April 2024

ಉದ್ಯೋಗ ಹುಡುಕುತಿದ್ದೀರಾ? ಹಾಗಾದ್ರೆ ಇಲ್ಲಿದೆ ನಿಮಗೆ ಅವಕಾಶ!

ಸಮಗ್ರ ಉದ್ಯೋಗ: ಕೇಂದ್ರ ಲೋಕಸೇವಾ ಆಯೋಗ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 147 ಸೈಂಟಿಸ್ಟ್​-ಬಿ, ಸ್ಪೆಷಲಿಸ್ಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 17 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಹಾಕಿ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಹುದ್ದೆಯ ಮಾಹಿತಿ:ಸೈಂಟಿಸ್ಟ್-ಬಿ- 12ಆಂಥ್ರೋಪಾಲಜಿಸ್ಟ್​- 1ಸ್ಪೆಷಲಿಸ್ಟ್​ ಗ್ರೇಡ್-3 ಅಸಿಸ್ಟೆಂಟ್ ಪ್ರೊಫೆಸರ್- 123ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್- 4ಅಸಿಸ್ಟೆಂಟ್ […]

ಉದ್ಯೋಗ ಹುಡುಕುತಿದ್ದೀರಾ? ಹಾಗಾದ್ರೆ ಇಲ್ಲಿದೆ ನಿಮಗೆ ಅವಕಾಶ! Read More »

ಪೇಟಿಎಂ ಸಿಇಒ ಸುರೀಂದರ್ ಚಾವ್ಹಾ ರಾಜೀನಾಮೆ

ಸಮಗ್ರ ನ್ಯೂಸ್: ಪೇಟಿಎಂ ಪೇಮೆಂಟ್ ಬ್ಯಾಂಕ್‍ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಆಡಳಿತ ನಿರ್ದೇಶಕ ಹುದ್ದೆಗೆ ಸುರೀಂದರ್ ಚಾವ್ಹಾ ರಾಜೀನಾಮೆ ನೀಡಿದ್ದಾರೆ. ಸುರೀಂದರ್ ಚಾವ್ಹಾ ವೈಯಕ್ತಿಕ ಕಾರಣಗಳಿಂದಾಗಿ ಏ.8, 2024 ರಂದು ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದು, ಅವರು ಜೂ.26, 2024 ರಂದು ತಮ್ಮ ಕರ್ತವ್ಯದಿಂದ ಬಿಡುಗಡೆಗೊಳ್ಳಲಿದ್ದಾರೆ ಎಂದು ಪೇಟಿಎಂ ಷೇರು ಪೇಟೆಗೆ ನೀಡಿದ ಮಾಹಿತಿಯಲ್ಲಿ ಉಲ್ಲೇಖಿಸಿದೆ.

ಪೇಟಿಎಂ ಸಿಇಒ ಸುರೀಂದರ್ ಚಾವ್ಹಾ ರಾಜೀನಾಮೆ Read More »

ಮಂಡ್ಯ ಅಖಾಡಕ್ಕೆ ರಮ್ಯಾ ಎಂಟ್ರಿ/ ಸಕ್ಕರೆ ನಾಡಿನಲ್ಲಿ ಮೋಡಿ ಮಾಡುತ್ತಾರಾ ಮೋಹಕ ತಾರೆ?

ಸಮಗ್ರ ನ್ಯೂಸ್: ಮಂಡ್ಯ ಅಖಾಡದಲ್ಲಿ ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ಗೆಲುವಿಗೆ ತಂತ್ರ ರೂಪಿಸುತ್ತಿರುವ, ಬೆನ್ನಲ್ಲೇ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಮಾಜಿ ಸಂಸದೆ, ನಟಿ ರಮ್ಯಾ ಪ್ರಚಾರಕ್ಕೆ ಅಖಾಡಕ್ಕೆ ಇಳಿಯಲು ಒಪ್ಪಿಗೆ ಸೂಚಿಸಿದ್ದಾರೆ. ರಮ್ಯ ಅವರನ್ನು ಪ್ರಚಾರಕ್ಕೆ ಕರೆಸಿ ಮತದಾರರನ್ನ ಸೆಳೆಯಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್ ಮಾಡಿದ್ದು, ರಮ್ಯಾ ಜೊತೆ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಈಗಾಗಲೇ ಮಾತುಕತೆ ನಡೆಸಿದ್ದಾರೆ. ಮಂಡ್ಯ ಕ್ಷೇತ್ರದ ಕ್ಯಾಂಪೇನ್‍ಗೆ ಬರಲು ಅವರು ಒಪ್ಪಿಗೆ ಸೂಚಿಸಿದ್ದು, ಮುಂದಿನ ವಾರ ಅಭ್ಯರ್ಥಿ

ಮಂಡ್ಯ ಅಖಾಡಕ್ಕೆ ರಮ್ಯಾ ಎಂಟ್ರಿ/ ಸಕ್ಕರೆ ನಾಡಿನಲ್ಲಿ ಮೋಡಿ ಮಾಡುತ್ತಾರಾ ಮೋಹಕ ತಾರೆ? Read More »

ತಿರುವನಂತಪುರಂ: ಪ್ರಣಾಳಿಕೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಉಲ್ಲೇಖವಿಲ್ಲ ಎಂದು ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ ಪಿಣರಾಯಿ

ಸಮಗ್ರ ನ್ಯೂಸ್‌ : ಲೋಕಸಭಾ ಪ್ರಣಾಳಿಕೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಯಾವುದೇ ಉಲ್ಲೇಖ ಮಾಡದ್ದಕ್ಕೆ ಕಾಂಗ್ರೆಸ್‌ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಾಗ್ದಾಳಿ ನಡೆಸಿದ್ದಾರೆ. ಕೊಲ್ಲಂನಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದರೆ ಜಿಎಸ್‌ಟಿ ಸೇರಿ, ಸಂವಿಧಾನವನ್ನು ಉಲ್ಲಂಘಿಸಿ ಜಾರಿಗೆ ತರಲಾದ ಹಲವು ಕಾನೂನುಗಳನ್ನು ವಾಪಸ್ ಪಡೆಯುವುದಾಗಿ ಕಾಂಗ್ರೆಸ್‌ ಹೇಳಿದೆ. ಆದರೆ ಸಿಎಎ ಬಗ್ಗೆ ಒಂದು ಶಬ್ದವನ್ನೂ ಉಲ್ಲೇಖಿಸಿಲ್ಲ ಎಂದು ಕಿಡಿಕಾರಿದರು. ಉದ್ದೇಶಪೂರ್ವಕವಾಗಿಯೇ ಸಿಎಎಯನ್ನು ಹೊರಗಿಡಲಾಗಿದೆ. ವಿವಾದಾತ್ಮಕ ವಿಷಯಗಳ ಬಗ್ಗೆ ಪ್ರಸ್ತಾಪಿಸಲು ಕಾಂಗ್ರೆಸ್‌ಗೆ

ತಿರುವನಂತಪುರಂ: ಪ್ರಣಾಳಿಕೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಉಲ್ಲೇಖವಿಲ್ಲ ಎಂದು ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ ಪಿಣರಾಯಿ Read More »

ಸಿಗದ ಬರ ಪರಿಹಾರ/ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ಕಾಂಗ್ರೆಸ್

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬಿಡುಗಡೆಗೆ ಲೋಕಸಭೆ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗಿದೆ ಎಂದು ಕೇಂದ್ರ ಸಚಿವರಾದ ಅಮಿತ್ ಶಾ ಹಾಗೂ ನಿರ್ಮಲಾ ಸೀತಾರಾಮನ್ ಹೇಳಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ಮಾಜಿ ಸಂಸದ ಉಗ್ರಪ್ಪ ನೇತೃತ್ವದ ನಿಯೋಗ ತೆರಳಿ ದೂರು ನೀಡಿದ್ದು, ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಎಂದು ಕಾಂಗ್ರೆಸ್ ಆಯೋಗಕ್ಕೆ ದೂರು

ಸಿಗದ ಬರ ಪರಿಹಾರ/ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ಕಾಂಗ್ರೆಸ್ Read More »

ಕನ್ನಡದಲ್ಲಿ ಎಕ್ಸ್ ಖಾತೆ ಆರಂಭಿಸಿದ ಮೋದಿ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಹೊತ್ತಿನಲ್ಲಿ, ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಕನ್ನಡದ ಪ್ರತ್ಯೇಕ ಚಾನೆಲ್‍ನ್ನು ಆರಂಭಿಸಿದ್ದಾರೆ. ಕನ್ನಡ ಮತದಾರರನ್ನು ತಲುಪುವ ಉದ್ದೇಶದಿಂದಾಗಿ ನಮೋ ಕನ್ನಡ ಎಂಬ ಹೆಸರಿನಲ್ಲಿ ಕನ್ನಡದ ಟ್ವಿಟರ್ ಖಾತೆ ಆರಂಭಿಸಲಾಗಿದೆ. ಪ್ರಧಾನಿ ಮೋದಿ ಅವರ ಕಾರ್ಯಕ್ರಮಗಳು, ಭಾಷಣಗಳು ಹಾಗೂ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಖಾತೆ ಆರಂಭ ಮಾಡಲಾಗಿದೆ.

ಕನ್ನಡದಲ್ಲಿ ಎಕ್ಸ್ ಖಾತೆ ಆರಂಭಿಸಿದ ಮೋದಿ Read More »

ಉಡುಪಿ ಏ.12ರಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪನಾ ದಿನಾಚರಣೆ

ಸಮಗ್ರ ನ್ಯೂಸ್‌ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಸಂಘದ ಸ್ಥಾಪನಾ ದಿನಾಚರಣೆಯನ್ನು ಏ.12ರಂದು ಬೆಳಗ್ಗೆ 10.30ಕ್ಕೆ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ತಿಳಿಸಿದ್ದಾರೆ. ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು 1997ರಲ್ಲಿ ಉಡುಪಿ ಪ್ರತ್ಯೇಕ ಜಿಲ್ಲೆಯಾಗಿ ರಚನೆಗೊಂಡ ಬಳಿಕ ಉಡುಪಿ

ಉಡುಪಿ ಏ.12ರಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪನಾ ದಿನಾಚರಣೆ Read More »

ಲಕ್ಷದ್ವೀಪದಲ್ಲಿ ಶಾಖೆ ತೆರೆದ ಎಚ್‍ಡಿಎಫ್‍ಸಿ

ಸಮಗ್ರ ನ್ಯೂಸ್: ಲಕ್ಷದ್ವೀಪದ ಕವರಟ್ಟಿಯಲ್ಲಿ ದೇಶದ ಅತಿ ದೊಡ್ಡ ಖಾಸಗಿ ಬ್ಯಾಂಕ್ ಎನಿಸಿರುವ ಎಚ್‍ಡಿಎಫ್‍ಸಿ ತನ್ನ ಮೊದಲ ಶಾಖೆ ತೆರೆಯುವ ಮೂಲಕ ಲಕ್ಷದ್ವೀಪದಲ್ಲಿ ಶಾಖೆ ತೆರೆದ ಮೊದಲ ಖಾಸಗಿ ಬ್ಯಾಂಕ್ ಎನಿಸಿಕೊಂಡಿದೆ. ‘ಜನರು ಎಲ್ಲಿರುತ್ತಾರೋ ಅಲ್ಲಿಯೇ ಸೇವೆಯನ್ನು ಒದಗಿಸಬೇಕು ಎನ್ನುವುದು ನಮ್ಮ ಬ್ಯಾಂಕ್‍ನ ಉದ್ದೇಶ. ಲಕ್ಷದ್ವೀಪದಲ್ಲಿರುವ ವ್ಯಕ್ತಿಗಳಿಗೆ, ಕುಟುಂಬಗಳಿಗೆ ಹಾಗೂ ಉದ್ಯಮದಾರರಿಗೆ ಸೇವೆಯನ್ನು ನೀಡಲು ಉತ್ಸುಕರಾಗಿದ್ದೇವೆ’ ಎಂದು ಬ್ಯಾಂಕ್‍ನ ಮುಖ್ಯಸ್ಥ ಎಸ್. ಸಂಪತ್‍ಕುಮಾರ್ ತಿಳಿಸಿದ್ದಾರೆ. ಭಾರತೀಯ ನೌಕಾಪಡೆಯ ಕಮಾಂಡಿಂಗ್ ಅಧಿಕಾರಿ ಕ್ಯಾಪ್ಟನ್ ಲವಕೇಶ್ ಅವರು ಲಕ್ಷದ್ವೀಪದಲ್ಲಿ ಕಾರ್ಯಾರಂಭ

ಲಕ್ಷದ್ವೀಪದಲ್ಲಿ ಶಾಖೆ ತೆರೆದ ಎಚ್‍ಡಿಎಫ್‍ಸಿ Read More »

ಸೋಮವಾರಪೇಟೆ : ವಿವಿದೆಢೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡರಿಂದ ಭರ್ಜರಿ ಚುನಾವಣಾ ಪ್ರಚಾರ

ಸಮಗ್ರ ನ್ಯೂಸ್‌ : ಸೋಮವಾರಪೇಟೆ ತಾಲೂಕು ವ್ಯಾಪ್ತಿಯಲ್ಲಿ ಕೊಡಗು ಮೈಸೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಅವರಿಂದ ಭರ್ಜರಿ ಚುನಾವಣಾ ಪ್ರಚಾರ ನಡೆಯಿತು. ಕೊಡ್ಲಿಪೇಟೆ, ಬ್ಯಾಡಗೊಟ್ಟ, ಬೆಸ್ಸೂರು, ಹಂಡ್ಲಿ ಮತ್ತು ಶನಿವಾರಸಂತೆಯಲ್ಲಿ ಮತಯಾಚನೆ ಮಾಡಿದರು. ಕೊಡ್ಲಿಪೇಟೆಯ ಶ್ರೀ ಬಸವೇಶ್ವರ ದೇವಾಲಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಪೂಜೆ ಸಲ್ಲಿಸಿದರು. ಈ ಸಂದರ್ಭ ಕಿರಿಕೊಡ್ಲಿ ಮಠಾಧೀಶರಾದ ಸದಾಶಿವ ಸ್ವಾಮೀಜಿ, ಕೆಪಿಸಿಸಿ ಮುಖಂಡರಾದ ಹೆಚ್.ಎಸ್.ಚಂದ್ರಮೌಳಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಹಾಜರಿದ್ದರು. ಹಂಡ್ಲಿ ಸರ್ಕಲ್ ನಲ್ಲಿ ನಡೆದ

ಸೋಮವಾರಪೇಟೆ : ವಿವಿದೆಢೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡರಿಂದ ಭರ್ಜರಿ ಚುನಾವಣಾ ಪ್ರಚಾರ Read More »

ಎ.14ರ ಮಂಗಳೂರಿನಲ್ಲಿ ಮೋದಿ ಸಮಾವೇಶ ದಿಢೀರ್ ರದ್ದು| ರೋಡ್ ಶೋ ಸೀಮಿತವಾದ ನಮೋ ಭೇಟಿ

ಸಮಗ್ರ ನ್ಯೂಸ್: ಮಂಗಳೂರು ನಗರದ ಬಂಗ್ರ ಕೂಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ಎಪ್ರಿಲ್ 14ರಂದು ನಡೆಯಬೇಕಿದ್ದ ಪ್ರಧಾನಿ ನರೇಂದ್ರ ಮೋದಿಯವರ ಸಮಾವೇಶ ಕೊನೆಯ ಕ್ಷಣದಲ್ಲಿ ರದ್ದಾಗಿದ್ದು, ಸಮಾವೇಶದ ಬದಲು ಬರೀ ರೋಡ್ ಶೋ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ. ಕುಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸುವುದಕ್ಕೆ ಬಿಜೆಪಿ ಸಿದ್ದತೆ ನಡೆಸಿತ್ತು. ಕರಾವಳಿಯ ಎರಡು ಜಿಲ್ಲೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ ಅಭ್ಯರ್ಥಿಗಳಲ್ಲಿ ಹೊಸ ಹುರುಪು ತಂದಿತ್ತು, ಅಲ್ಲದೆ ಬಿಜೆಪಿ ಕೂಡ ದಾಖಲೆ ಮಟ್ಟದಲ್ಲಿ ಜನರನ್ನು

ಎ.14ರ ಮಂಗಳೂರಿನಲ್ಲಿ ಮೋದಿ ಸಮಾವೇಶ ದಿಢೀರ್ ರದ್ದು| ರೋಡ್ ಶೋ ಸೀಮಿತವಾದ ನಮೋ ಭೇಟಿ Read More »