Ad Widget .

ಕರಾವಳಿಗರೇ ಎಚ್ಚರ…| ಮೇ. 2ರವರೆಗೆ ಬೀಸಲಿದೆ ಬಿಸಿಗಾಳಿ

ಸಮಗ್ರ ನ್ಯೂಸ್: ಮೇ 2ರ ತನಕ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆಯ ಎಚ್ಚರಿಸಿದೆ.

Ad Widget . Ad Widget .

ದಕ್ಷಿಣ ಕನ್ನಡದಲ್ಲಿ ಇನ್ನೂ ನಾಲ್ಕು ದಿನ ಬಿಸಿ ವಾತಾವರಣ ಮುಂದುವರಿಯಲಿದೆ. ರಾಜ್ಯದ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Ad Widget . Ad Widget .

ದಕ್ಷಿಣ ಕನ್ನಡದ ಕೆಲವು ಪ್ರದೇಶಗಳಲ್ಲಿ ಮಾತ್ರ ಎಪ್ರಿಲ್‌ನಲ್ಲಿ ಒಂದೆರಡು ಸಾರಿ ಮಳೆ ಸುರಿದಿದೆ. ಕೆಲವು ಪ್ರದೇಶಗಳಲ್ಲಿ ಕಳೆದ ನವೆಂಬರ್‌ನಲ್ಲಿ ಕಾಣೆಯಾದ ಮಳೆ ಮತ್ತೆ ಕಾಣಿಸಿಕೊಂಡಿಲ್ಲ. ಹೀಗಾಗಿ ವಾತಾವರಣ ಬಿಸಿಯಾಗಿಯೇ ಇದೆ. ಮಾರ್ಚ್ ಆರಂಭದಿಂದಲೇ ಬಿಸಿಲ ಝಳ ತೀವ್ರಗೊಂಡಿತ್ತು.

ಸೆಖೆಯಿಂದಾಗಿ ಹಿರಿಯ ನಾಗರಿಕರು ತೀವ್ರ ಸಮಸ್ಯೆ ಎದುರಿ ಸುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ಮತ ಚಲಾಯಿಸಲು ಆಗಮಿಸಿದ ಹಿರಿಯ ನಾಗರಿಕರು ಕಷ್ಟ ಅನುಭವಿಸಿದ್ದರು. ಮಂಗಳೂರಿನಲ್ಲಿ ಸೋಮವಾರ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಇತ್ತು. ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ. ಮುಂದಿನ 4 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ. ಈಗಾಗಲೇ ಅತಿಯಾದ ತಾಪಮಾನದಿಂದ ಸಮಸ್ಯೆ ಎದುರಿಸಿದವರು ಇನ್ನೂ ಕೆಲವು ದಿನಗಳ ಕಾಲನ ಸಮಸ್ಯೆ ಎದುರಿಸುವಂತಾಗಿದೆ.

Leave a Comment

Your email address will not be published. Required fields are marked *