April 2024

ಬಿಜೆಪಿ ಅಧಿಕಾರಕ್ಕೆ ಬಂದ್ರೆ‌ ಮಂಗಳಸೂತ್ರ ಮಾತ್ರವಲ್ಲ ಗಂಡ ಮಕ್ಳನ್ನೂ ಕಳೆದುಕೊಳ್ಳಬೇಕಾಗುತ್ತೆ – ಯತೀಂದ್ರ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದ್ರೆ ಎಲ್ಲಾ ಮಹಿಳೆಯರ ಮಂಗಳಸೂತ್ರ ಮಾತ್ರವಲ್ಲ, ತಮ್ಮ ಗಂಡಂದಿರು, ಮಕ್ಕಳನ್ನ ಕಳೆದುಕೊಳ್ಳುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದರು. ಕಾಂಗ್ರೆಸ್ ಗೆದ್ದರೆ ನಿಮ್ಮ ಮಂಗಳಸೂತ್ರ ಕಿತ್ತು ಮುಸ್ಲಿಮರಿಗೆ ಕೊಡುತ್ತದೆ ಎಂದು ಪ್ರಧಾನಿ ಮೋದಿ ಹೇಳಿಕೆ ಕುರಿತು ಮೈಸೂರಿನಲ್ಲಿ ಸೋಮವಾರ ಖಾರವಾಗಿ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಕೋಮುಗಲಭೆ, ದೋಂಬಿ ಮಾಡಿ ಅವರ ಮಕ್ಕಳನ್ನು ಸಾಯುವಂತೆ ಮಾಡುತ್ತದೆ. ಒಬ್ಬರನ್ನೊಬ್ಬರು ಬಡಿದಾಡುವಂತೆ ಮಾಡುತ್ತಾರೆ. ಮಕ್ಕಳನ್ನು ಕೋಮುಗಲಭೆಯಲ್ಲಿ […]

ಬಿಜೆಪಿ ಅಧಿಕಾರಕ್ಕೆ ಬಂದ್ರೆ‌ ಮಂಗಳಸೂತ್ರ ಮಾತ್ರವಲ್ಲ ಗಂಡ ಮಕ್ಳನ್ನೂ ಕಳೆದುಕೊಳ್ಳಬೇಕಾಗುತ್ತೆ – ಯತೀಂದ್ರ ಸಿದ್ದರಾಮಯ್ಯ Read More »

ಕಮಲ‌ ಬಿಟ್ಟು ಕೈ ಹಿಡಿಯಲು ತೀರ್ಮಾನಿಸಿದ ಕೆ.ಪಿ ನಂಜುಂಡಿ| ವಿಧಾನ ಪರಿಷತ್‌ ಸದಸ್ಯತ್ವಕ್ಕೆ ರಾಜೀನಾಮೆ

ಸಮಗ್ರ ನ್ಯೂಸ್: ವಿಧಾನಪರಿಷತ್ ನ​ ಬಿಜೆಪಿ ಸದಸ್ಯ ಕೆ.ಪಿ ನಂಜುಂಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಲೋಕಸಭಾ ಚುನಾವಣಾ ಹೊಸ್ತಿಲಿನಲ್ಲಿ ಬಿಜೆಪಿ ಮತ್ತೊಂದು ಆಘಾತ ಎದುರಾಗಿದೆ. ಅವರು ಇಂದು(ಎ.23) ವಿಧಾನ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿಗೆ ಅವರ ಹುಬ್ಬಳ್ಳಿಯ ಮನೆಗೆ ತೆರಳಿ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ. ರಾಜೀನಾಮೆ ನೀಡಿದ ನಂತರ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಿರ್ಲಕ್ಷ್ಯಕ್ಕೊಳಗಾದ‌ ಕಾಯಕ ಸಮಾಜದ ಏಳಿಗೆಗೆ ರಾಜಕೀಯಕ್ಕೆ ಬಂದೆ. ಕಾಯಕ ಸಮಾಜ ಉಳಿಸಿಕೊಳ್ಳುತ್ತಾರೆ ಎನ್ನುವ ಕಾರಣಕ್ಕೆ ಬಿಜೆಪಿಗೆ ಬಂದೆ. ಆದರೆ, ಪಕ್ಷದ

ಕಮಲ‌ ಬಿಟ್ಟು ಕೈ ಹಿಡಿಯಲು ತೀರ್ಮಾನಿಸಿದ ಕೆ.ಪಿ ನಂಜುಂಡಿ| ವಿಧಾನ ಪರಿಷತ್‌ ಸದಸ್ಯತ್ವಕ್ಕೆ ರಾಜೀನಾಮೆ Read More »

ಕೇರಳದಲ್ಲಿ ದೃಢಪಟ್ಟ ಹಕ್ಕಿಜ್ವರ| ಕರಾವಳಿಯಲ್ಲಿ ಹೈ ಅಲರ್ಟ್

ಸಮಗ್ರ ನ್ಯೂಸ್: ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಹಕ್ಕಿ ಜ್ವರ ದೃಢಪಟ್ಟ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮಂಗಳೂರಿನಿಂದ ಸುಮಾರು 400 ಕಿಲೋಮೀಟರ್ ದೂರದಲ್ಲಿರುವ ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಎರಡು ಹಕ್ಕಿ ಜ್ವರ ದೃಢಪಟ್ಟಿದೆ. ಇದೀಗ ಕೋಳಿ ಉತ್ಪನ್ನಗಳನ್ನು ಕೇರಳಕ್ಕೆ ತಲುಪಿಸಿದ ನಂತರ ದಕ್ಷಿಣ ಕನ್ನಡಕ್ಕೆ ಹಿಂದಿರುಗುವ ವಾಹನಗಳನ್ನು ಸ್ಯಾನಿಸೈಟಸ್ ಮಾಡಲಾಗುತ್ತಿದೆ. ಈ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಜನ ಜಾಗರೂಕರಾಗಿರುವಂತೆ ಸೂಚಿಸಲಾಗಿದೆ. ಹೆಚ್​​5ಎನ್​​1 ವೈರಸ್​​ನಿಂದ ಹರಡುವ ಸೋಂಕನ್ನು ಹಕ್ಕಿ ಜ್ವರ ಎಂದು

ಕೇರಳದಲ್ಲಿ ದೃಢಪಟ್ಟ ಹಕ್ಕಿಜ್ವರ| ಕರಾವಳಿಯಲ್ಲಿ ಹೈ ಅಲರ್ಟ್ Read More »

ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶ| ಕರ್ನಾಟಕದ ಅರ್ಜಿಗೆ ಕೊನೆಗೂ ಮನ್ನಣೆ; ಕೇಂದ್ರ ಸರ್ಕಾರಕ್ಕೆ ಮುಖಭಂಗ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಬರ ನಿರ್ವಹಣೆಗಾಗಿ ಹಣಕಾಸು ನೆರವು ನೀಡುವ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವಿನ ಜಟಾಪಟಿ ಮತ್ತೊಂದು ಮಜಲು ತಲುಪಿದ್ದು, ನೆರವು ನೀಡುವುದರ ಕುರಿತು ಒಂದು ವಾರದಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ವಾಗ್ದಾನ ನೀಡಿದೆ. ಕೋರ್ಟ್‌ನಲ್ಲಿ ವಿಚಾರಣೆ ಕಾಲಕ್ಕೆ, ‘ಕರ್ನಾಟಕದಲ್ಲಿ ಬರ ನಿರ್ವಹಣೆಗೆ ಹಣಕಾಸು ನೆರವು ನೀಡುವಂತೆ ರಾಜ್ಯ ಸರ್ಕಾರ ಮುಂದಿಟ್ಟಿರುವ ಬೇಡಿಕೆಯನ್ನು ಈಡೇರಿಸಲು ಚುನಾವಣಾ ಆಯೋಗ ಅನುಮತಿ ನೀಡಿದೆ’ ಎಂದು ಕೇಂದ್ರ ಮಾಹಿತಿ ನೀಡಿದೆ. ‘ವಾರದೊಳಗೆ

ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶ| ಕರ್ನಾಟಕದ ಅರ್ಜಿಗೆ ಕೊನೆಗೂ ಮನ್ನಣೆ; ಕೇಂದ್ರ ಸರ್ಕಾರಕ್ಕೆ ಮುಖಭಂಗ Read More »

ನೇಹಾ ಹತ್ಯೆ ಆರೋಪಿಗೆ 90 ದಿನಗಳಲ್ಲೇ ಗಲ್ಲು ಶಿಕ್ಷೆ: ಸುರ್ಜೇವಾಲ

ಸಮಗ್ರ ನ್ಯೂಸ್: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆಯನ್ನು ಖಂಡಿಸುತ್ತೇನೆ. ಪ್ರಕರಣದ ತನಿಖೆ ನಡೆಸಿ ಆರೋಪಿಗೆ ಗಲ್ಲು ಶಿಕ್ಷೆ ಕೊಡಿಸುವುದಾಗಿ ಎಐಸಿಸಿ ಕಾರ್ಯದರ್ಶಿ ರಣದೀಪ್‌ ಸುರ್ಜೇವಾಲ ಭರವಸೆ ನೀಡಿದ್ದಾರೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದ ತನಿಖೆ 90 ದಿನಗಳಲ್ಲಿ ಪೂರ್ಣಗೊಳಿಸಿ ಆರೋಪಿಗೆ ಗಲ್ಲು ಶಿಕ್ಷೆ ನೀಡುವ ಮೂಲಕ ನೇಹಾ ಕುಟುಂಬಕ್ಕೆ ನ್ಯಾಯ ಒದಗಿಸಲಾಗುವುದು. ಆದರೆ ಈ ಪ್ರಕರಣವನ್ನು ರಾಜಕೀಯಗೊಳಿಸುವುದು ಸರಿಯಲ್ಲ ಎಂದರು. ಈ ಹಿಂದೆ ಪರೇಶ್‌ ಮೇಸ್ತ ಸಾವಿನ ಪ್ರಕರಣವನ್ನೂ ಬಿಜೆಪಿಯವರು ರಾಜಕೀಯಗೊಳಿಸಿದ್ದರು. ಕೊನೆಗೆ ಅದು

ನೇಹಾ ಹತ್ಯೆ ಆರೋಪಿಗೆ 90 ದಿನಗಳಲ್ಲೇ ಗಲ್ಲು ಶಿಕ್ಷೆ: ಸುರ್ಜೇವಾಲ Read More »

ಮೂಡಿಗೆರೆ: ಹುಲಿ ಹತ್ಯೆ| ಇಬ್ಬರ ಬಂಧನ

ಸಮಗ್ರ ನ್ಯೂಸ್: ಹುಲಿಯೊಂದನ್ನು ಹತ್ಯೆ ಮಾಡಿರುವ ಆರೋಪದ ಮೇಲೆ ಇಬ್ಬರನ್ನು ಬಂಧಿಸಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ತತ್ಕೊಳ ಮೀಸಲು ಅರಣ್ಯ ಪ್ರದೇಶದಲ್ಲಿ ನಡೆದಿದೆ. ಮೂಡಿಗೆರೆ ತಾಲ್ಲೂಕು ತಳವಾರ ಗ್ರಾಮದ ದೀಕ್ಷಿತ್ (31), ಕಳಸ ತಾಲ್ಲೂಕು ಮರಸಣಿಗೆ ಗ್ರಾಮದ ಆದಿತ್ಯ (19) ಬಂಧಿತ ಆರೋಪಿಗಳು. ಇನ್ನು ಹಲವರು ಹುಲಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದು ಉಳಿದವರ ಬಂಧನಕ್ಕೆ ಅರಣ್ಯ ಅಧಿಕಾರಿಗಳು ಬಲೆ ಬೀಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಅರಣ್ಯ

ಮೂಡಿಗೆರೆ: ಹುಲಿ ಹತ್ಯೆ| ಇಬ್ಬರ ಬಂಧನ Read More »

ಹಾಸನ: ಉಚಿತ ಬಸ್ ಟಿಕೆಟ್ ಹಾರದಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಸನ್ಮಾನ

ಸಮಗ್ರ ನ್ಯೂಸ್: ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಶಕ್ತಿ ಯೋಜನೆಯು ಒಂದು. ಇದರಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಯಿತ್ತು. ಈ ಶಕ್ತಿ ಯೋಜನೆಯ ಸೌಲಭ್ಯ ಪಡೆಯುತ್ತಿರುವ ವಿದ್ಯಾರ್ಥಿನಿಯೊಬ್ಬರು, ಉಚಿತ ಪ್ರಯಾಣದ ಟಿಕೆಟ್‌ಗಳಿಂದ ಮಾಡಿದ ಹಾರದಿಂದ ಸಿಎಂ ಸಿದ್ದರಾಮಯ್ಯ ಅವರನ್ನು ವಿಭಿನ್ನ ರೀತಿಯಲ್ಲಿ ಸನ್ಮಾನಿಸಿರುವುದು ಗಮನ ಸೆಳೆದಿದೆ. ಅರಸೀಕೆರೆಯ ಮೊದಲ ವರ್ಷದ ಕಾನೂನು ವಿದ್ಯಾರ್ಥಿನಿ ಎಂ.ಬಿ. ಜಯಶ್ರೀ, ತಾವು ಉಚಿತವಾಗಿ ಪ್ರಯಾಣಿಸಿದ ಫ್ರೀ ಬಸ್ ಟಿಕೆಟ್‌ಗಳಿಂದ ಮಾಡಿದ್ದ ಹಾರವನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಹಾಕಿ ಗೌರವಿಸಿದ್ದಾರೆ. ಹಾಸನ ಕಾಂಗ್ರೆಸ್‌

ಹಾಸನ: ಉಚಿತ ಬಸ್ ಟಿಕೆಟ್ ಹಾರದಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಸನ್ಮಾನ Read More »

ಪುತ್ತೂರು:ಸಂತೋಷದ ವೈವಿಧ್ಯಮಯ ಮಿನುಗುವ ಚಿನ್ನದ ಹಬ್ಬ!ಮುಳಿಯ ಚಿನ್ನೋತ್ಸವಕ್ಕೆ ಚಾಲನೆ

ಸಮಗ್ರ ನ್ಯೂಸ್: 24 ವರ್ಷಗಳ ಹಿಂದೆ ವಜ್ರರತ್ನಗಳ ಪ್ರದರ್ಶನ ಹಬ್ಬದ ಮೂಲಕ ಗ್ರಾಹಕರಿಗೆ ಹತ್ತಿರವಾದ ಪ್ರಸಿದ್ದ ಚಿನ್ನಾಭರಣ ಮಳಿಗೆ ಪುತ್ತೂರಿನ ಮುಳಿಯ ಜ್ಯುವೆಲ್ಸ್ ನಲ್ಲಿ ಪ್ರತಿ ವರ್ಷ ನಡೆಯುವ ಚಿನ್ನೋತ್ಸವಕ್ಕೆ ಈ ಬಾರಿ ಚಿನ್ನದ ಹಬ್ಬ “ಮುಳಿಯ ಚಿನ್ನೋತ್ಸವ” ಕ್ಕೆ ಎ. 22ರಂದು ಚಾಲನೆ ನೀಡಲಾಯಿತು. ಮೇ 20ರ ತನಕ ನಡೆಯುವ ಈ ಚಿನ್ನೋತ್ಸವವನ್ನು ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಆಫ್ ಸಯನ್ಸ್ನ ಪ್ರೊ. ಡಾ. ಸೌಮ್ಯ ಅವರು ಉದ್ಘಾಟಿಸಿ ಚಾಲನೆ ನೀಡಿದರು. ಬಳಿಕ ಚಿನ್ನಾಭರಣದ ಹೊಸ ವಿನ್ಯಾಸಗಳನ್ನು

ಪುತ್ತೂರು:ಸಂತೋಷದ ವೈವಿಧ್ಯಮಯ ಮಿನುಗುವ ಚಿನ್ನದ ಹಬ್ಬ!ಮುಳಿಯ ಚಿನ್ನೋತ್ಸವಕ್ಕೆ ಚಾಲನೆ Read More »

ಕೊಟ್ಟಿಗೆಹಾರ: ಪವರ್ ಲೈನ್ ತುಳಿದು ಹಸು ಸಾವು

ಸಮಗ್ರ ನ್ಯೂಸ್: ಎ. 21ರಂದು ಸುರಿದ ಬಾರಿ ಗಾಳಿ ಮಳೆಗೆ ಪವರ್ ಲೈನ್ ಮೇಲೆ ಮರ ಬಿದ್ದು ಪವರ್ ಲೈನ್ ತುಳಿದು ಹಸು ಸಾವನಪ್ಪಿದ ಘಟನೆ ಕೊಟ್ಟಿಗೆಹಾರದ ಬಿ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಹಸು ಬಿ ಹೊಸಳ್ಳಿ ಗ್ರಾಮದ ಗಣಪ ಎಂಬುವರಿಗೆ ಸೇರಿದ್ದಾಗಿದ್ದು, ಈ ಮಾರ್ಗದಲ್ಲಿ ಜನರು ಯಾರು ಹೋಗದಿರುವುದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಕೊಟ್ಟಿಗೆಹಾರ: ಪವರ್ ಲೈನ್ ತುಳಿದು ಹಸು ಸಾವು Read More »

ಆಕಸ್ಮಿಕವಾಗಿ ಕಾರು ಹರಿದು ಸ್ಥಳದಲ್ಲೇ ಮಗು ಸಾವು

ಸಮಗ್ರ ನ್ಯೂಸ್: ಆಕಸ್ಮಿಕವಾಗಿ ಮಗುವಿನ ಮೇಲೆ ಕಾರು ಹರಿದು ಒಂದೂವರೆ ವರ್ಷದ ಮಗು ಮೃತಪಟ್ಟಿರುವ ಘಟನೆ ಎಚ್.ಎಸ್.ಆರ್‌. ಲೇಔಟ್‌ನ ಆಗರದಲ್ಲಿ ನಡೆದಿದೆ. ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಒಂದೂವರೆ ವರ್ಷದ ಶೈಜಾ ಜನ್ನತ್ ಮೃತ ಮಗು ಕಾರಿನ ಡೋರ್ ಬಳಿಯೇ ನಿಂತಿತ್ತು, ಆದರೆ ಮಗುವಿನ ತಂದೆ ನೋಡದೆ ಕಾರು ಚಲಾಯಿಸಿದ್ದರಿಂದ ಈ ದುರಂತ ಸಂಭವಿಸಿದೆ. ಸಂಬಂಧಿಗಳ ಮದುವೆ ಇದ್ದ ಕಾರಣ ಮಗುವಿನ ಕುಟುಂಬಸ್ಥರು ಚನ್ನಪಟ್ಟಣಕ್ಕೆ ಹೋಗಿದ್ದರು. ರಾತ್ರಿ ಹಿಂದಿರುಗಿದಾಗ ಮಗುವಿನ ತಂದೆ ಲಗೇಜ್‌ ತೆಗೆದು ಮನೆಯೊಳಗೆ

ಆಕಸ್ಮಿಕವಾಗಿ ಕಾರು ಹರಿದು ಸ್ಥಳದಲ್ಲೇ ಮಗು ಸಾವು Read More »