Ad Widget .

ಪಶುಸಂಗೋಪನಾ ಮತ್ತು ಹೈನುಗಾರಿಕೆಯಲ್ಲಿ ಉದ್ಯೋಗವಿದೆ, ಉತ್ತಮ ಸಂಬಳ ಕೂಡ!

ಸಮಗ್ರ ಉದ್ಯೋಗ: ಪಶುಸಂಗೋಪನಾ ಮತ್ತು ಹೈನುಗಾರಿಕೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4 ಕನ್ಸಲ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 6 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನವದೆಹಲಿ & ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

Ad Widget . Ad Widget .

ವಯೋಮಿತಿ:
ಪಶುಸಂಗೋಪನಾ ಮತ್ತು ಹೈನುಗಾರಿಕೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 30, 2024ಕ್ಕೆ ಗರಿಷ್ಠ 64 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

Ad Widget . Ad Widget .

ವೇತನ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಅವರ ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ.

ಉದ್ಯೋಗದ ಸ್ಥಳ:
ನವದೆಹಲಿ
ಬೆಂಗಳೂರು

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಎಸ್ಟಾಬ್ಲಿಷ್​ಮೆಂಟ್​ (Hqrs.) ವಿಭಾಗ
ಪಶುಸಂಗೋಪನಾ ಮತ್ತು ಹೈನುಗಾರಿಕೆ ಇಲಾಖೆ
ಕೊಠಡಿ ಸಂಖ್ಯೆ 435-ಎ
ಕೃಷಿ ಭವನ
ನವದೆಹಲಿ -110001

Leave a Comment

Your email address will not be published. Required fields are marked *