April 2024

ಆಮ್ ಆದ್ಮಿಗೆ ಮತ್ತೊಂದು ಶಾಕ್/ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ವಜಾ

ಸಮಗ್ರ ನ್ಯೂಸ್: ದೆಹಲಿ ಮದ್ಯನೀತಿ ಹಗರಣ ಪ್ರಕರಣದಲ್ಲಿ ಜೈಲು ಸೇರಿರುವ ಅರವಿಂದ್ ಕೇಜ್ರಿವಾಲ್‌ಗೆ ಮತ್ತೊಂದು ಸಮಸ್ಯೆ ಎದುರಾಗಿದ್ದು, ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ವಿರುದ್ಧ ವಿಜಿಲೆನ್ಸ್ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, ಅವರನ್ನು ವಜಾಗೊಳಿಸಲಾಗಿದೆ. ವಿಭವ್ ಕುಮಾರ್ ನೇಮಕ ಪ್ರಕ್ರಿಯೆ ಸರಿಯಾಗಿ ನಡೆದಿರಲಿಲ್ಲ ಎನ್ನುವ ಕಾರಣ ಕೊಟ್ಟು ಅವರನ್ನು ವಿಚಕ್ಷಣ ಇಲಾಖೆ ವಜಾಗೊಳಿಸಿದೆ. ಅರವಿಂದ್ ಕೇಜಿವಾಲ್ ಅವರ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ಅವರನ್ನು ಕೆಲವು ದಿನಗಳ ಹಿಂದೆ ಇಡಿ ವಿಚಾರಣೆ ನಡೆಸಿದ ಸಮಯದಲ್ಲಿ ವಿಜಿಲೆನ್ಸ್ […]

ಆಮ್ ಆದ್ಮಿಗೆ ಮತ್ತೊಂದು ಶಾಕ್/ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ವಜಾ Read More »

ರೈಲ್ವೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ, ಮಿಸ್ ಮಾಡದೇ ಅಪ್ಲೈ ಮಾಡಿ

ಸಮಗ್ರ ಉದ್ಯೋಗ:ಆಗ್ನೇಯ ಮಧ್ಯ ರೈಲ್ವೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 733 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್​ 12ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಏಪ್ರಿಲ್ 19, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ರೈಲ್ವೆ ಇಲಾಖೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಅಪ್ಲೈ ಮಾಡಿ. ಅಭ್ಯರ್ಥಿಗಳು ಆನ್​​ಲೈನ್ ಮೂಲಕ ಅರ್ಜಿ ಹಾಕಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ಹುದ್ದೆಯ ಮಾಹಿತಿ:ಕಾರ್ಪೆಂಟರ್- 38COPA-

ರೈಲ್ವೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ, ಮಿಸ್ ಮಾಡದೇ ಅಪ್ಲೈ ಮಾಡಿ Read More »

ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅಪ್ಲೈ ಮಾಡಿ, 42,000 ಸಂಬಳ!

ಸಮಗ್ರ ಉದ್ಯೋಗ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಸೀನಿಯರ್ ರಿಸರ್ಚ್​ ಫೆಲೋ (SRF) ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 18, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಇ-ಮೇಲ್ ಮಾಡುವ ಮೂಲಕ ಅಪ್ಲೈ ಮಾಡಿ. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಶೈಕ್ಷಣಿಕ

ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅಪ್ಲೈ ಮಾಡಿ, 42,000 ಸಂಬಳ! Read More »

ದ್ವಿತೀಯ ಪಿಯು ಪರೀಕ್ಷೆಯಲ್ಲಿ ಕೊಡಗಿನ ತಾಯಿ ಮಗಳು ಪಾಸ್!

ಸಮಗ್ರ ನ್ಯೂಸ್: ಕುಶಾಲನಗರ ತಾಲೂಕಿನ ಕೂಡ್ಲೂರು ಚೆಟ್ಟಳ್ಳಿ ಗ್ರಾಮದ ರಿನಿಶಾ ಹಾಗು ಅವಳ ತಾಯಿ ಬೇಬಿರಾಣಿ 2023-24ನೇ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.! ಗೋಣಿಕೊಪ್ಪಲಿನ ವಿದ್ಯಾನಿಕೇತನ ಕಾಲೇಜಿನಲ್ಲಿ ಓದುತಿರುವ ಎಲೆಕ್ಟ್ರಿಕಲ್ ಕ್ಲಾಸ್ 1 ಗುತ್ತಿಗೆದಾರ ಸುರೇಂದ್ರ.ಟಿ.ಕೆ ರವರ ಪುತ್ರಿ ರಿನಿಶಾ ಟಿ.ಎಸ್ 600ಕ್ಕೆ 570 ಪಡೆದು ಅತ್ಯುನ್ನತ ಅಂಕ ಪಡೆದರೆ ಅವಳ ತಾಯಿ ಬೇಬಿರಾಣಿ.ಎಂ. ಯು. ನೆಲ್ಲಿಹುದಿಕೇರಿ ಜೂನಿಯರ್ ಕಾಲೇಜಿನಲ್ಲಿ ಖಾಸಗಿ ಅಭ್ಯರ್ಥಿಯಾಗಿ ಪರೀಕ್ಷೆ ಬರೆದು 600ಕ್ಕೆ 388 ಪಡೆಯುವ ಮೂಲಕ ಒಂದೇ ವರ್ಷದಲ್ಲಿ ತಾಯಿಮಗಳು ಪಿಯುಸಿ

ದ್ವಿತೀಯ ಪಿಯು ಪರೀಕ್ಷೆಯಲ್ಲಿ ಕೊಡಗಿನ ತಾಯಿ ಮಗಳು ಪಾಸ್! Read More »

ಶ್ರೀರಾಮ ನವಮಿ ದಿನದಂದು ಈ ಕೆಲಸಗಳನ್ನು ಮಾಡಿ, ಕಷ್ಟಗಳೆಲ್ಲ ಮಾಯವಾಗುತ್ತೆ!

ಶ್ರೀರಾಮ ಯುಗಪುರುಷ. ಅವರ ಜೀವನ ಪ್ರಾಯೋಗಿಕವಾಗಿತ್ತು. ಅವರು ಏಕಪತ್ನಿಯಾಗಿ ಖ್ಯಾತಿಯನ್ನು ಪಡೆದರು. ಅದಕ್ಕಾಗಿಯೇ ಜನರು ಪ್ರತಿ ವರ್ಷ ಚೈತ್ರ ಮಾಸದ ಶುಕ್ಲ ಪಕ್ಷದ ಒಂಬತ್ತನೇ ದಿನದಂದು ಮಂಗಳಕರವಾದ ಶ್ರೀ ರಾಮನವಮಿಯನ್ನು ಆಚರಿಸುತ್ತಾರೆ. ಈ ವರ್ಷ ಏಪ್ರಿಲ್ 17ರ ಬುಧವಾರದಂದು ನವಮಿ ಆಚರಣೆ ನಡೆಯಲಿದೆ. ಈ ಸಂದರ್ಭದಲ್ಲಿ ನಾಡಿನಾದ್ಯಂತ ಶ್ರೀರಾಮ ಶೋಭಾಯಾತ್ರೆಗಳನ್ನು ಆಯೋಜಿಸಲಾಗಿದೆ. ಆದರೆ ಈ ಹಬ್ಬವು ಜೀವನದಲ್ಲಿ ಅನೇಕ ಸವಾಲುಗಳು, ಸಮಸ್ಯೆಗಳು, ಕಷ್ಟಗಳು ಮತ್ತು ಸಂಕಟಗಳಿಂದ ಹೊರಬರಲು ಹಲವು ಮಾರ್ಗಗಳನ್ನು ತೋರಿಸುತ್ತದೆ. ನವಮಿಯಂದು ನೀವು ಕೆಲವು ಕೆಲಸಗಳನ್ನು

ಶ್ರೀರಾಮ ನವಮಿ ದಿನದಂದು ಈ ಕೆಲಸಗಳನ್ನು ಮಾಡಿ, ಕಷ್ಟಗಳೆಲ್ಲ ಮಾಯವಾಗುತ್ತೆ! Read More »

ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರದಲ್ಲಿ ಜಾಬ್ ಖಾಲಿ ಇದೆ, ತಿಂಗಳಿಗೆ 35,000 ಸಂಬಳ!

ಸಮಗ್ರ ಉದ್ಯೋಗ: ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್​-ಬಿ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಏಪ್ರಿಲ್ 30, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ & ಆಫ್​​ಲೈನ್​ ಮೂಲಕ ಅರ್ಜಿ ಹಾಕಬೇಕು. ಶೈಕ್ಷಣಿಕ ಅರ್ಹತೆ:ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ

ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರದಲ್ಲಿ ಜಾಬ್ ಖಾಲಿ ಇದೆ, ತಿಂಗಳಿಗೆ 35,000 ಸಂಬಳ! Read More »

ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ಚಿನ್ನದ ಬೆಲೆ/ 10 ಗ್ರಾಂ ಚಿನ್ನದ ಬೆಲೆ ರೂ. 74,000

ಸಮಗ್ರ ನ್ಯೂಸ್: ಚಿನ್ನ ಮತ್ತು ಬೆಳ್ಳಿ ಬೆಲೆ ದರ ಏರಿಕೆ ಮುಂದುವರೆದಿದ್ದು, ಎರಡೂ ಲೋಹಗಳ ಬೆಲೆ ಬುಧವಾರ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ. ಬೆಂಗಳೂರು ಚಿನಿವಾರ ಪೇಟೆಯಲ್ಲಿ 99.5 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 74060 ರು.ಗೆ ತಲುಪಿದೆ. ಇನ್ನು ಬೆಳ್ಳಿ ಬೆಲೆ ಕೆಜಿಗೆ 84600 ರು. ತಲುಪಿದೆ. ಇನ್ನು ಮುಂಬೈನಲ್ಲಿ 99.5 ಕ್ಯಾರೆಟ್ ಶುದ್ಧತೆಯ ಚಿನ್ನದ ಬೆಲೆ 10 ಗ್ರಾಂಗೆ 71535 ರು. ತಲುಪಿದ್ದರೆ, 99.9 ಶುದ್ಧತೆಯ ಚಿನ್ನದ ಬೆಲೆ 71823 ರು.ಗೆ ತಲುಪಿದೆ.

ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ಚಿನ್ನದ ಬೆಲೆ/ 10 ಗ್ರಾಂ ಚಿನ್ನದ ಬೆಲೆ ರೂ. 74,000 Read More »

ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರಿಶೀಲನೆ/ ಸಚಿವ ದಿನೇಶ್ ಗುಂಡೂರಾವ್ ಆದೇಶ

ಸಮಗ್ರ ನ್ಯೂಸ್: ಪತಂಜಲಿ ಆಯುರ್ವೇದದ ಜಾಹೀರಾತುಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾದ ಉತ್ತರಾಖಂಡದ ಔಷದ ಪರವಾನಗಿ ಮತ್ತು ನಿಯಂತ್ರಣ ಪ್ರಾಧಿಕಾರವನ್ನು ಸುಪ್ರೀಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ರಾಜ್ಯದಲ್ಲಿ ಪತಂಜಲಿಯ ಎಲ್ಲ ಉತ್ಪನ್ನಗಳ ಪರಿಶೀಲನೆ ಮಾಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಆದೇಶಿಸಿದ್ದಾರೆ. ರಾಜ್ಯದಲ್ಲಿ ಪತಂಜಲಿ ಆಯುರ್ವೇದ ಲಿಮಿಟೆಡ್‌ನಿಂದ ಬರುವ ಎಲ್ಲ ಉತ್ಪನ್ನಗಳ ಗುಣಮಟ್ಟ ಪರಿಶೀಲನೆ ನಡೆಸಲಾಗುತ್ತದೆ. ಎಲ್ಲ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷಿಸಲು ಔಷದ ನಿಯಂತ್ರಣ ಇಲಾಖೆ ಮತ್ತು ಆಯುಷ್ ಆಯುಕ್ತರಿಗೆ

ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರಿಶೀಲನೆ/ ಸಚಿವ ದಿನೇಶ್ ಗುಂಡೂರಾವ್ ಆದೇಶ Read More »

ಹವಾಮಾನ ವರದಿ|ಆರು ದಿನಗಳ ಕಾಲ ರಾಜ್ಯದ ವಿವಿದೆಡೆ ಮಳೆ| ಹವಾಮಾನ ಇಲಾಖೆ ಮುನ್ಸೂಚನೆ

ಸಮಗ್ರ ನ್ಯೂಸ್: ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಯಾದಗಿರಿ, ರಾಯಚೂರು, ಗದಗ, ಹಾವೇರಿ, ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ ಮತ್ತು ಹಾಸನ ಜಿಲ್ಲೆಯ ಒಂದೆರಡು ಕಡೆ ಗುರುವಾರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ ಹೊರತುಪಡಿಸಿ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಶುಕ್ರವಾರ ಮಳೆಯಾಗುವ ಸಂಭವವಿದೆ. ಕರಾವಳಿಯ ಜಿಲ್ಲೆಗಳಲ್ಲಿ ಶನಿವಾರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿಯೂ

ಹವಾಮಾನ ವರದಿ|ಆರು ದಿನಗಳ ಕಾಲ ರಾಜ್ಯದ ವಿವಿದೆಡೆ ಮಳೆ| ಹವಾಮಾನ ಇಲಾಖೆ ಮುನ್ಸೂಚನೆ Read More »

ಬೆಳಗಾವಿ:ಹಾವು ಕಚ್ಚಿ ಎರಡೂವರೆ ವರ್ಷದ ಬಾಲಕಿ ಸಾವು

ಸಮಗ್ರ ನ್ಯೂಸ್‌ : ಹಾವು ಕಚ್ಚಿ ಎರಡೂವರೆ ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ನಡೆದಿದೆ. ಬಾಲಕಿ ಮನೆ ಹೊರಗೆ ಆಟ ಆಡುತ್ತಿದ್ದಾಗ ಹಾವು ಕಚ್ಚಿದ್ದು, ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜವಾಗದೆ 2.6 ವರ್ಷದ ತ್ರಿವೇಣಿ ಮೃತಪಟ್ಟಿದ್ದಾಳೆ. ಮನೆ ಹೊರಗೆ ಆಟವಾಡುತ್ತಿದ್ದಾಗ ಬಾಲಕಿಗೆ ಎರಡು ಬಾರಿ ಹಾವು ಕಚ್ಚಿದೆ. ಇದರಿಂದ ಅಸ್ವಸ್ಥಳಾಗಿದ್ದ ಬಾಲಕಿಯನ್ನು ಚಿಕ್ಕೋಡಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೇ ತ್ರಿವೇಣಿ ಕೊನೆಯುಸಿರೆಳೆದಿದ್ದಾಳೆ.

ಬೆಳಗಾವಿ:ಹಾವು ಕಚ್ಚಿ ಎರಡೂವರೆ ವರ್ಷದ ಬಾಲಕಿ ಸಾವು Read More »