Ad Widget .

ಕಲಬುರಗಿ ಮಹಾನಗರ ಪಾಲಿಕೆ ಮಾಜಿ ಮೇಯರ್ ವಾಹನದಲ್ಲಿ ಎರಡು ಕೋಟಿ ರೂ.ಪತ್ತೆ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅತ್ಯಂತ ಸನ್ನದ್ಧ ಸ್ಥಿತಿಯಲ್ಲಿರುವ ಇಲ್ಲಿನ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಕಾರೊಂದರಲ್ಲಿ ಸಾಗಾಟ ಮಾಡುತ್ತಿದ್ದ 2 ಕೋಟಿ ರೂ. ಹಣವನ್ನು ಇಲ್ಲಿನ ರೈಲ್ವೆ ನಿಲ್ದಾಣದ ಬಳಿ ಇಂದು ಬೆಳಗ್ಗೆ ವಶಪಡಿಸಿಕೊಂಡಿರುವುದು ವರದಿಯಾಗಿದೆ.

Ad Widget . Ad Widget .

ಮಾಜಿ ಮೇಯರ್ ವೊಬ್ಬರಿಗೆ ಸೇರಿದ ಕಾರಿನಲ್ಲಿ ಹಣ ಸಾಗಿಸುವ ಯತ್ನ ನಡೆಯುತ್ತಿತ್ತು ಎನ್ನಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿರುವ ಅಧಿಕಾರಿಗಳು ಸಂಜೆ ವೇಳೆಗೆ ಈ ನಿಟ್ಟಿನಲ್ಲಿ ಖಚಿತ ಮಾಹಿತಿಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಿದ್ದಾರೆ ಎಂದು ಹೇಳಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *