕಾರಿಗಳು ಘಟನೆ ಸಂಬಂಧ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

Leave a Comment

Your email address will not be published. Required fields are marked *