ಬಿಹಾರ : ಮದುವೆ ಮನೆಯಲ್ಲಿ ಪತ್ನಿ ಡಾನ್ಸ್‌ | ಬೇಸರಗೊಂಡು ಪತಿ ಆತ್ಮಹತ್ಯೆ

ಸಮಗ್ರ ನ್ಯೂಸ್‌ : ಬಾವನ ಮದುವೆಯಲ್ಲಿ ಪತ್ನಿ ಡಾನ್ಸ್‌ ಮಾಡಿದಳೆಂದು ಬೇಸರಗೊಂಡ ಪತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಿಹಾರದ ಬದಾರಿಯಾದಲ್ಲಿ ನಡೆದಿದೆ.

Ad Widget ... ..

ಬಹುಲಾ ಗ್ರಾಮದ ನಿವಾಸಿ 35 ವರ್ಷದ ಗೋಪಾಲ್‌ ಸಿಂಗ್‌, ರಸೂಲ್‌ಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಬರುವ ಮಹೇಂದ್ರ ನಾಥ್‌ ಹಾಲ್ಟರ್‌ ರೈಲು ನಿಲ್ದಾಣದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

Ad Widget

ಗೋಪಾಲ್‌ ಸಿಂಗ್‌ ಬೇನತ್‌ ಗ್ರಾಮದಲ್ಲಿ ತನ್ನ ಪತ್ನಿಯ ಸಹೋದರನ ಮದುವೆ ಸಮಾರಂಭಕ್ಕೆ ಹೋಗಿದ್ದರು. ಈ ವೇಳೆ ಸಂಭ್ರಮದಲ್ಲಿ ಡಾನ್ಸ್‌ ಮಾಡುತ್ತಿದ್ದ ಪತ್ನಿಯನ್ನು ನೋಡಿ ಅಸಮಾಧಾನಗೊಂಡು ಗೋಪಾಲ್‌ ಆಕೆಯನ್ನು ತಡೆದಿದ್ದಾನೆ.

ಕುಟುಂಬಸ್ಥರ ಮಾಹಿತಿ ಪ್ರಕಾರ ಗೋಪಾಲ್‌ ಡಾನ್ಸ್‌ ಮಾಡುತ್ತಿದ್ದ ತನ್ನ ಪತ್ನಿಯನ್ನು ಸುಮ್ಮನಿರುವಂತೆ ಸೂಚಿಸಿದ್ದನು. ಆದರೆ ಆಕೆ ಮಾತ್ರ ಆತನ ಮಾತಿಗೆ ಒಪ್ಪಲಿಲ್ಲ. ಈ ವೇಳೆ ಇಬ್ಬರ ನಡುವೆ ಸಣ್ಣ ಜಗಳ ನಡೆದಿದೆ.

ಆಗ ಬಾವ-ಬಾಮೈದರ ನಡುವೆ ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರಿತ್ತು. ಇದರಿಂದ ತೀರ ಬೇಸರಗೊಂಡಿದ್ದ ಗೋಪಾಲ್‌, ರೈಲು ಬರುತ್ತಿದ್ದ ಸಮಯ ನೋಡಿಕೊಂಡು ಹಳಿಗೆ ಹಾರಿಗೆ ಪ್ರಾಣ ಬಿಟ್ಟಿದ್ದಾನೆ. ಪ್ರಕರಣ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ.

Leave a Comment

Your email address will not be published. Required fields are marked *