Ad Widget .

ಪೆನ್ ಡ್ರೈವ್ ಪ್ರಕರಣ: ಪ್ರಜ್ವಲ್ ಜೊತೆಗೆ ಎಚ್‌.ಡಿ.ರೇವಣ್ಣ ಮೇಲೂ ಎಫ್‌ಐಆರ್‌

ಸಮಗ್ರ ನ್ಯೂಸ್: ಪ್ರಜ್ವಲ್ ರೇವಣ್ಣದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ. ಇದರ ಬೆನ್ನಲ್ಲೇ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ ಮಹಿಯೊಬ್ಬರು ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿ ತಂದೆ-ಮಗ ಇಬ್ಬರ ಮೇಲೂ ಮನೆ ಕೆಲಸದಾಕೆಯೇ ದೂರು ನೀಡಿದ್ದಾಳೆ.

Ad Widget . Ad Widget .

ಈ ದೂರು ನೀಡಿದು ಬೇರೆ ಯಾರು ಅಲ್ಲ, ಭವಾನಿ ರೇವಣ್ಣ ಸೋದರತ್ತೆ ಮಗಳು. ಎಚ್‌.ಡಿ. ರೇವಣ್ಣ ಶಾಸಕರಾಗಿದ್ದಾಗ ನಾಗಲಾಪುರ ಹಾಲಿನ ಡೇರಿಯಲ್ಲಿ ಕೆಲಸ ಕೊಡಿಸಿದ್ದರು. ಬಳಿಕ ಬಿಸಿಎಂ ಹಾಸ್ಟೆಲ್‌ನಲ್ಲಿ ಅಡುಗೆ ಕೆಲಸ ಕೊಡಿಸಿದ್ದರು. 2015ರಲ್ಲಿ ರೇವಣ್ಣ ಅವರ ಮನೆಯಲ್ಲೇ ಕೆಲಸಕ್ಕೆ ಸೇರಿಸಿಕೊಂಡಿದ್ದರು. ಒಟ್ಟು 6 ಹೆಣ್ಣು ಮಕ್ಕಳು ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸಕ್ಕೆ ಸೇರಿಕೊಂಡ ನಾಲ್ಕು ತಿಂಗಳಿಗೆ ಕೊಠಡಿಗೆ ಬರುವಂತೆ ರೇವಣ್ಣ ಆಹ್ವಾನಿಸಿದ್ದರು. ಭವಾನಿ ರೇವಣ್ಣ ಮನೆಯಲ್ಲಿ ಇಲ್ಲದಿದ್ದಾಗ ಎಚ್.ಡಿ. ರೇವಣ್ಣ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

Ad Widget . Ad Widget .

ಸ್ಟೋರ್ ರೂಮ್‌ನಲ್ಲಿ ಹಣ್ಣು ಕೊಡೋ ನೆಪದಲ್ಲಿ ಕೈ ಹಿಡಿದು ಎಳೆದಾಡಿದ್ದರು. ಅದೇ ರೀತಿ ಅಡುಗೆ ಮನೆಯಲ್ಲಿ ಇದ್ದಾಗ ಪ್ರಜ್ವಲ್ ರೇವಣ್ಣ ಹಿಂಬದಿಯಿಂದ ಬಂದು ಮೈ‌ಮುಟ್ಟಿ ಹೊಟ್ಟೆ ಜಿಗುಟುತ್ತಿದ್ದರು. ಜೊತೆಗೆ ಎಣ್ಣೆ ಹಚ್ಚಲು ಪದೇ ಪದೇ ಕರೆದು ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು. ಮನೆಯಲ್ಲಿದ್ದಾಗ ವಿಡಿಯೋ ಕಾಲ್ ಮಾಡಿ ನನ್ನ ಮಗಳ ಜೊತೆ ಅಸಭ್ಯವಾಗಿ ಮಾತನಾಡುತ್ತಿದ್ದರು. ಇದಕ್ಕೆ ಮಗಳು ಹೆದರಿಕೊಂಡು ನಂಬರ್ ಬ್ಲಾಕ್ ಕೂಡ ಮಾಡಿದ್ದಳು. ಇದರಿಂದ‌ ಮನೆ ಕೆಲಸ ಬಿಟ್ಟು ಹೊರಗಡೆ ಬಂದಿದ್ದಾಗಿ ದೂರಿನಲ್ಲಿ ತಿಳಿಸಿದ್ದಾಳೆ.

ವಿಡಿಯೊಗಳು ವೈರಲ್ ಆಗುತ್ತಿದ್ದು, ನನ್ನ ಗಂಡ ಶೀಲ ಶಂಕಿಸುತ್ತಿದ್ದಾನೆ. ಇದರಿಂದ ಮನನೊಂದು ದೂರು ನೀಡುತ್ತಿರೋದಾಗಿ ಮಹಿಳೆ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಈ ದೂರಿನನ್ವಯ ಪ್ರಜ್ವಲ್ ರೇವಣ್ಣ ಹಾಗೂ ಎಚ್.ಡಿ. ರೇವಣ್ಣ ಇಬ್ಬರ ಮೇಲೂ ಎಫ್‌ಐಆರ್ ದಾಖಲಾಗಿದೆ.

Leave a Comment

Your email address will not be published. Required fields are marked *