April 2024

ಉತ್ತರ ಕನ್ನಡ: ಸರ್ಕಾರಿ ಬಸ್, ಬೈಕ್ ನಡುವೆ ಅಪಘಾತ| ಸವಾರರಿಬ್ಬರು ಸಾವು

ಸಮಗ್ರ ನ್ಯೂಸ್‌ : ಯಲ್ಲಾಪುರ-ಕಾರವಾರದಿಂದ ಅಂಕೋಲಾ ಮಾರ್ಗವಾಗಿ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಕರ್ನಾಟಕ ವಾಯುವ್ಯ ಸಾರಿಗೆ ಬಸ್ ಹಾಗೂ ಬೈಕ ನಡುವೆ ಭೀಕರ ಅಪಘಾತವೊಂದು ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ ಸುಮಾರು 2.30 ರ ಸಮಯಕ್ಕೆ ಈ ಅಪಘಾತ ನಡೆದಿದೆ ಎನ್ನಲಾಗಿದೆ. ಈ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಸಡೆಸುತ್ತಿದ್ದಾರೆ.

ಉತ್ತರ ಕನ್ನಡ: ಸರ್ಕಾರಿ ಬಸ್, ಬೈಕ್ ನಡುವೆ ಅಪಘಾತ| ಸವಾರರಿಬ್ಬರು ಸಾವು Read More »

ಉಡುಪಿ : ಗೋಪಾಲ ಪೂಜಾರಿ ಸಜ್ಜನ ಮತ್ತು ಪ್ರಾಮಾಣಿಕ ಎಂದಿದ್ದೆ, ಸುಳ್ಳಾದರೆ ಕ್ಷಮಿಸಿ – ಕೋಟ ತಿರುಗೇಟು

ಸಮಗ್ರ ನ್ಯೂಸ್ : ಮಾಜಿ ಶಾಸಕ ಗೋಪಾಲ ಪೂಜಾರಿ ಚುನಾವಣಾ ಪ್ರಚಾರ ಸಭೆಗಳಲ್ಲಿ ಬಿಜೆಪಿ ವಿರುದ್ಧ ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದು ನನ್ನ ಬಗ್ಗೆಯೂ ಉಲ್ಲೇಖ ಮಾಡುತ್ತಾ ಕುಚ್ಚಲಕ್ಕಿ ಕೊಡುವುದಾಗಿ ಕೋಟ ಸುಳ್ಳು ಹೇಳಿದ್ದಾರೆ ಎಂದಿರುವುದು ನನ್ನ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಗೋಪಾಲ ಪೂಜಾರಿಯವರನ್ನು ಸಜ್ಜನ ಮತ್ತು ಪ್ರಾಮಾಣಿಕ ಎಂದಿರುವುದು ಸುಳ್ಳಾದರೆ ಕ್ಷಮಿಸಿ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ತಿರುಗೇಟು ನೀಡಿದ್ದಾರೆ. ವಾಸ್ತವಿಕವಾಗಿ ಕುಚ್ಚಲಕ್ಕಿ ಕೊಡುವ ಪ್ರಕ್ರಿಯೆ ಬರೇ

ಉಡುಪಿ : ಗೋಪಾಲ ಪೂಜಾರಿ ಸಜ್ಜನ ಮತ್ತು ಪ್ರಾಮಾಣಿಕ ಎಂದಿದ್ದೆ, ಸುಳ್ಳಾದರೆ ಕ್ಷಮಿಸಿ – ಕೋಟ ತಿರುಗೇಟು Read More »

ಚಾಮರಾಜನಗರ: ಕಾಂಗ್ರೇಸ್ ಅಡ್ಡದಾರಿ ಹಿಡಿದಿದೆ ಇದಕ್ಕೆ ಮತದಾರರೆ ತಕ್ಕ ಉತ್ತರ ನೀಡುತ್ತಾರೆ- ಬಿ.ವೈ.ವಿಜೇಂದ್ರ

ಸಮಗ್ರ ನ್ಯೂಸ್ : ಬೆಂಗಳೂರು ಗ್ರಾಮಾಂತರ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಳ್ಳೇಗಾಲದಲ್ಲಿ ಮಾತನಾಡಿದ ಬಿ.ವೈ.ವಿಜೇಂದ್ರ ಕಾಂಗ್ರೆಸ್ಸಿಗರು ಹತಾಶೆಯಿಂದ ಈ ರೀತಿ ಕೆಲಸಕ್ಕೆ ಮುಂದಾಗಿದ್ದಾರೆ ಇದಕ್ಕೆ ಜನರು ತಕ್ಕ ಉತ್ತರ ಕೊಡ್ತಾರೆ ಎಂದರು. ಚಾಮರಾಜನಗರ ಲೋಕಸಭಾ ಅಭ್ಯರ್ಥಿ ಬಾಲರಾಜು ಪರ ಪ್ರಚಾರಕ್ಕೆ ಆಗಮಿಸಿದ್ದ ವೇಳೆ ಮಾತನಾಡಿದ ವಿಜೇಂದ್ರ ಅವರು ಬೆಂಗಳೂರು ಗ್ರಾಮಾಂತರದಲ್ಲಿ ಹಣಬಲ ಮತ್ತು ಅಧಿಕಾರದ ಬಲದಿಂದ ಹೇಗಾದರು ಮಾಡಿ ಗೆಲುವು ಕಾಣಬೇಕು ಎಂದು ಕಾಂಗ್ರೇಸ್ ನವರು ಅಡ್ಡದಾರಿ ಹಿಡಿದಿದ್ದಾರೆ. ಇದಕ್ಕೆ ಮತದಾರರೆ ತಕ್ಕ

ಚಾಮರಾಜನಗರ: ಕಾಂಗ್ರೇಸ್ ಅಡ್ಡದಾರಿ ಹಿಡಿದಿದೆ ಇದಕ್ಕೆ ಮತದಾರರೆ ತಕ್ಕ ಉತ್ತರ ನೀಡುತ್ತಾರೆ- ಬಿ.ವೈ.ವಿಜೇಂದ್ರ Read More »

ಪುತ್ತೂರು:ಮನೆ ಮನೆ ಮತದಾನ ಎ.14 ರಿಂದ 16ರ ತನಕ ನಡೆಯಲಿದೆ- ಜುಬಿನ್ ಮೊಹಪಾತ್ರ

ಸಮಗ್ರ ನ್ಯೂಸ್ : ದಕ್ಷಿಣ ಕನ್ನಡ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಮನೆ ಮನೆ ಮತದಾನಕ್ಕೆ ಅರ್ಹ ವ್ಯಕ್ತಿಗಳಾದ 85 ವರ್ಷ ಮೇಲ್ಪಟ್ಟವರು 777 ಮಂದಿ ಮತ್ತು 340 ಅಂಗವಿಕಲರು ಮನೆಯಲ್ಲೇ ಮತದಾನ ಚಲಾಯಿಸಲಿದ್ದಾರೆ. ಈ ಮತದಾನ ಪ್ರಕ್ರಿಯೆ ಎ.14 ರಿಂದ 16ರ ತನಕ ನಡೆಯಲಿದೆ ಎಂದು ಸಹಾಯಕ ಚುನಾವಣಾಧಿಕಾರಿಯಾಗಿರುವ ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ. ಈ ಹಿಂದೆ 85 ವರ್ಷ ಮೇಲ್ಪಟ್ಟ ಮತ್ತು ಅಂಗವಿಕಲರಿಗೆ ಮನೆಯಲ್ಲೇ ಮತದಾನ ಮಾಡಲು ಅರ್ಜಿ ನಮೂನೆ

ಪುತ್ತೂರು:ಮನೆ ಮನೆ ಮತದಾನ ಎ.14 ರಿಂದ 16ರ ತನಕ ನಡೆಯಲಿದೆ- ಜುಬಿನ್ ಮೊಹಪಾತ್ರ Read More »

ದಾವಣಗೆರೆ: ಕೆಎಸ್‌ಆರ್‌ಟಿಸಿ ಬಸ್, ಓಮ್ನಿ ಕಾರು ಮುಖಾಮುಖಿ|ಮೂವರು ಮೃತ್ಯು

ಸಮಗ್ರ ನ್ಯೂಸ್‌ : ಕೆಎಸ್‌ಆರ್‌ಟಿಸಿ ಬಸ್ ಮತ್ತು ಓಮ್ನಿ ಕಾರು ಮಧ್ಯೆ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆಯ ನ್ಯಾಮತಿ ತಾಲೂಕಿನ ಚಿನ್ನಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ನಂಜುಂಡಪ್ಪ (83), ರಾಕೇಶ್ (27), ದೇವರಾಜ್ (30) ಎಂದು ಗುರುತಿಸಲಾಗಿದೆ. ಈ ಮೂವರು ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಹರಮಘಟ್ಟ ಗ್ರಾಮದವರು ಎಂಬ ಮಾಹಿತಿ ತಿಳಿದು ಬಂದಿದೆ. ಕೆಎಸ್‌ಆರ್‌ಟಿಸಿ ಬಸ್‌ ಶಿಕಾರಿಪುರದ ಕಡೆಯಿಂದ ಬರುತ್ತಿತ್ತು. ಶಿವಮೊಗ್ಗದ ಕಡೆಯಿಂದ ಹೊರಟಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಬಸ್‌-ಕಾರು ಮುಖಾಮುಖಿ

ದಾವಣಗೆರೆ: ಕೆಎಸ್‌ಆರ್‌ಟಿಸಿ ಬಸ್, ಓಮ್ನಿ ಕಾರು ಮುಖಾಮುಖಿ|ಮೂವರು ಮೃತ್ಯು Read More »

ಸೌಜನ್ಯಾ ಕೊಲೆ‌ ಪ್ರಕರಣ ಮರುತನಿಖೆಯನ್ನು ಪ್ರಧಾನಿ ಘೋಷಿಸಲಿ – ತಿಮರೋಡಿ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ನಡೆದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐನಿಂದ ನ್ಯಾಯಾಲಯದ ಉಸ್ತುವಾರಿಯಲ್ಲಿ ಮರುತನಿಖೆ ನಡೆಸುವ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೈಕೋರ್ಟ್‌ಗೆ ಲಿಖಿತ ಅಭಿಪ್ರಾಯ ನೀಡಬೇಕು. ಏ.14ರಂದು ಮಂಗಳೂರಿಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಈ ಕುರಿತು ಘೋಷಣೆ ಮಾಡಬೇಕು ಎಂದು ಸೌಜನ್ಯಾ ಪರ ಹೋರಾಟ ಸಮಿತಿ ಪ್ರಮುಖ ಮಹೇಶ್ ಶೆಟ್ಟಿ ತಿಮರೋಡಿ ಆಗ್ರಹಿಸಿದರು. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಪ್ರಕರಣ ಮರುತನಿಖೆ ನಡೆಸುವ ಸಂಬಂಧ ಹೈಕೋರ್ಟ್

ಸೌಜನ್ಯಾ ಕೊಲೆ‌ ಪ್ರಕರಣ ಮರುತನಿಖೆಯನ್ನು ಪ್ರಧಾನಿ ಘೋಷಿಸಲಿ – ತಿಮರೋಡಿ Read More »

ಇಸ್ಲಾಮಾಬಾದ್: ಯಾತ್ರೆಗೆ ತೆರಳುತ್ತಿದ್ದ ವೇಳೆ ಅಪಘಾತ|17 ಮಂದಿ ಮೃತ್ಯು, 41 ಮಂದಿಗೆ ಗಾಯ

ಸಮಗ್ರ ನ್ಯೂಸ್ : ಯಾತ್ರಾರ್ಥಿಗಳು ಈದ್ ಅಲ್-ಫಿತರ್ ರಜೆಯ ಹಿನ್ನೆಲೆಯಲ್ಲಿ ನೈರುತ್ಯ ಪಾಕಿಸ್ತಾನದಲ್ಲಿರುವ ಧಾರ್ಮಿಕ ಕೇಂದ್ರವೊಂದಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಈ ಅಪಘಾತ ಸಂಭವಿಸಿದೆ. 17 ಯಾತ್ರಾರ್ಥಿಗಳು ಸಾವಿಗೀಡಾಗಿದ್ದು, 41 ಮಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. ಟ್ರಕ್ ಮಿತಿಮೀರಿದ ವೇಗದಲ್ಲಿ, ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ ಈ ಅಪಘಾತ ಸಂಭವಿಸಿದೆ. ಚಾಲಕ ಟ್ರಕ್ನಿಂದ ಜಿಗಿದಿದ್ದು, ಸುರಕ್ಷಿತವಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು,

ಇಸ್ಲಾಮಾಬಾದ್: ಯಾತ್ರೆಗೆ ತೆರಳುತ್ತಿದ್ದ ವೇಳೆ ಅಪಘಾತ|17 ಮಂದಿ ಮೃತ್ಯು, 41 ಮಂದಿಗೆ ಗಾಯ Read More »

ನವದೆಹಲಿ: ನಾನು ಹಣಕ್ಕಾಗಿ ಗಂಡನನ್ನು ಮಾರಾಟ ಮಾಡಲು ಹಿಂದೆ ಮುಂದೆ ನೋಡುವುದಿಲ್ಲ- ಮನ್ನತ್ ಕುಲ್ಹಾರಿಯಾ

ಸಮಗ್ರ ನ್ಯೂಸ್ : ನಾನು ಹಣಕ್ಕಾಗಿ ನನ್ನ ಗಂಡನನ್ನು ಹರಾಜು ಹಾಕಲು ಅಥವಾ ಮಾರಾಟ ಮಾಡಲು ಹಿಂದೆ ಮುಂದೆ ನೋಡುವುದಿಲ್ಲ ಎಂದು ಇನ್ಸ್ಟಾಗ್ರಾಮ್ನಲ್ಲಿ ಮನ್ನತ್ ಕುಲ್ಹಾರಿಯಾ ವಿಡಿಯೋದಲ್ಲಿ ಹೇಳಿರುವ ಹೇಳಿಕೆ ಎಲ್ಲೆಡೆ ಸುದ್ದಿಯಾಗಿದೆ. ಶ್ರೀದೇವಿ ಹಾಗೂ ಅನಿಲ್ ಕಪೂರ್ ಜೊತೆಯಾಗಿ ನಟಿಸಿದ್ದ ಜುಡಾಯಿ ಚಿತ್ರದಲ್ಲಿ ನಾಯಕಿ ಹೇಗೆ ತನ್ನ ಗಂಡನನ್ನು ಮಾರಾಟ ಮಾಡಲು ಯೋಚಿಸುವುದಿಲ್ಲವೋ ಅದೇ ರೀತಿ ನಾನು ಸಹ ಯಾವುದೇ ಆಲೋಚನೆ ಇಲ್ಲದೇ ಆತನನ್ನು ಮಾರುತ್ತೇನೆ. ಆತ ಬೆಲೆಯಿಲ್ಲದ ವಸ್ತು ಆಗಿರುವುದರಿಂದ ನಾನು ಆತನನ್ನು ಮಾರಾಟ

ನವದೆಹಲಿ: ನಾನು ಹಣಕ್ಕಾಗಿ ಗಂಡನನ್ನು ಮಾರಾಟ ಮಾಡಲು ಹಿಂದೆ ಮುಂದೆ ನೋಡುವುದಿಲ್ಲ- ಮನ್ನತ್ ಕುಲ್ಹಾರಿಯಾ Read More »

ಧಾರವಾಡ:ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿದ್ಯಾಕಾಶಿ ಧಾರವಾಡಕ್ಕೆ 23ನೇ ಸ್ಥಾನ

ಸಮಗ್ರ ನ್ಯೂಸ್‌ : ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾಕಾಶಿ ಧಾರವಾಡ ಈ ಫಲಿತಾಂಶದಲ್ಲಿ 23ನೇ ಸ್ಥಾನ ಪಡೆದುಕೊಂಡಿದೆ. ಕಳೆದ ಬಾರಿ ಶೇ.73.4 ರಷ್ಟು ಫಲಿತಾಂಶ ಕಂಡು 27ನೇ ಸ್ಥಾನದಲ್ಲಿದ್ದ ಧಾರವಾಡ, ಪ್ರಸಕ್ತ ವರ್ಷ ಶೇ.80.7 ರಷ್ಟು ಫಲಿತಾಂಶ ಮಾಡಿ 23ನೇ ಸ್ಥಾನಕ್ಕೇರಿದೆ. ಹುಬ್ಬಳ್ಳಿ ವಿದ್ಯಾನಿಕೇತನ ಪಿಯು ಕಾಲೇಜಿನ ವಿದ್ಯಾರ್ಥಿನಿ ವಿದ್ಯಾ 598 ಅಂಕ ಪಡೆದು ವಿಜ್ಞಾನ ವಿಭಾಗದಲ್ಲಿ ಮೊದಲ ಬ್ಯಾಂಕ್ ಪಡೆದುಕೊಂಡಿದ್ದು, ಕಲಾ ವಿಭಾಗದಲ್ಲಿ ಧಾರವಾಡದ ಕೆ.ಇ. ಬೋರ್ಡ್ ಪಿಯು ಕಾಲೇಜಿನ ವಿದ್ಯಾರ್ಥಿನಿ ರವೀನಾ ಲಮಾಣಿ

ಧಾರವಾಡ:ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿದ್ಯಾಕಾಶಿ ಧಾರವಾಡಕ್ಕೆ 23ನೇ ಸ್ಥಾನ Read More »

ಹುಬ್ಬಳ್ಳಿ: ಗಾಂಜಾ ಘಾಟು| ಅಲರ್ಟ್ ಆದ CEN ಪೊಲೀಸರು

ಸಮಗ್ರ ನ್ಯೂಸ್‌ : ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ಗಾಂಜಾ ಮಾರಾಟ, ಸಾಗಾಟ ಹೆಚ್ಚಾಗಿದೆ. ದಿನದಿಂದ ದಿನಕ್ಕೆ ಗಾಂಜಾ ಪ್ರಕರಣಗಳು ಏರುತ್ತಲೇ ಇವೆ. ಇದಕ್ಕೆಲ್ಲ ಕಡಿವಾಣ ಹಾಕುವ ನಿಟ್ಟಿನಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸರು ಅಭಿಯಾನ ಆರಂಭಿಸಿದ್ದಾರೆ. ಅದರಂತೆ ಇಂದು CEN ಪೊಲೀಸರು ಹುಬ್ಬಳ್ಳಿಯ ಹೊಸ ಬಸ್‌ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ಜನಜಂಗುಳಿ ಪ್ರದೇಶದಲ್ಲಿ ಇನ್ಸ್‌ಪೆಕ್ಟರ್ ಬಿ.ಕೆ ಪಾಟೀಲ್ ನೇತೃತ್ವದಲ್ಲಿ ಅನುಮಾನಾಸ್ಪದ ಜನರನ್ನು ತಡೆದು ಶ್ವಾನದಳದಿಂದ ತಪಾಸಣೆ ನಡೆಸಿದ್ದಾರೆ. ಈ ವೇಳೆ ಸಾರ್ವಜನಿಕರಿಗೆ ಗಾಂಜಾ ಮಾರಾಟ ಹಾಗೂ ಸಾಗಾಟ ಕಂಡು ಬಂದಲ್ಲಿ,

ಹುಬ್ಬಳ್ಳಿ: ಗಾಂಜಾ ಘಾಟು| ಅಲರ್ಟ್ ಆದ CEN ಪೊಲೀಸರು Read More »