ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆ; ಕೊಚ್ಚಿ ಹೋದ ಮನೆಗಳು, ರಸ್ತೆಗಳಿಗೂ ಹಾನಿ

ಸಮಗ್ರ ನ್ಯೂಸ್‌ : ಜಮ್ಮು ಮತ್ತು ಕಾಶ್ಮೀರದ ವಿವಿಧ ಪ್ರದೇಶಗಳಲ್ಲಿ ಕಳೆದ 48 ಗಂಟೆಗಳಿಂದ ಧಾರಕಾರ ಮಳೆಯಾಗುತ್ತಿದ್ದು, ಪೂಂಚ್‌ನ ಮಂಡಿ ಪ್ರದೇಶದಲ್ಲಿ ಧಾರಾಕಾರ ಮಳೆಯಿಂದ ಭೂಕುಸಿತ ಉಂಟಾಗಿ ಹಲವಾರು ಮನೆಗಳು ಹಾನಿಗೊಳಗಾಗಿವೆ.

Ad Widget ... ..

ಪೂಂಚ್ ಮತ್ತು ಉತ್ತರ ಕಾಶ್ಮೀರದ ಭಾಗಗಳಲ್ಲಿ ಸುರಿದ ಮಳೆಯಿಂದಾಗಿ ಹಠಾತ್ ಪ್ರವಾಹ ಉಂಟಾಗಿದೆ. ಪರಿಣಾಮ 8 ರಿಂದ 10 ಕಟ್ಟಡಗಳು ಮತ್ತು ರಸ್ತೆಗಳಿಗೆ ಹಾನಿಯಾಗಿದೆ.

Ad Widget

ಈ ಸಂಬಂಧ ಸ್ಥಳೀಯ ನಿವಾಸಿ ಅಶ್ಫಾಕ್ ಹುಸೇನ್ ಪ್ರತಿಕ್ರಿಯಿಸಿ, ಭಾರೀ ಮಳೆಯಿಂದಾಗಿ 8 ರಿಂದ 10 ಮನೆಗಳಿಗೆ ಹಾನಿಯಾಗಿದೆ. ಕೆಲವು ಮನೆಗಳು ನೀರಿನಲ್ಲಿ ಕೊಚ್ಚಿ ಹೋದರೆ, ಇನ್ನೂ ಕೆಲವು ಭಾಗಶಃ ಹಾನಿಯಾಗಿದೆ. ಇದರ ಜೊತೆಗೆ ರಸ್ತೆಗಳು ಕೂಡ ಹಾನಿಗೊಳಗಾಗಿವೆ ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *