ಚಾಮರಾಜನಗರದಲ್ಲಿ ಇವಿಎಂ ಧ್ವಂಸ ಪ್ರಕರಣ: 33 ಮಂದಿ ಬಂಧನ

ಸಮಗ್ರ ನ್ಯೂಸ್: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಚುನಾವಣೆ ದಿನ ಇವಿಎಂ ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲೆ ಮಹದೇಶ್ವರ ಬೆಟ್ಟ ಪೊಲೀಸ್​​ ಠಾಣೆಯಲ್ಲಿ ಮೂರು ಪ್ರಕರಣ ದಾಖಲಾಗಿದೆ. ಈ ಘಟನೆಗೆ ಸಂಬಂಧ ಈವರೆಗೂ 33 ಮಂದಿಯನ್ನು ಬಂಧಿಸಿದ್ದೇವೆ ಎಂದು ಚಾಮರಾಜನಗರ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹೋ ಹೇಳಿದ್ದಾರೆ.

Ad Widget ... ..

ಮಾಧ್ಯಮದವರೊಂದಿಗೆ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ, ಇಂಡಿಗನತ್ತ ಗ್ರಾಮದಲ್ಲಿ ಒಂದು KSRP ತುಕಡಿ, ಡಿಎಆರ್ ತುಕಡಿ ನಿಯೋಜನೆ ಮಾಡುವ ಮೂಲಕ ಪೊಲೀಸ್ ಬಿಗಿ ಬಂದೋಬಸ್ತ್​ ಒದಗಿಸಲಾಗಿದೆ ಎಂದು ಹೇಳಿದ್ದಾರೆ.

Ad Widget

ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಭೆ ನಡೆಸಿದ ಚುನಾವಣಾ ಅಧಿಕಾರಿಗಳು ನಾಳೆ ಮರು ಮತದಾನಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ಊರಿನ ಜನರು ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳ ಮೇಲೆ ಕಲ್ಲು ಬೀಸಿ ಇವಿಎಂ ವಿವಿಪ್ಯಾಟ್​​ನ ಧ್ವಂಸ ಮಾಡಿ ಹಾಕಿದ್ದರು. ಈ ಹಿನ್ನಲೆ ಸೋಮವಾರ ಇಂಡಿಗನತ್ತ 146 ಮತಗಟ್ಟೆಯಲ್ಲಿ ಮರು ಮತದಾನಕ್ಕೆ ಸಿದ್ದತೆ ನಡೆಸಲಾಗಿದೆ.

ಇವಿಎಂ ಮೆಷಿನ್ ಧ್ವಂಸ ಮಾಡಿದ ಬೆನ್ನಲ್ಲೆ ಕೇಂದ್ರ ಚುನಾವಣಾ ಆಯೋಗಕ್ಕೆ ಜಿಲ್ಲಾ ಮುಖ್ಯ ಚುನಾವಣಾ ಅಧಿಕಾರಿ ವರದಿ ನೀಡಿತ್ತು. ವರದಿ ಹಾಗೂ ಎಫ್​ಐಆರ್​ ಕಾಪಿ ಸ್ವೀಕರಿಸಿದ ಕೇಂದ್ರ ಚುನಾವಣಾ ಆಯೋಗ ಸೋಮವಾರ ಮರು ಮತದಾನಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಈ ಹಿನ್ನಲೆ ಪೊಲೀಸ್ ಇಲಾಖೆ ಸೂಕ್ತ ಭದ್ರತೆಯೊಂದಿಗೆ ಪೊಲೀಸ್ ಬಿಗಿ ಬಂದೋಬಸ್ತ್ ಜತೆ ಮರು ಮತದಾನಕ್ಕೆ ಸಿದ್ದತೆ ನಡೆಸಿದೆ.

Leave a Comment

Your email address will not be published. Required fields are marked *