April 2024

ಇಂದು ಮೊದಲ ಹಂತದ ಮತದಾನ/ ಪಶ್ಚಿಮ ಬಂಗಾಳದಲ್ಲಿ ಮತದಾನ ಕೇಂದ್ರದ ಮೇಲೆ ಕಲ್ಲು ತೂರಾಟ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದ್ದು, ಮೊದಲ ದಿನವೇ ಸಮಸ್ಯೆಗಳು ಎದುರಾಗಿದೆ. ಪಶ್ಚಿಮ ಬಂಗಾಳದಲ್ಲಿಅಹಿತಕರ ಘಟನೆಯೊಂದು ನಡೆದಿದ್ದು, ಕೂಚ್‍ಬೆಹಾರ್‍ನ ಚಂದ್ಮರಿ ಗ್ರಾಮದಲ್ಲಿ ಕಲ್ಲು ತೂರಾಟ ನಡೆಸಿ ಮತದಾನ ಮಾಡಲು ಅಡ್ಡಿ ಪಡಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪಶ್ಚಿಮ ಬಂಗಾಳದ ಕೂಚ್ ಬೆಹಾರ್, ಅಲಿಪುರ್ದವಾರ್ಸ್ ಮತ್ತು ಜನ್ಮಗುರಿ ಲೋಕಸಭಾ ಕ್ಷೇತ್ರಗಳಲ್ಲಿ ಬೆಳಗ್ಗೆಯಿಂದ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಆದರೆ ಇದೀಗ ಕೂಚ್‍ಬೆಹಾರ್ ಕ್ಷೇತ್ರದ ಈ ಕಲ್ಲು ತೂರಾಟ ನಡೆಸಲಾಗಿದೆ ಎಂದು ವರದಿಯಾಗಿದೆ. ಬೆಳಗ್ಗೆ 7 ಗಂಟೆಗೆ […]

ಇಂದು ಮೊದಲ ಹಂತದ ಮತದಾನ/ ಪಶ್ಚಿಮ ಬಂಗಾಳದಲ್ಲಿ ಮತದಾನ ಕೇಂದ್ರದ ಮೇಲೆ ಕಲ್ಲು ತೂರಾಟ Read More »

ಬಿಬಿಎಂಪಿಯಲ್ಲಿ 11 ಸಾವಿರಕ್ಕೂ ಅಧಿಕ ಜಾಬ್ ಆಫರ್! ಯಾರಿಗುಂಟು ಯಾರಿಗಿಲ್ಲ? ಅಪ್ಲೈ ಮಾಡಿ ಬೇಗ

ಸಮಗ್ರ ಉದ್ಯೋಗ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಒಟ್ಟು 11,307 ಪೌರಕಾರ್ಮಿಕ- ಗ್ರೂಪ್​ ಡಿ(Group D) ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಆಸಕ್ತ ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಿ. ಮೇ 15, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್/ಪೋಸ್ಟ್​​ ​ ಮೂಲಕ ಅರ್ಜಿ ಹಾಕಿ.

ಬಿಬಿಎಂಪಿಯಲ್ಲಿ 11 ಸಾವಿರಕ್ಕೂ ಅಧಿಕ ಜಾಬ್ ಆಫರ್! ಯಾರಿಗುಂಟು ಯಾರಿಗಿಲ್ಲ? ಅಪ್ಲೈ ಮಾಡಿ ಬೇಗ Read More »

ಬೆಂಗಳೂರಿನಲ್ಲಿ ಜಾಬ್ ಹುಡುಕುತ್ತಾ ಇದ್ದೀರಾ? ಹಾಗಾದ್ರೆ ಇಲ್ಲಿದೆ ಅವಕಾಶ!

ಸಮಗ್ರ ಉದ್ಯೋಗ: ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಸ್ಪೀಚ್​ ಥೆರಪಿಸ್ಟ್ ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 28, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆಫ್​​​​ಲೈನ್ ಮೂಲಕ ಅಪ್ಲೈ ಮಾಡಬೇಕು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಶೈಕ್ಷಣಿಕ ಅರ್ಹತೆ:ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ

ಬೆಂಗಳೂರಿನಲ್ಲಿ ಜಾಬ್ ಹುಡುಕುತ್ತಾ ಇದ್ದೀರಾ? ಹಾಗಾದ್ರೆ ಇಲ್ಲಿದೆ ಅವಕಾಶ! Read More »

ಹುಬ್ಬಳ್ಳಿ: ಕಾಲೇಜ್‌ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿಗೆ ಚೂರಿಯಿಂದ ಇರಿದು ಕೊಲೆ -ಯುವಕ ಬಂಧನ

ಸಮಗ್ರ ನ್ಯೂಸ್‌ : ಯುವಕನೊಬ್ಬ ವಿದ್ಯಾರ್ಥಿನಿಯನ್ನು ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲೇ ಕೊಲೆ ಮಾಡಿರುವ ಘಟನೆ ನಡೆದಿದೆ. ಪಾಲಿಕೆಯ ಕಾಂಗ್ರೆಸ್‌ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಕೊಲೆಯಾದ ವಿದ್ಯಾರ್ಥಿನಿ. ಅದೇ ಕಾಲೇಜಿನ ವಿದ್ಯಾರ್ಥಿ ಫಯಾಜ್ 9 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಪ್ರಥಮ ವರ್ಷದ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ನೇಹಾಗೆ ಕ್ಯಾಂಪಸ್‌ನಲ್ಲೇ 9 ಬಾರಿ ಚಾಕು ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ನೇಹಾಳನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಆಕೆ ಮೃತಪಟ್ಟಿದ್ದಾಳೆ. ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿಯಾಗಿದ್ದ ಫಯಾಜ್

ಹುಬ್ಬಳ್ಳಿ: ಕಾಲೇಜ್‌ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿಗೆ ಚೂರಿಯಿಂದ ಇರಿದು ಕೊಲೆ -ಯುವಕ ಬಂಧನ Read More »

ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಬೆಳ್ಳಂಬೆಳಗೆ ಐಟಿ ಶಾಕ್

ಸಮಗ್ರ ನ್ಯೂಸ್: ಚುನಾವಣೆ ಹೊಸ್ತಿಲಲ್ಲಿರುವಾಗಲೆ ಇಂದು ಬೆಳ್ಳಂಬೆಳಗೆ ಅಧಿಕಾರಿಗಳಿಗೆ ಐಟಿ ಶಾಕ್ ಕೊಟ್ಟಿದೆ. ಬೆಂಗಳೂರಿನ ಹತ್ತಕ್ಕೂ ಹೆಚ್ಚು ಕಡೆ ಬೆಳಗ್ಗೆ ಐಟಿ ಅಧಿಕಾರಿಗಳು ಉದ್ಯಮಿಗಳ ಮನೆ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಚುನಾವಣೆಗೆ ಹಣ ಸಾಗಾಟ ಆರೋಪ ಹಿನ್ನೆಲೆಯಲ್ಲಿ ದಾಳಿ ಮಾಡಿರುವ ಸಾಧ್ಯತೆ ಇದೆ. ಇನ್ನೂ ಕಾಂಗ್ರೆಸ್ ಪಕ್ಷದ ಜತೆ ಗರುತಿಸಿಕೊಂಡಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮನೆ ಮೇಲೆ ಐಟಿ ಅಧಿಕಾರಿಗಳು ನೆಲಮಂಗಲದಲ್ಲಿ ಕೆಲವು ದಿನಗಳ ಹಿಂದೆ ದಾಳಿ ಮಾಡಿದ್ದರು. ಡಿ.ಕೆ ಶಿವಕುಮಾರ್ ಹಾಗೂ

ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಬೆಳ್ಳಂಬೆಳಗೆ ಐಟಿ ಶಾಕ್ Read More »

ನಗರಸಭೆ ಉಪಾಧ್ಯಕ್ಷೆಯ ಮಗ ಸೇರಿ ಒಂದೇ ಕುಟುಂಬದ 4 ಮಂದಿಯ ಬರ್ಬರ ಹತ್ಯೆ

ಸಮಗ್ರ ನ್ಯೂಸ್: ಒಂದೇ ಕುಟುಂಬದ ನಾಲ್ಕು ಮಂದಿಯನ್ನು ಮನೆಯಲ್ಲಿ ಮಲಗಿದ ಸಂದರ್ಭದಲ್ಲಿ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ಗದಗದ ದಾಸರ ಓಣಿಯಲ್ಲಿ ತಡರಾತ್ರಿ ನಡೆದಿದೆ. ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಯಾದವರು. ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್​ ಅವರ ಮದುವೆ

ನಗರಸಭೆ ಉಪಾಧ್ಯಕ್ಷೆಯ ಮಗ ಸೇರಿ ಒಂದೇ ಕುಟುಂಬದ 4 ಮಂದಿಯ ಬರ್ಬರ ಹತ್ಯೆ Read More »

ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ, ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: Women and Child Development Department Kolar ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆ ಪ್ರಕಾರ, ಒಟ್ಟು 513 ಅಂಗನವಾಡಿ ಕಾರ್ಯಕರ್ತೆ & ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್​ 29, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅರ್ಜಿ ಕಳುಹಿಸಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿದ್ರೆ ಈಗಲೇ ಅಪ್ಲೈ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕೋಲಾರ​ದಲ್ಲಿ ಪೋಸ್ಟಿಂಗ್

ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ, ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಿ Read More »

ಹವಾಮಾನ ವರದಿ| ರಾಜ್ಯಾದ್ಯಂತ ೪-೫ ದಿನ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಮುಂದಿನ ನಾಲ್ಕೈದು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದೆ. ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಚುರುಕಾಗಿ ಗುರುವಾರ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿದೆ. ಏಪ್ರಿಲ್ 22 ರವರೆಗೆ ಮಳೆಯಾಗಲಿದ್ದು, 30 ರಿಂದ 40 ಕಿಲೋಮೀಟರ್ ವೇಗದ ಗಾಳಿ ಬೀಸಲಿದೆ. ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ

ಹವಾಮಾನ ವರದಿ| ರಾಜ್ಯಾದ್ಯಂತ ೪-೫ ದಿನ ಮಳೆ ಸಾಧ್ಯತೆ Read More »

ಏರುತ್ತಿರುವ ಬಿಸಿಲ ತಾಪ/ ಗುಜರಾತ್ ಪೊಲೀಸರಿಗೆ ಸಿಕ್ತು ಕೂಲ್ ಕೂಲ್ ಹೆಲ್ಮೆಟ್

ಸಮಗ್ರ ನ್ಯೂಸ್: ದೇಶದಲ್ಲಿ ಬಿಸಿಲ ತಾಪ ಏರುತ್ತಿದ್ದರೂ, ಇತ್ತ ಈ ಬಿಸಿನಲ್ಲೇ ನಿಂತು ಪೊಲೀಸರು ಕರ್ತವ್ಯ ನಿಭಾಯಿಸುವುದು ಅನಿವಾರ್ಯ. ಇದನ್ನು ಅರಿತ ಗುಜರಾತ್ ಪೊಲೀಸರು ಬಿರು ಬಿಸಿನಲ್ಲೂ ನಿಂತು ಕರ್ತವ್ಯ ನಿಭಾಯಿಸುವ ಪೊಲೀಸರಿಗೆ ಎಸಿ ಹೆಲ್ಮೆಟ್ ನೀಡುತ್ತಿದ್ದಾರೆ. ಈ ಹೆಲ್ಮೆಟ್ ಎಷ್ಟೇ ಬಿಸಿಲಿನಲ್ಲಿ ನಿಂತರೂ ಪೊಲೀಸರ ತಲೆಯನ್ನು ಕೂಲ್ ಕೂಲ್ ಮಾಡಲಿದೆ. ವಡೋದರದಲ್ಲಿ ಬಿಸಿಲಿನ ತಾಪಮಾನ 40 ರಿಂದ 42 ಡಿಗ್ರಿ ದಾಖಲಾಗಿದೆ. ಹೀಗಾಗಿ ಗುಜರಾತ್ ವಡೋದರ ಟ್ರಾಫಿಕ್ ಪೊಲೀಸರಿಗೆ ಈ ಎಸಿ ಹೆಲ್ಕೆಟ್ ನೀಡಲಾಗಿದೆ. ಈ

ಏರುತ್ತಿರುವ ಬಿಸಿಲ ತಾಪ/ ಗುಜರಾತ್ ಪೊಲೀಸರಿಗೆ ಸಿಕ್ತು ಕೂಲ್ ಕೂಲ್ ಹೆಲ್ಮೆಟ್ Read More »

ಕೊಪ್ಪಳ : ಸಿಡಿಲು ಬಡಿದು ವ್ಯಕ್ತಿ ಸಾವು

ಸಮಗ್ರ ನ್ಯೂಸ್‌ : ಉತ್ತರ ಕರ್ನಾಟಕದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಸಿಡಿಲಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಜೂಲಕಟ್ಟಿ ಬಳಿ ನಡೆದಿದೆ. ಕೊರಡಕೇರಿಯ ಅಮೋಘಸಿದ್ದಯ್ಯ ಗುರುವಿನ (32) ಮೃತ ದುರ್ದೈವಿ. ಅಮೋಘಸಿದ್ದಯ್ಯ ಕೊರಡಕೇರಿಯಿಂದ ಜೂಲಕಟ್ಟಿಯಲ್ಲಿ ಕಟ್ಟಿಗೆ ಕಡಿಯಲು ಕೂಲಿ ಕೆಲಸಕ್ಕೆ ಹೋಗಿದ್ದರು. ಇಂದು ಮಧ್ಯಾಹ್ನ ದಿಢೀರ್‌ ಶುರುವಾದ ಮಳೆ- ಗಾಳಿ ಜತೆಗೆ ಸಿಡಿಲಿ ಬಡಿದು ಮೃತಪಟ್ಟಿದ್ದಾರೆ. ಪ್ರಕರಣ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಕೊಪ್ಪಳ : ಸಿಡಿಲು ಬಡಿದು ವ್ಯಕ್ತಿ ಸಾವು Read More »