April 2024

ಸಲ್ಮಾನ್‌ ಖಾನ್‌ ನಿವಾಸದೆದುರು ಗುಂಡಿನ ದಾಳಿ:ಇಬ್ಬರು ಶಂಕಿತರ ಫೋಟೊ ಬಿಡುಗಡೆ ಮಾಡಿದ ಪೊಲೀಸರು

ಸಮಗ್ರ ನ್ಯೂಸ್: ಮುಂಬೈನಲ್ಲಿ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ನಿವಾಸದೆದುರು ಏಪ್ರಿಲ್‌ 14 ರಂದು ನಡೆದ ಗುಂಡಿನ ದಾಳಿಗೆ ಸಂಬಂಧಪಟ್ಟಂತೆ ಈಗ ಸುಳಿವೊಂದು ಸಿಕ್ಕಿದೆ. ಬೈಕ್‌ನಲ್ಲಿ ಬಂದು ಗುಂಡು ಹಾರಿಸಿದ ಇಬ್ಬರು ಶೂಟರ್‌ಗಳ ಫೋಟೊವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ದಾಳಿ ನಡೆದ ಕೆಲವೇ ಗಂಟೆಗಳಲ್ಲಿ ಗ್ಯಾಂಗ್​ಸ್ಟರ್​ ಲಾರೆನ್ಸ್​ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ದಾಳಿಯ ಹೊಣೆ ಹೊತ್ತುಕೊಂಡಿದ್ದ. ಅನ್ಮೋಲ್ ಈಗ ಅಮೆರಿಕದಲ್ಲಿದ್ದು, ಸಲ್ಮಾನ್ ಮನೆಯ ಹೊರಗೆ ನಡೆದ ಗುಂಡಿನ ದಾಳಿಯ ಹೊಣೆ ಹೊತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ […]

ಸಲ್ಮಾನ್‌ ಖಾನ್‌ ನಿವಾಸದೆದುರು ಗುಂಡಿನ ದಾಳಿ:ಇಬ್ಬರು ಶಂಕಿತರ ಫೋಟೊ ಬಿಡುಗಡೆ ಮಾಡಿದ ಪೊಲೀಸರು Read More »

ಪಾದಚಾರಿಗಳ ಮೇಲೆ ಟಿಪ್ಪರ್ ಪಲ್ಟಿ- ಐವರು ಸಾವು

ಸಮಗ್ರ ನ್ಯೂಸ್: ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಹೊನ್ಯಾಳ ಕ್ರಾಸ್ ಬಳಿ ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿಯಾಗಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಯಂಕಪ್ಪ ತೋಳಮಟ್ಟಿ, ಆತನ ಪತ್ನಿ ಯಲ್ಲವ್ವ, ಮಗ ಪುಂಡಲೀಕ, ಮಗಳು ನಾಗವ್ವ ಹಾಗೂ ಗಂಡ ಅಶೋಕ ಬಮ್ಮಣ್ಣವರ ಮೃತ ದುರ್ದೈವಿಗಳು. ಇವರು ಹೊಲದ‌ ಕೆಲಸ ಮುಗಿಸಿ ರಸ್ತೆಪಕ್ಕ ನಿಂತಿದ್ದರು. ಈ ವೇಳೆ ಟೈರ್ ಬ್ಲಾಸ್ಟ್ ಆಗಿ ಟಿಪ್ಪರ್ ವಾಹನ ಒಂದೇ ಕುಟುಂಬದ ಐವರ ಮೇಲೆ ಪಲ್ಟಿಯಾಗಿದೆ. ಘಟನಾ ಸ್ಥಳಕ್ಕೆ

ಪಾದಚಾರಿಗಳ ಮೇಲೆ ಟಿಪ್ಪರ್ ಪಲ್ಟಿ- ಐವರು ಸಾವು Read More »

ತುಮಕೂರು: ನೀನು ತಾಯಿ‌ ಹೊಟ್ಟೆಯಲ್ಲಿ‌ ಹುಟ್ಟಿದ್ದೀಯಾ ಎಂದು ಕುಮಾರಸ್ವಾಮಿ ವಿರುದ್ಧ ಡಿಕೆಶಿ ವಾಗ್ದಾಳಿ

ಸಮಗ್ರ ನ್ಯೂಸ್ : ನೀನು ಒಂದು ತಾಯಿ‌ ಹೊಟ್ಟೆಯಲ್ಲಿ‌ ಹುಟ್ಟಿದ್ದೀಯಾ. ಆ ತಾಯಿಯ ನೋವು ಅರ್ಥ ಆಗುತ್ತಾ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ವಾಗ್ದಾಳಿ ಮಾಡಿದ್ದಾರೆ. ಜಿಲ್ಲೆಯ ತಿಪಟೂರು ತಾಲೂಕಿನ ಕೆ.ಬಿ.ಕ್ರಾಸ್ನಲ್ಲಿ ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಹೇಳಿಕೆಯಿಂದ ನನಗೆ ಇಂದು ಅತಿ ಹೆಚ್ಚು ದುಃಖ ತಂದಿದೆ. ನನ್ನ ತಾಯಂದಿರು, ಅಕ್ಕಂದಿರು, ಅವರ ತಾಯಿಯ ಮನೆಗೆ ಹೋಗೋಕೆ, ಧರ್ಮಸ್ಥಳ, ಕುಕ್ಕೆಗೆ‌ ಹೋಗಲು ಬಸ್‌ ಹಿಡಿದ್ರೆ ದಾರಿ‌ತಪ್ಪಿದ್ದಾರೆ ಅಂತೀರಾ?

ತುಮಕೂರು: ನೀನು ತಾಯಿ‌ ಹೊಟ್ಟೆಯಲ್ಲಿ‌ ಹುಟ್ಟಿದ್ದೀಯಾ ಎಂದು ಕುಮಾರಸ್ವಾಮಿ ವಿರುದ್ಧ ಡಿಕೆಶಿ ವಾಗ್ದಾಳಿ Read More »

ವಿಜಯಪುರ: ಕಾಂಗ್ರೆಸ್‌ನ ಅಭಿವೃದ್ಧಿ ಕಾರ್ಯಗಳಿಗಾಗಿ ಮತ ನೀಡಿ- ಎಂ.ಬಿ. ಪಾಟೀಲ

ಸಮಗ್ರ ನ್ಯೂಸ್:‌ ಬಿಜೆಪಿ ಮತ್ತು ಕಾಂಗ್ರೆಸ್‌ನ ಕೆಲಸಗಳನ್ನು ಗಮನಕ್ಕೆ ತೆಗೆದುಕೊಂಡು ಮತ ನೀಡಿ ಎಂದು ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು. ನಗರದ ಮಠಪತಿ ಗಲ್ಲಿಯಲ್ಲಿ ಭಾನುವಾರ ಸಂಜೆ ನಡೆದ ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿಯ ಪರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಸ್ವಾತಂತ್ರ್ಯ ಹೋರಾಟದ ನಂತರ ದೇಶವನ್ನು ಕಟ್ಟಿದ್ದು ಕಾಂಗ್ರೆಸ್ ಪಕ್ಷ. ಹಸಿರು ಕ್ರಾಂತಿ, ಉದ್ಯೋಗ, ಉದ್ಯಮ ಸ್ಥಾಪಿಸಿದ್ದು, ದೊಡ್ಡ ದೊಡ್ಡ ಸಂಸ್ಥೆಗಳನ್ನು ಕೊಟ್ಟಿದ್ದು ಕಾಂಗ್ರೆಸ್ ಪಕ್ಷ. ಮೋದಿಯವರು ಬಂದ ಮೇಲೆ

ವಿಜಯಪುರ: ಕಾಂಗ್ರೆಸ್‌ನ ಅಭಿವೃದ್ಧಿ ಕಾರ್ಯಗಳಿಗಾಗಿ ಮತ ನೀಡಿ- ಎಂ.ಬಿ. ಪಾಟೀಲ Read More »

ಮಧ್ಯಪ್ರದೇಶ: ಕೊಳವೆ ಬಾವಿಗೆ ಬಿದ್ದ ಬಾಲಕ ಮೃತ್ಯು

ಸಮಗ್ರ ನ್ಯೂಸ್‌ : ಜಿಲ್ಲೆಯ ಮಣಿಕಾ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ತೆರೆದ ಕೊಳವೆ ಬಾವಿಯಲ್ಲಿ ಬಿದ್ದಿದ್ದ 6 ವರ್ಷದ ಬಾಲಕ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ. ಬಾಲಕ ಶುಕ್ರವಾರ ಆಟವಾಡುತ್ತಿದ್ದ ವೇಳೆ, ಮಧ್ಯಾಹ್ನ 3ರ ಸುಮಾರಿಗೆ ಕೊಳವೆ ಬಾವಿಯೊಳಗೆ ಬಿದ್ದಿದ್ದ. 40 ಅಡಿ ಆಳದಲ್ಲಿ ಸಿಕ್ಕಿಹಾಕಿಕೊಂಡಿದ್ದ ಬಾಲಕನ ರಕ್ಷಣೆಗೆ ವಿವಿಧ ಸಂಸ್ಥೆಗಳು ನಡೆಸಿದ ಪ್ರಯತ್ನಗಳು ಕೈಗೂಡಲಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸತತ 40 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಬಳಿಕ, ರಕ್ಷಣಾ ಕಾರ್ಯದಲ್ಲಿ

ಮಧ್ಯಪ್ರದೇಶ: ಕೊಳವೆ ಬಾವಿಗೆ ಬಿದ್ದ ಬಾಲಕ ಮೃತ್ಯು Read More »

ಮೋದಿ ಗೆಲ್ಲಿಸಲು ಎಲ್ಲಿಗೆ ಕರೆದರೂ ನಾನು ಪ್ರಚಾರಕ್ಕೆ ಬರುವೆ: ಎಚ್ .ಡಿ ದೇವೆಗೌಡ

ಸಮಗ್ರ ನ್ಯೂಸ್: ಇಂದು ಮೈಸೂರಿನಲ್ಲಿ ಮೋದಿ ಸಮಾವೇಶ ನಡೆದಿದು, ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದರು. ಈ ಸಂಧರ್ಭದಲ್ಲಿ ನರೇಂದ್ರ ಮೋದಿ ಅವರು ಈ ದೇಶ ಕಂಡ ಅತ್ಯಂತ ಯಶಸ್ವಿ ಪ್ರಧಾನಮಂತ್ರಿ ಎಂದು ಹಾಡಿಹೊಗಳಿರುವ ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡರು, ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ತಾವು ರಾಜ್ಯದೆಲ್ಲೆಡೆ ಪ್ರಚಾರ ಮಾಡಲು ಸಿದ್ಧ ಎಂದು ಹೇಳಿದ್ದಾರೆ. ಇಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರೇ ನೀವು ಎಲ್ಲಿ ಕರೆದರೂ

ಮೋದಿ ಗೆಲ್ಲಿಸಲು ಎಲ್ಲಿಗೆ ಕರೆದರೂ ನಾನು ಪ್ರಚಾರಕ್ಕೆ ಬರುವೆ: ಎಚ್ .ಡಿ ದೇವೆಗೌಡ Read More »

ಬೀದರ್: ಅನಾರೋಗ್ಯದಿಂದ ಮಲ್ಲಿಕಾರ್ಜುನ ಖರ್ಗೆ ಬಸವಕಲ್ಯಾಣ ಪ್ರವಾಸ ರದ್ದು

ಸಮಗ್ರ ನ್ಯೂಸ್‌ : ನಗರದ ಅಕ್ಕಮಹಾದೇವಿ ಕಾಲೇಜು ಮೈದಾನದಲ್ಲಿ ಶುಕ್ರವಾರ ಸಂಜೆ ಹಮ್ಮಿಕೊಂಡಿರುವ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಭಾಗವಹಿಸಬೇಕಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪ್ರವಾಸ ಕೊನೆಯ ಗಳಿಗೆಯಲ್ಲಿ ರದ್ದಾಗಿದೆ. ಕಲಬುರಗಿ ಪ್ರವಾಸ ಮುಗಿಸಿಕೊಂಡು ಸಂಜೆ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಪರ ಖರ್ಗೆ ಅವರು ಪ್ರಚಾರ ಮಾಡುವವರಿದ್ದರು. ಆದರೆ, ಅನಾರೋಗ್ಯದಿಂದ ಅವರ ಪ್ರವಾಸ ರದ್ದಾಗಿದೆ. ಡಿಹೈಡ್ರೇಶನ್ ಕಾರಣದಿಂದ ಮಲ್ಲಿಕಾರ್ಜುನ ಖರ್ಗೆಯವರು ಅನಾರೋಗ್ಯಕ್ಕೆ ಒಳಗಾಗಿದ್ದರಿಂದ ಅವರು ಇಲ್ಲಿಗೆ ಬರಲು ಸಾಧ್ಯವಾಗುತ್ತಿಲ್ಲ. ಮತ್ತೊಂದು ದಿನ ಪ್ರಚಾರಕ್ಕೆ

ಬೀದರ್: ಅನಾರೋಗ್ಯದಿಂದ ಮಲ್ಲಿಕಾರ್ಜುನ ಖರ್ಗೆ ಬಸವಕಲ್ಯಾಣ ಪ್ರವಾಸ ರದ್ದು Read More »

ಕುಮಾರಸ್ವಾಮಿ ಹೇಳಿಕೆಯಿಂದ ಮಹಿಳೆಯರ ಘನತೆಗೆ ಧಕ್ಕೆ/ ಕೇಸ್ ದಾಖಲಿಸಿಕೊಂಡ ರಾಜ್ಯ ಮಹಿಳಾ ಆಯೋಗ

ಸಮಗ್ರ ನ್ಯೂಸ್: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಮಹಿಳೆಯರ ಬಗ್ಗೆ ನೀಡಿದ್ದ ಹೇಳಿಕೆಯ ವಿರುದ್ಧವಾಗಿ ರಾಜ್ಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡಿದೆ. ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ತಾಯಂದಿರು ದಾರಿ ತಪ್ಪುದ್ದಿದ್ದಾರೆ ಎಂಬ ಹೇಳಿಕೆ ನೀಡುವ ಮೂಲಕ ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ಮಹಿಳೆರ ಘನತೆ, ಚಾರಿತ್ರ್ಯಕ್ಕೆ ಧಕ್ಕೆ ತಂದಿದ್ದಾರೆ.ಈ ಹಿನ್ನೆಲೆಯಲ್ಲಿ ಹೆಚ್.ಡಿ.ಕೆ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಮಹಿಳಾ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದೆ. ಈ ನಿಟ್ಟಿನಲ್ಲಿ ರಾಜ್ಯ ಮಹಿಳಾ ಆಯೋಗ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರಿಗೆ ನೊಟೀಸ್

ಕುಮಾರಸ್ವಾಮಿ ಹೇಳಿಕೆಯಿಂದ ಮಹಿಳೆಯರ ಘನತೆಗೆ ಧಕ್ಕೆ/ ಕೇಸ್ ದಾಖಲಿಸಿಕೊಂಡ ರಾಜ್ಯ ಮಹಿಳಾ ಆಯೋಗ Read More »

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಾತೋಡ್ಡಿ ಜಲಪಾತಕ್ಕೆ ಪ್ರವಾಸಿಗರಿಗೆ ನಿಷೇಧ

ಸಮಗ್ರ ನ್ಯೂಸ್‌ : ಜಲಪಾತ ವೀಕ್ಷಣೆಗೆ ತೆರಳುವ ಪ್ರವಾಸಿಗರ ಮೇಲೆ ನಿರಂತರ ಜೇನು ದಾಳಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಪ್ರಸಿದ್ಧ ಸಾತೊಡ್ಡಿ ಜಲಪಾತಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಕಳೆದ ಎರಡು ದಿನಗಳಲ್ಲಿ 30ಕ್ಕೂ ಅಧಿಕ ಪ್ರವಾಸಿಗರಿಗೆ ಜೇನು ದಾಳಿ ಮಾಡಿದ್ದು, ಇಂದು ಜೇನು ಕಡಿತಕ್ಕೆ ಒಳಗಾಗಿ ಗಂಭೀರ ಗಾಯಗೊಂಡಿದ್ದ ನಾಲ್ವರು ಪ್ರವಾಸಿಗರಿಗೆ ಹುಬ್ಬಳ್ಳಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ನೀರಲ್ಲಿ ಆಟವಾಡಲು ಸಾತೊಡ್ಡಿ ಫಾಲ್ಸ್‌ಗೆ ಹೆಚ್ಚು ಪ್ರವಾಸಿಗರು ಭೇಟಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಾತೋಡ್ಡಿ ಜಲಪಾತಕ್ಕೆ ಪ್ರವಾಸಿಗರಿಗೆ ನಿಷೇಧ Read More »

ಇಸ್ರೇಲ್ – ಇರಾನ್ ಯುದ್ಧ/ಇಸ್ರೇಲ್‍ನ ಶಾಲಾ-ಕಾಲೇಜುಗಳು ಬಂದ್

ಸಮಗ್ರ ನ್ಯೂಸ್: ಇಸ್ರೇಲ್ ಮೇಲೆ 200 ಕ್ಕೂ ಹೆಚ್ಚು ಡೋನ್‍ಗಳ ದಾಳಿ ನಡೆದಿರುವ ಹಿನ್ನಲೆಯಲ್ಲಿ ಎಲ್ಲಾ ಶಾಲಾ- ಕಾಲೇಜುಗಳನ್ನು ಮುಚ್ಚಲಾಗುವುದು ಎಂದು ಘೋಷಿಸಲಾಗಿದೆ. ಇರಾನ್ ಡೋನ್ ದಾಳಿ ನಡೆಸಿದ್ದು, ಇಸ್ರೇಲ್ ನಾಗರಿಕರು ಜಾಗರೂಕರಾಗಿರಬೇಕು. ಎಚ್ಚರಿಕೆಯ ಸೈರನ್ ಶಬ್ದ ಕೇಳಿದ ತಕ್ಷಣ ಸುರಕ್ಷಿತ ಸ್ಥಳಗಳಿಗೆ ಹೋಗುವಂತೆ ನಾಗರಿಕರಿಗೆ ಸಲಹೆ ನೀಡಲಾಗಿದೆ. ಇರಾನ್ ದಾಳಿಗೆ ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್) ಎಚ್ಚರಿಕೆ ವಹಿಸಿವೆ. ದೇಶ ರಕ್ಷಣೆಗಾಗಿ ಆಕಾಶದಲ್ಲಿ ಯುದ್ಧ ವಿಮಾನಗಳ ಕಾರ್ಯಾಚರಣೆ ನಡೆಸುತ್ತಿವೆ. ನಾಳೆಯಿಂದ ಶಾಲಾ-ಕಾಲೇಜುಗಳು ಇರುವುದಿಲ್ಲ. ಕಾರ್ಯಕ್ರಮ, ಪ್ರವಾಸ

ಇಸ್ರೇಲ್ – ಇರಾನ್ ಯುದ್ಧ/ಇಸ್ರೇಲ್‍ನ ಶಾಲಾ-ಕಾಲೇಜುಗಳು ಬಂದ್ Read More »