April 2024

ಧಾರವಾಡ : ಮೋದಿಯನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಸ್ಥಾನಕ್ಕೇರಿಸಬೇಕು- ಅರವಿಂದ ಬೆಲ್ಲದ

ಸಮಗ್ರ ನ್ಯೂಸ್‌ : ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸಿರುವ ನರೇಂದ್ರ ಮೋದಿ ಅವರನ್ನು ಬೆಂಬಲಿಸುವ ಮುಖಾಂತರ ಮತ್ತೊಮ್ಮೆ ಪ್ರಧಾನ ಮಂತ್ರಿ ಸ್ಥಾನಕ್ಕೇರಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಕರೆ ನೀಡಿದರು. ಹು-ಧಾ ಪಶ್ಚಿಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆಲಗೇರಿಯಲ್ಲಿ ಶುಕ್ರವಾರ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರ ಪರವಾಗಿ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಮೋದಿ ಅವರು ದೇಶದ ರೈತರು, ಮಹಿಳೆಯರು, ಯುವಕರು, ಕಾರ್ಮಿಕರು ಸೇರಿದಂತೆ ಎಲ್ಲ ವಲಯದಲ್ಲಿನ ಜನರ ಕಲ್ಯಾಣಕ್ಕೆ ಕೋಟಿಗಟ್ಟಲೇ […]

ಧಾರವಾಡ : ಮೋದಿಯನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಸ್ಥಾನಕ್ಕೇರಿಸಬೇಕು- ಅರವಿಂದ ಬೆಲ್ಲದ Read More »

ಬೀದರ್ : 5 ಲಕ್ಷ ಮೌಲ್ಯದ ನಶೆ ಗುಳಿಗೆ ವಶಕ್ಕೆ ಪಡೆದ ಅಬಕಾರಿ ಇಲಾಖೆ

ಸಮಗ್ರ ನ್ಯೂಸ್ : ಅಬಕಾರಿ ಅಧಿಕಾರಿಗಳ ಖಚಿತ ಮಾಹಿತಿ ಮೇರೆಗೆ ನಗರದ ಮಾಂಗರವಾಡಿ ಗಲ್ಲಿಯ ಮನೆಯೊಂದರ ಮೇಲೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ದಾಳಿ ನಡೆಸಿ 1.5 ಲಕ್ಷ ಮೌಲ್ಯದ ನಶೆ ಗುಳಿಗೆಯನ್ನು ವಶಕ್ಕೆ ಪಡೆದಿದೆ. ಮಾಂಗರವಾಡಿಯ ಅಶೋಕ ಮತ್ತು ವಿಕಾಸ್ ಮನೆಯ ಮೇಲೆ ದಾಳಿ ಮಾಡಿ 3065 ನಶೆ ಬರೋ ಡ್ರೆಮಿಡಾಲ್ ಕ್ಯಾಪಸೂಲ್ ವಶಕ್ಕೆ ಪಡೆದಿದೆ. ದಾಳಿ ಸಂಧರ್ಭದಲ್ಲಿ ಆರೋಪಿ ಅಶೋಕ ಮತ್ತು ವಿಕಾಸ ಪರಾರಿಯಾಗಿದ್ದಾರೆ. ಮನೆ ಪರಿಶೀಲನೆ ನಡೆಸಿದ ಅಬಕಾರಿ ಅಧಿಕಾರಿಗಳು 3065

ಬೀದರ್ : 5 ಲಕ್ಷ ಮೌಲ್ಯದ ನಶೆ ಗುಳಿಗೆ ವಶಕ್ಕೆ ಪಡೆದ ಅಬಕಾರಿ ಇಲಾಖೆ Read More »

ಪ್ರಜ್ವಲ್‌ ರೇವಣ್ಣ ಸೆಕ್ಸ್ ಕರ್ಮಕಾಂಡ| ಪ್ರಕರಣ ತನಿಖೆಗೆ ಎಸ್ಐಟಿ‌ ರಚನೆ

ಸಮಗ್ರ ನ್ಯೂಸ್: ಕೆಲವು ದಿನಗಳಿಂದ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಹಾಸನದ ರಾಸಲೀಲೆ ಪೆನ್ ಡ್ರೈವ್ ಪ್ರಕರಣ ತನಿಖೆಗೆ ಸರ್ಕಾರದಿಂದ ಎಸ್‌ಐಟಿ ರಚಿಸಲಾಗಿದೆ. ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಕೇಳಿ ಬಂದ ಲೈಂಗಿಕ ದೌರ್ಜನ್ಯಗಳ ಆರೋಪಗಳ ಬಗ್ಗೆ ತನಿಖೆಗೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ) ಬಿಜಯ್ ಕುಮಾರ್ ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ದಳ(ಎಸ್‌ಐಟಿ) ರಚಿಸಲಾಗಿದೆ. ಗೌರಿ ಲಂಕೇಶ್ ಕೊಲೆ ಪ್ರಕರಣದ ವಿಶೇಷ ತನಿಖಾ ದಳ ಸಾರಥ್ಯ ವಹಿಸಿದ್ದ ಪ್ರಸ್ತುತ ಸಿಐಡಿ ಎಡಿಜಿಪಿ ಆಗಿರುವ

ಪ್ರಜ್ವಲ್‌ ರೇವಣ್ಣ ಸೆಕ್ಸ್ ಕರ್ಮಕಾಂಡ| ಪ್ರಕರಣ ತನಿಖೆಗೆ ಎಸ್ಐಟಿ‌ ರಚನೆ Read More »

ತೆಲಂಗಾಣ : ಐಪಿಎಲ್ ಬೆಟ್ಟಿಂಗ್ನಲ್ಲಿ 10 ಲಕ್ಷ ಕಳೆದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಸಮಗ್ರ ನ್ಯೂಸ್ : ಐಪಿಎಲ್ ಬೆಟ್ಟಿಂಗ್ನಿಂದ 10 ಲಕ್ಷ ಕಳೆದುಕೊಂಡು ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಸಾವನ್ನಪ್ಪಿರುವ ವಿದ್ಯಾರ್ಥಿಯನ್ನು ವಿನೀತ್ ಎಂದು ಗುರುತಿಸಲಾಗಿದೆ. ವಿನೀತ್ ಬಿಟೆಕ್ ವಿದ್ಯಾರ್ಥಿಯಾಗಿದ್ದು, ಸದಾಶಿವಪೇಟೆಯ ಸಂಗರೆಡ್ಡಿ ಜಿಲ್ಲೆಯವನಾಗಿದ್ದಾನೆ. ಈತ ಆನ್ಲೈನ್ ಐಪಿಎಲ್ ಬೆಟ್ಟಿಂಗ್ನಲ್ಲಿ 10 ಲಕ್ಷ ಕಳೆದುಕೊಂಡಿದ್ದನು. ಐಪಿಎಲ್ ಬೆಟ್ಟಿಂಗ್ಗಾಗಿ ವಿನೀತ್ ಲೋನ್ ಆ್ಯಪ್ ಮೂಲಕ ಸಾಲ ಪಡೆದುಕೊಂಡಿದ್ದನು. ಆದರೆ ಐಪಿಎಲ್ ಗೋಜಿಗೆ ಬಿದ್ದು ಬೆಟ್ಟಿಂಗ್ ಮೇಲೆ ಬೆಟ್ಟಿಂಗ್ ಕಟ್ಟುತ್ತಾ ಕೊನೆಗೆ 10 ಲಕ್ಷದವರೆಗೆ ಸಾಲ ಮಾಡಿದ್ದಾನೆ. ಕೊನೆಗೆ ಸಾಲ

ತೆಲಂಗಾಣ : ಐಪಿಎಲ್ ಬೆಟ್ಟಿಂಗ್ನಲ್ಲಿ 10 ಲಕ್ಷ ಕಳೆದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ Read More »

ಚಂಡಿಗಢ : ಮನೆಯ ಶ್ವಾನ ನಾಪತ್ತೆ- ಬೇಸರದಿಂದ 12 ವರ್ಷದ ಬಾಲಕಿ ಆತ್ಮಹತ್ಯೆ

ಸಮಗ್ರ ನ್ಯೂಸ್‌ : ಪ್ರೀತಿಯ ಶ್ವಾನ ನಾಪತ್ತೆಯಾಗಿದೆ ಎಂದು ಬೇಸರ ಗೊಂಡು 12 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಯಾಣದಲ್ಲಿ ನಡೆದಿದೆ. ನಿನ್ನೆ ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹೊರಗೆ ಹೋಗಿದ್ದ ತಾಯಿ ಬಂದ ಕೂಡಲೇ ಇದನ್ನು ಗಮನಿಸಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಈ ವೇಳೆ ಆಕೆ ಮೃತಪಟ್ಟಿದ್ದಳು ಶ್ವಾನ ನಾಪತ್ತೆಯಾಗಿದೆ ಎಂದು ಕೆಲವು ದಿನಗಳಿಂದ ಆಕೆ ಕೊರಗುತ್ತಿದ್ದಳು ಎಂದು ಕುಟುಂಬಸ್ಥರು ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಚಂಡಿಗಢ : ಮನೆಯ ಶ್ವಾನ ನಾಪತ್ತೆ- ಬೇಸರದಿಂದ 12 ವರ್ಷದ ಬಾಲಕಿ ಆತ್ಮಹತ್ಯೆ Read More »

ಬೀದರ್ : ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ ಎಂದ ಸುರ್ಜೇವಾಲಾ

ಸಮಗ್ರ ನ್ಯೂಸ್‌ : ಕರ್ನಾಟಕ ಪ್ರವಾಸದಲ್ಲಿರುವ ಮೋದಿಗೆ‌ ಗೋ ಬ್ಯಾಕ್ ಘೋಷಣೆ ಎದುರಾಗಿದೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಬಿಜೆಪಿ‌ ಸರ್ಕಾರದ‌ ಡಿಎನ್‌ಎ ಕರ್ನಾಟಕ ಮತ್ತು ಕನ್ನಡಿಗರ ವಿರೋಧಿ‌ ಆಗಿದೆ. ಬರ ಪರಿಹಾರ ಮತ್ತು ನೀರಾವರಿ ಯೋಜನೆಗಳಿಗೆ ಅನುದಾನ ನೀಡದ ಮೋದಿ ಸರ್ಕಾರ ಕರ್ನಾಟಕದ‌ ಜನರ‌ ವಿರುದ್ಧ ದ್ವೇಷ‌ ಸಾಧಿಸುತ್ತಿದೆ. ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ ಎಂದು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಖಾಲಿ ಚೊಂಬು ಪ್ರದರ್ಶನ ಮಾಡಿ

ಬೀದರ್ : ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ ಎಂದ ಸುರ್ಜೇವಾಲಾ Read More »

ಚಾಮರಾಜನಗರ : ಸುನೀಲ್ ಬೋಸ್ ೧ ಲಕ್ಷಕ್ಕೂ ಹೆಚ್ಚು ಮತಗಳಿಂದ ಜಯಗಳಿಸಲಿದ್ದಾರೆ-ಮಾಜಿ ಶಾಸಕ ಆರ್ ನರೇಂದ್ರ

ಸಮಗ್ರ ನ್ಯೂಸ್ : ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ರವರು ಒಂದು ಲಕ್ಷಕ್ಕೂ ಹೆಚ್ಚು ಮತಗಳಿಂದ ಜಯಗಳಿಸಲಿದ್ದಾರೆ ಎಂದು ಮಾಜಿ ಶಾಸಕ ಆರ್ ನರೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ 1, 61,644 ಮತಗಳು ಚಲಾವಣೆಯಾಗಿದೆ. ಈ ಪೈಕಿ ಕಾಂಗ್ರೆಸ್ ಪಕ್ಷಕ್ಕೆ ಹನೂರು ವಿಧಾನಸಭಾ ಕ್ಷೇತ್ರ ಒಂದರಲ್ಲಿ 20 ರಿಂದ 25 ಸಾವಿರದವರೆಗೆ ಹೆಚ್ಚಿನ ಅಂತರದಲ್ಲಿ ಸಿಗಲಿದೆ.

ಚಾಮರಾಜನಗರ : ಸುನೀಲ್ ಬೋಸ್ ೧ ಲಕ್ಷಕ್ಕೂ ಹೆಚ್ಚು ಮತಗಳಿಂದ ಜಯಗಳಿಸಲಿದ್ದಾರೆ-ಮಾಜಿ ಶಾಸಕ ಆರ್ ನರೇಂದ್ರ Read More »

ವಿಜಯಪುರ: ರಥೋತ್ಸವದ ವೇಳೆ ರಥದ ಚಕ್ರ ಹಾಯ್ದು ಇಬ್ಬರು ಸಾವು, ಓರ್ವ ಗಂಭೀರ ಗಾಯ

ಸಮಗ್ರ ನ್ಯೂಸ್: ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಆರಾಧ್ಯ ದೈವ ಶ್ರೀ ಸಿದ್ದಲಿಂಗ ಮಹಾರಾಜರ ಕಮರಿಮಠದ ಜಾತ್ರೆ ಇಂದು ನಡೆಯಿತು. ಈ ಜಾತ್ರೆಯ ರಥೋತ್ಸವ ವೇಳೆ ರಥದ ಚಕ್ರ ಹಾಯ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿವೆ. ಇಂದು ಸಂಜೆ ಗೋಧೋಳಿ ಮುಹೂರ್ತದಲ್ಲಿ ಶ್ರೀ ಸಿದ್ದಲಿಂಗ ಮಹರಾಜರ ರಥೋತ್ಸವ ನಡೆದಿದ್ದು, ಸಾವಿರಾರು ಜನರು ಭಾಗಿಯಾಗಿದ್ದರು. ಜಾತ್ರೆಯಲ್ಲಿನ ನೂಕು ನುಗ್ಗಲಿನಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡ ಮತ್ತೊಬ್ಬನನ್ನು ಜಿಲ್ಲಾಸ್ಪತ್ರೆಗೆ ರವಾನೆ

ವಿಜಯಪುರ: ರಥೋತ್ಸವದ ವೇಳೆ ರಥದ ಚಕ್ರ ಹಾಯ್ದು ಇಬ್ಬರು ಸಾವು, ಓರ್ವ ಗಂಭೀರ ಗಾಯ Read More »

ಚಂಡೀಗಢ : ಸೈಕಲ್ ಗೆ ಪಿಕಪ್ ಡಿಕ್ಕಿ ಹೊಡೆದು 2 ಕಿಲೋ ಮೀಟರ್ವರೆಗೆ ಎಳೆದೊಯ್ದ ಡ್ರೈವರ್

ಸಮಗ್ರ ನ್ಯೂಸ್‌ : ಸೈಕಲ್ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದು 2 ಕಿಲೋ ಮೀಟರ್ವರೆಗೆ ಎಳೆದುಕೊಂಡು ಹೋಗಿರುವ ಘಟನೆ ಹರಿಯಾಣದ ಸಿರ್ಸಾದ ಪನ್ನಿವಾಲಾ ಮೋಟಾ ಗ್ರಾಮದಲ್ಲಿ ನಡೆದಿದೆ. ಹರಿಯಾಣದ ಕರ್ಮ್‌ಗಢ್ ಗ್ರಾಮದ ಗುರ್ನಾಮ್ ಸಿಂಗ್ (50) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೋಟಾ ಗ್ರಾಮದಿಂದ ತಮ್ಮ ಹಳ್ಳಿಗೆ ರಸ್ತೆ ಮೂಲಕ ಸೈಕಲ್ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಪಿಕಪ್ ವಾಹನ ಮೊದಲು ಡಿಕ್ಕಿ ಹೊಡೆದಿದೆ. ವ್ಯಕ್ತಿಯನ್ನು ಎಳೆದುಕೊಂಡು ಹೋಗುವುದನ್ನು ಹಿಂದೆ ಬರುತ್ತಿದ್ದ ಟ್ರಕ್ನಲ್ಲಿದ್ದವರು ನೋಡಿದ್ದರು. ಪಿಕಪ್ ವಾಹನವನ್ನು

ಚಂಡೀಗಢ : ಸೈಕಲ್ ಗೆ ಪಿಕಪ್ ಡಿಕ್ಕಿ ಹೊಡೆದು 2 ಕಿಲೋ ಮೀಟರ್ವರೆಗೆ ಎಳೆದೊಯ್ದ ಡ್ರೈವರ್ Read More »

ಪೌರಕಾರ್ಮಿಕರ ನೇಮಕಾತಿ/ ಮೇ 15ರ ವರೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಸಮಗ್ರ ನ್ಯೂಸ್: ಚುನಾವಣೆಯ ಹಿನ್ನೆಲೆಯಲ್ಲಿ ಬಿಬಿಎಂಪಿಯ ಪೌರಕಾರ್ಮಿಕರ ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 15ರ ವರೆಗೆ ವಿಸ್ತರಣೆ ಮಾಡಿ ಬಿಬಿಎಂಪಿ ಅಧಿಸೂಚನೆ ಹೊರಡಿಸಿದೆ. 11,307 ಪೌರಕಾರ್ಮಿಕರ ನೇಮಕಾತಿಗೆ ಮಾರ್ಚ್‍ನಲ್ಲಿ ಅರ್ಜಿ ಆಹ್ವಾನಿಸಿದ್ದ ಬಿಬಿಎಂಪಿಯು ಏ.15ರವರೆಗೆ ಕಾಲಾವಕಾಶ ನೀಡಿತ್ತು. ಲೋಕಸಭಾ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಹಾಗೂ ಆಡಳಿತಾತ್ಮಕ ಕಾರಣ ನೀಡಿ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 15ರ ವರೆಗೆ ವಿಸ್ತರಣೆ ಮಾಡಲಾಗಿದೆ. ಬಿಬಿಎಂಪಿಯ 14,980 ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂಗೊಳಿಸುವುದಾಗಿ ಸರ್ಕಾರ ಹೇಳಿದ್ದು, ಇದೀಗ ಮೊದಲ ಹಂತದಲ್ಲಿ ಬಿಬಿಎಂಪಿಯ

ಪೌರಕಾರ್ಮಿಕರ ನೇಮಕಾತಿ/ ಮೇ 15ರ ವರೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ Read More »