Ad Widget .

ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ವಿಚಾರವಾಗಿ ಗಲಾಟೆ|ಚಾಕು ಇರಿದು ಮಗಳನ್ನೆ ಕೊಂದ ತಾಯಿ

ಸಮಗ್ರ ನ್ಯೂಸ್: ತಾಯಿ ಮತ್ತು ಮಗಳ ನಡುವೆ ಎಷ್ಟೆ ಜಗಳ ಬಂದರು ಸ್ವಲ್ಪ ಸಮಯದಲ್ಲಿ ಅದು ಸರಿಯಾಗುವಂತಹದು, ಆದರೆ ಇಲ್ಲಿ ಇಬ್ಬರ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಈ ಘಟನೆ ನಡೆದಿದ್ದು ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ವಿಚಾರವಾಗಿ ಇಬ್ಬರ ನಡುವೆ ಜಗಳ ಆರಂಭವಾಗಿದ್ದು, ಪರಸ್ಪರ ಚಾಕು ಇರಿದುಕೊಂಡಿದ್ದರಿಂದ ಮಗಳು ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget . Ad Widget .

ಮಗಳು ಸಾಹಿತಿ(18) ಕೊಲೆಯಾದ ಯುವತಿ. ಪದ್ಮಜಾ ಮಗಳನ್ನು ಕೊಲೆಗೈದ ತಾಯಿ. ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಗಳಿಸಿದ್ದಕ್ಕೆ ಮಗಳನ್ನು ತಾಯಿ ಪ್ರಶ್ನೆ ಮಾಡಿದ್ದಾಳೆ. ಈ ವಿಚಾರಕ್ಕೆ ತಾಯಿ ಮತ್ತು ಮಗಳ ನಡುವೆ ನಿತ್ಯ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಸೋಮವಾರ ಇದೇ ವಿಚಾರಕ್ಕೆ ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯಗೊಂಡಿರುವ ಶಂಕೆ ವ್ಯಕ್ತವಾಗಿದೆ. ಮಗಳು ಮೃತಪಟ್ಟರೆ ತಾಯಿಗೆ ಗಂಭೀರ ಗಾಯಗಳಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *