Ad Widget .

ವಿಜಯಪುರ: ರಥೋತ್ಸವದ ವೇಳೆ ರಥದ ಚಕ್ರ ಹಾಯ್ದು ಇಬ್ಬರು ಸಾವು, ಓರ್ವ ಗಂಭೀರ ಗಾಯ

ಸಮಗ್ರ ನ್ಯೂಸ್: ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಆರಾಧ್ಯ ದೈವ ಶ್ರೀ ಸಿದ್ದಲಿಂಗ ಮಹಾರಾಜರ ಕಮರಿಮಠದ ಜಾತ್ರೆ ಇಂದು ನಡೆಯಿತು. ಈ ಜಾತ್ರೆಯ ರಥೋತ್ಸವ ವೇಳೆ ರಥದ ಚಕ್ರ ಹಾಯ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿವೆ.

Ad Widget . Ad Widget .

ಇಂದು ಸಂಜೆ ಗೋಧೋಳಿ ಮುಹೂರ್ತದಲ್ಲಿ ಶ್ರೀ ಸಿದ್ದಲಿಂಗ ಮಹರಾಜರ ರಥೋತ್ಸವ ನಡೆದಿದ್ದು, ಸಾವಿರಾರು ಜನರು ಭಾಗಿಯಾಗಿದ್ದರು. ಜಾತ್ರೆಯಲ್ಲಿನ ನೂಕು ನುಗ್ಗಲಿನಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡ ಮತ್ತೊಬ್ಬನನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೃತರಿಬ್ಬರು ಲಚ್ಯಾಣ ಗ್ರಾಮದವರು ಎಂದು ತಿಳಿದುಬಂದಿದ್ದು, ಗಂಭೀರವಾಗಿ ಗಾಯಗೊಂಡ ಮತ್ತೊಬ್ಬ ಮಹಾರಾಷ್ಟ್ರದ ತಡವಾಳ ಗ್ರಾಮದ ನಿವಾಸಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಭದ್ರತೆ ವಹಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *