Ad Widget .

ಧಾರವಾಡ : ಮೋದಿಯನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಸ್ಥಾನಕ್ಕೇರಿಸಬೇಕು- ಅರವಿಂದ ಬೆಲ್ಲದ

ಸಮಗ್ರ ನ್ಯೂಸ್‌ : ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸಿರುವ ನರೇಂದ್ರ ಮೋದಿ ಅವರನ್ನು ಬೆಂಬಲಿಸುವ ಮುಖಾಂತರ ಮತ್ತೊಮ್ಮೆ ಪ್ರಧಾನ ಮಂತ್ರಿ ಸ್ಥಾನಕ್ಕೇರಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಕರೆ ನೀಡಿದರು.

Ad Widget . Ad Widget .

ಹು-ಧಾ ಪಶ್ಚಿಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆಲಗೇರಿಯಲ್ಲಿ ಶುಕ್ರವಾರ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರ ಪರವಾಗಿ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಮೋದಿ ಅವರು ದೇಶದ ರೈತರು, ಮಹಿಳೆಯರು, ಯುವಕರು, ಕಾರ್ಮಿಕರು ಸೇರಿದಂತೆ ಎಲ್ಲ ವಲಯದಲ್ಲಿನ ಜನರ ಕಲ್ಯಾಣಕ್ಕೆ ಕೋಟಿಗಟ್ಟಲೇ ಆರ್ಥಿಕ ನೆರವು ನೀಡಿದ್ದಾರೆ.

Ad Widget . Ad Widget .

ಬಡ ಮತ್ತು ಮಧ್ಯಮ ವರ್ಗದ ಜನರ ಅನುಕೂಲಕ್ಕಾಗಿ ಶಿಕ್ಷಣ, ಆರೋಗ್ಯ, ವಸತಿ ಕ್ಷೇತ್ರಗಳಲ್ಲಿ ಅನೇಕ ಯೋಜನೆಗಳನ್ನು ರೂಪಿಸಿ ಅನುಷ್ಠಾನ ಮಾಡಿದ್ದಾರೆ. ನರೇಂದ್ರ ಮೋದಿ ನಾಯಕತ್ವದ ಭಾರತ ಸರ್ಕಾರವು 2018ರಲ್ಲಿ ಅನುಷ್ಠಾನಗೊಳಿಸಿದ ಆಯುಷ್ಮಾನ್ ಭಾರತ ಯೋಜನೆ ಅಥವಾ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಡಿ ಅರ್ಹ ಕುಟುಂಬಕ್ಕೆ ವರ್ಷಕ್ಕೆ 5 ಲಕ್ಷ ರೂಪಾಯಿ ಆರ್ಥಿಕ ನೆರವು ಒದಗಿಸಲಾಗುತ್ತಿದೆ. ಅತ್ಯಂತ ಮಹತ್ವದ ಯೋಜನೆಗಳಲ್ಲೊಂದಾದ ಈ ಯೋಜನೆಯು ಅಂದಾಜು 50 ಕೋಟಿ ಜನರನ್ನು ತಲುಪುವ ಗುರಿ ಹೊಂದಿದೆ ಎಂದು ಬೆಲ್ಲದ ಅವರು ವಿವರಿಸಿದರು.

ಪ್ರಹ್ಲಾದ ಜೋಶಿ ಅವರು ತಮ್ಮ ನಾಲ್ಕು ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಿದ್ದು, ವಿಧಿ ವಿಜ್ಞಾನ ವಿಶ್ವವಿದ್ಯಾಲಯ, ಐಐಟಿ, ಐಐಐಟಿಯಂತಹ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಕ್ಷೇತ್ರಕ್ಕೆ ತಂದಿದ್ದಾರೆ. ಸರ್ವ ಸಮಾಜಗಳ ಜನರ ಜೊತೆ ನಿಕಟ ಸಂಪರ್ಕ ಹೊಂದಿರುವ ಪ್ರಹ್ಲಾದ ಜೋಶಿ ಅವರನ್ನು ಈ ಸಲವೂ ಆಶೀರ್ವದಿಸಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.

ಪಾಲಿಕೆ ಸದಸ್ಯೆ ಚಂದ್ರಕಲಾ ಕೊಟಬಾಗಿ, ಮಂಡಲ ಅಧ್ಯಕ್ಷ ಬಸವರಾಜ ಗರಗ, ಮುಖಂಡರಾದ ರುದ್ರಗೌಡ ಪಾಟೀಲ, ಬಸವಂತಯ್ಯ ಗಡಾದವರ, ಶಂಕರ ಕೊಟ್ರಿ, ಮೈಲಾರ ಉಪ್ಪಿನ ಮತ್ತಿತರರು ಉಪಸ್ಥಿತರಿದ್ದರು. ಇಟಿಗಟ್ಟಿ ಗ್ರಾಮದಲ್ಲಿ ಜರುಗಿದ ಸಭೆಯಲ್ಲಿ ಹಿರಿಯರಾದ ಶೇಖಣ್ಣ ನವಲೂರ, ಪುಂಡಲೀಕ ತಳವಾರ, ಗಾಯಕವಾಡ, ಬಸವರಾಜ ಅರವಳದ, ಚನ್ನಬಸು, ಮಹಿಳೆಯರು ಸೇರಿದಂತೆ ನೂರಾರು ಜನರಿದ್ದರು.

Leave a Comment

Your email address will not be published. Required fields are marked *