April 2024

ಹೆಣ್ಣು ಮಗುವಿಗೆ ಜನ್ಮ ನೀಡಿದ ಅದಿತಿ ಪ್ರಭುದೇವ| ಮಗುವಿನೊಂದಿಗೆ ಪೋಟೋ ಹಂಚಿಕೊಂಡ ನಟಿ

ಸಮಗ್ರ ನ್ಯೂಸ್: ಕನ್ನಡ ಚಿತ್ರರಂಗದ ನಟಿ ಅದಿತಿ ಪ್ರಭುದೇವ ಅವರು ತಾಯಿಯಾಗುತ್ತಿರುವ ವಿಷಯ ಎಲ್ಲರಿಗೂ ತಿಳಿದಿರುವಂತಹದು. ಆದ್ರೆ ಇದೀಗ ಹೆಣ್ಣು ಮಗುವಿಗೆ ಅವರು ಜನ್ಮ ನೀಡಿದ್ದಾರೆ ಎಂಬ ವಿಚಾರವನ್ನು ಸ್ವತಃ ಅದಿತಿ ಪ್ರಭುದೇವ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರು ಇನ್ಸ್ಟಾಗ್ರಾಮ್ ನಲ್ಲಿ ಹಾಕಿದ ಪೋಟೋಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಆ ಪೋಸ್ಟ್ ನಲ್ಲಿ ಹೆಣ್ಣು ಮಗುವಿನ ಪುಟ್ಟ ಕೈಯನ್ನು ಅದಿತಿ ಅವರು ಶೇರ್​ ಮಾಡಿಕೊಂಡಿದ್ದಾರೆ. ಈಗ ಎಲ್ಲರಿಂದ ಶುಭಾಶಯದ ಮಹಾಪೂರವೆ ಹರಿದು ಬರುತ್ತಿದೆ. ಆದ್ರೆ ಅದಿತಿ […]

ಹೆಣ್ಣು ಮಗುವಿಗೆ ಜನ್ಮ ನೀಡಿದ ಅದಿತಿ ಪ್ರಭುದೇವ| ಮಗುವಿನೊಂದಿಗೆ ಪೋಟೋ ಹಂಚಿಕೊಂಡ ನಟಿ Read More »

ಉಡುಪಿ:ಡಿವೈಡರ್ ಗೆ ಡಿಕ್ಕಿ ಹೊಡೆದ ಇನ್ನೋವಾ ಕಾರು|ಓರ್ವ ಮೃತ್ಯು;ಇಬ್ಬರು ಗಂಭೀರ

ಸಮಗ್ರ ನ್ಯೂಸ್‌ : ಚಾಲಕ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರದ ಕೆಎಸ್‌ಆರ್‌ಟಿಸಿ ಡಿಪೋ ಎದುರುಗಡೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ಕೇರಳ ರಾಜ್ಯದ ಪಾಂಡಿಚೇರಿ ಮಾಹಿತಿ ಎಂಬಲ್ಲಿಗೆ ಹಿಂತಿರುಗುತ್ತಿದ್ದ ಮೂವರು ಭಕ್ತರು ಪ್ರಯಾಣಿಸುತ್ತಿದ್ದ ಟೊಯೋಟಾ ಇನ್ನೋವಾ ಕಾರು ಅಪಘಾತಕ್ಕೀಡಾಗಿದೆ. ಕುಂದಾಪುರ-ಉಡುಪಿ ನಡುವಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಂದಾಪುರ ಸಮೀಪದ ಕೆಎಸ್‌ಆರ್‌ಟಿಸಿ

ಉಡುಪಿ:ಡಿವೈಡರ್ ಗೆ ಡಿಕ್ಕಿ ಹೊಡೆದ ಇನ್ನೋವಾ ಕಾರು|ಓರ್ವ ಮೃತ್ಯು;ಇಬ್ಬರು ಗಂಭೀರ Read More »

ನವದೆಹಲಿ: ಬಿಆರ್‌ಎಸ್‌ ನಾಯಕಿ ಕವಿತಾ ಕಸ್ಟಡಿ ಅವಧಿ ವಿಸ್ತರಣೆ

ಸಮಗ್ರ ನ್ಯೂಸ್‌ : ದೆಹಲಿ ಅಬಕಾರಿ ನೀತಿ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್ ಪುತ್ರಿ ಕವಿತಾ ಅವರ ಜಾರಿ ನಿರ್ದೇಶನಾಲಯದ ಕಸ್ಟಡಿ ಅವಧಿಯನ್ನು ನ್ಯಾಯಾಲಯವು ಏಪ್ರಿಲ್ 23ರವರೆಗೆ ವಿಸ್ತರಿಸಿದೆ. ದೆಹಲಿ ರೋಸ್ ಅವೆನ್ಯೂ ನ್ಯಾಯಾಲಯವು ಇಂದು ಆದೇಶಿಸಿದ್ದು, ಈ ಕುರಿತು ಸುದ್ದಿ ಸಂಸ್ಥೆ ‘ಎಎನ್‌ಐ’ ಟ್ವೀಟ್ ಮಾಡಿದೆ. ಕವಿತಾ ನ್ಯಾಯಾಲಕ್ಕೆ ಹಾಜರುಪಡಿಸಲು ಹೋಗುವ ವೇಳೆ ಈ ರೀತಿ ಪ್ರತಿಕ್ರಿಯಿಸಿ, ಇದೊಂದು ರಾಜಕೀಯ ಪ್ರೇರಿತ ಪ್ರಕರಣ. ವಿರೋಧ ಪಕ್ಷದ

ನವದೆಹಲಿ: ಬಿಆರ್‌ಎಸ್‌ ನಾಯಕಿ ಕವಿತಾ ಕಸ್ಟಡಿ ಅವಧಿ ವಿಸ್ತರಣೆ Read More »

ದಾವಣಗೆರೆ: ಅತ್ತೆ, ಮಾವನ ಸಿಟ್ಟಿಗೆ ಅಡಿಕೆ ಮರ ಕಡಿದು ಹಾಕಿದ ಸೊಸೆ!

ಸಮಗ್ರ ನ್ಯೂಸ್‌ : ಸೊಸೆಯೊಬ್ಬಳು ತನ್ನ ಅತ್ತೆ, ಮಾವನ ಮೇಲಿನ ಕೋಪದಿಂದ ಅಡಿಕೆ ಮರಗಳನ್ನೇ ಕಡಿದು ಹಾಕಿದ ಘಟನೆ ದಾವಣಗೆರೆ ತಾಲೂಕಿನ ಅವರಗೊಳ್ಳ ಗ್ರಾಮದಲ್ಲಿ ನಡೆದಿದೆ. ರೂಪಾ ಕುಮಾರಸ್ವಾಮಿ ಅಡಿಕೆ ಮರಗಳನ್ನು ಕಡಿದು ಹಾಕಿದ ಆರೋಪಿ ಸೊಸೆ. ಚಿದಾನಂದ ಸ್ವಾಮಿ ಹಾಗೂ ಶಿವನಾಗಮ್ಮ ದಂಪತಿಗೆ ಮೂವರು ಪುತ್ರರಿದ್ದಾರೆ. ಹಿರಿಯ ಪುತ್ರ ಕುಮಾರಸ್ವಾಮಿಗೆ ರೂಪಾಳೊಂದಿಗೆ ಮದುವೆ ಮಾಡಿಸಲಾಗಿತ್ತು. ಆದರೆ ಮದುವೆಯಾದ ಬಳಿಕ ರೂಪಾ, ಹಲವಾರು ಬಾರಿ ಆಸ್ತಿಯಲ್ಲಿ ಪಾಲು ಕೇಳಿತ್ತಿದ್ದಳು. ಅಲ್ಲದೇ ಮಾವ ಚಿದಾನಂದಸ್ವಾಮಿ ಬಳಿ 8 ಲಕ್ಷ

ದಾವಣಗೆರೆ: ಅತ್ತೆ, ಮಾವನ ಸಿಟ್ಟಿಗೆ ಅಡಿಕೆ ಮರ ಕಡಿದು ಹಾಕಿದ ಸೊಸೆ! Read More »

ಉಡುಪಿ:ಬಿಜೆಪಿ ಮುಖಂಡನ ಮನೆಗೆ ಅಬಕಾರಿ ದಾಳಿ ನಡೆಸಿ ಓರ್ವನ ಬಂಧನ

ಸಮಗ್ರ ನ್ಯೂಸ್‌ : ಬ್ರಹ್ಮಾವರ ಇಂದಿರಾನಗರದ ಮನೆಯೊಂದರ ಮೇಲೆ ಎ.8ರಂದು ರಾತ್ರಿ ವೇಳೆ ದಾಳಿ ನಡೆಸಿದ ಉಡುಪಿ ಅಬಕಾರಿ ಪೊಲೀಸರು ಓರ್ವನನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಡಿಫೆನ್ಸ್ (ಮಿಲಿಟರಿ) ಮದ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಅಬಕಾರಿ ಜಂಟಿ ಆಯುಕ್ತರು, ಮಂಗಳೂರು ವಿಭಾಗ ಹಾಗೂ ಅಬಕಾರಿ ಉಪ ಆಯುಕ್ತರು ಉಡುಪಿ ಜಿಲ್ಲೆ ಇವರುಗಳು ಮಾರ್ಗದರ್ಶನದಂತೆ ಖಚಿತ ಮಾಹಿತಿ ಮೇರೆಗೆ ಉಡುಪಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಬ್ರಹ್ಮಾವರ ಇಂದಿರಾನಗರದಲ್ಲಿರುವ ರಮೇಶ ಪ್ರಭು ಎಂಬವರ ಮನೆ ಮೇಲೆ ಈ ಅಬಕಾರಿ ದಾಳಿ ನಡೆದಿದೆ.

ಉಡುಪಿ:ಬಿಜೆಪಿ ಮುಖಂಡನ ಮನೆಗೆ ಅಬಕಾರಿ ದಾಳಿ ನಡೆಸಿ ಓರ್ವನ ಬಂಧನ Read More »

ಖುತುಬ್-ಎ-ರಂಜಾನ್| ರಾಜ್ಯಾದ್ಯಂತ ಎ.11ಕ್ಕೆ ರಜೆ ಘೋಷಣೆ

ಸಮಗ್ರ ನ್ಯೂಸ್: ಖುತುಬ್-ಎ-ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ 11.04,2024 ರ ನಾಳೆ ರಾಜ್ಯಾದ್ಯಂತ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ. ರಾಜ್ಯ ಸರ್ಕಾರವು ಈ ಕುರಿತು ಆದೇಶ ಹೊರಡಿಸಿದ್ದು,ಖುತುಬ್-ಎ-ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ 11.04,2024 ರ ನಾಳೆ ರಾಜ್ಯಾದ್ಯಂತ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖುತುಬ್-ಎ-ರಂಜಾನ್ ಹಬ್ಬದ ಸಾರ್ವತಿಕ ರಜೆಯನ್ನು 11.04.2024 10.04.2024 ರಂದು ನೀಡುವ ಕುರಿತು ಸೂಚನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಅನ್ವಯಿಸುವಂತೆ ಖುತುಬ್-ಎ-ರಂಜಾನ್ ಹಬ್ಬದ ರಜೆಯನ್ನು ಜಿಲ್ಲಾಧಿಕಾರಿಗಳು ಸ್ಥಳೀಯ ಪರಿಸ್ಥಿತಿಗಳಿಗೆ ಅನುಸಾರವಾಗಿ 11.04.2024 ಬದಲಿಗೆ ದಿನಾಂಕ:

ಖುತುಬ್-ಎ-ರಂಜಾನ್| ರಾಜ್ಯಾದ್ಯಂತ ಎ.11ಕ್ಕೆ ರಜೆ ಘೋಷಣೆ Read More »

ಚಂದ್ರ ದರ್ಶನ‌ ಹಿನ್ನಲೆ| ದ.ಕ, ಉಡುಪಿ ಜಿಲ್ಲೆಗಳಲ್ಲಿ ಎ.10ರಂದು ಈದ್ ಉಲ್ ಫಿತರ್ ಆಚರಣೆ

ಸಮಗ್ರ ನ್ಯೂಸ್: ಕೇರಳದ ಪೊನ್ನಾನಿಯಲ್ಲಿ ಚಂದ್ರದರ್ಶನವಾದ ಹಿನ್ನಲೆಯಲ್ಲಿ ಪಶ್ಚಿಮ ಕರಾವಳಿ ತೀರದ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ (ಎ.10) ಈದುಲ್ ಫಿತ್‌ರ್ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಕರೆ ನೀಡಿದ್ದಾರೆ. ಇಂದು ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಕೇರಳದ ಪೊನ್ನಾನಿಯಲ್ಲಿ ಆಗಿರುವುದರಿಂದ ಪಶ್ಚಿಮ ಕರಾವಳಿ ತೀರದ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ ಈದುಲ್ ಫಿತ್‌ರ್ ಆಚರಿಸಲು ಉಡುಪಿ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಸಂಯುಕ್ತ ಖಾಝಿ ಅಲ್‌ಹಾಜ್ ಅಬ್ದುಲ್ ಹಮೀದ್ ಮುಸ್ಲಿಯಾರ್

ಚಂದ್ರ ದರ್ಶನ‌ ಹಿನ್ನಲೆ| ದ.ಕ, ಉಡುಪಿ ಜಿಲ್ಲೆಗಳಲ್ಲಿ ಎ.10ರಂದು ಈದ್ ಉಲ್ ಫಿತರ್ ಆಚರಣೆ Read More »

ಕೊಡಗಿನಲ್ಲಿ ಮಳೆ ಸುರಿಸಲು ಬಪ್ಪುರಾಯ ಸ್ವಾಮಿಗೆ ಮೊರೆ

ಸಮಗ್ರ ನ್ಯೂಸ್: ಕೊಡಗಿನಲ್ಲಿ ಮಳೆ ಬಾರದೆ ಕಾವೇರಿ ನದಿ ಬತ್ತಿದ್ದು, ಭೀಕರ ಭಯದ ವಾತಾವರಣ ನಿರ್ಮಾಣವಾಗಿದೆ. ಮಳೆಯಿಲ್ಲದ ಕಾರಣದಿಂದಾಗಿ ಕಾಫಿ, ಕರಿಮೆಣಸು ಸೇರಿದಂತೆ ಬೆಳೆಗಳು ನಾಶವಾಗುವ ಭಯ ಶುರುವಾಗಿದೆ. ಮಳೆ ಬಂದರಷ್ಟೆ ಬದುಕು ಎಂಬ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಇಲ್ಲಿನ ಎಲ್ಲ ದೇಗುಲಗಳಲ್ಲಿ ಮಳೆಗಾಗಿ ಪೂಜೆ ಸಲ್ಲಿಸುವ ಕಾರ್ಯ ನಡೆಯುತ್ತಿದೆ. ಈ ನಡುವೆ ಕುಶಾಲನಗರಕ್ಕೆ ಸಮೀಪದ ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೂರು ಹೊರಭಾಗದಲ್ಲಿರುವ ಬಪ್ಪುರಾಯ ಸ್ವಾಮಿ ದೇವರಿಗೆ ಗ್ರಾಮಸ್ಥರು ಭಾನುವಾರ ಪೂಜೆ ಸಲ್ಲಿಸಿ ಮಳೆಗಾಗಿ ಪ್ರಾರ್ಥನೆ

ಕೊಡಗಿನಲ್ಲಿ ಮಳೆ ಸುರಿಸಲು ಬಪ್ಪುರಾಯ ಸ್ವಾಮಿಗೆ ಮೊರೆ Read More »

ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಉದ್ಯೋಗ ಖಾಲಿ ಇದೆ, ಈಗಲೇ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ಭಾರತೀಯ ಕ್ರೀಡಾ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 5 ಜೂನಿಯರ್ ಕನ್ಸಲ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 20, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​​​​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ವಿದ್ಯಾರ್ಹತೆ:ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ

ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಉದ್ಯೋಗ ಖಾಲಿ ಇದೆ, ಈಗಲೇ ಅಪ್ಲೈ ಮಾಡಿ Read More »

ಯುಗಾದಿಯಂದು ಏರಿಸುವ ʼಬ್ರಹ್ಮಧ್ವಜʼ

ಸಮಗ್ರ ನ್ಯೂಸ್‌ : ಬ್ರಹ್ಮದೇವನು ಯುಗಾದಿ ಪಾಡ್ಯದಂದು ಸೃಷ್ಟಿಯನ್ನು ನಿರ್ಮಿಸಿದ್ದ ರಿಂದ ಧರ್ಮಶಾಸ್ತ್ರದಲ್ಲಿ ಧ್ವಜಕ್ಕೆ ‘ಬ್ರಹ್ಮ ಧ್ವಜ’ ಎನ್ನುತ್ತಾರೆ. ಇದಕ್ಕೆ ಕೆಲವು ಜನರು ‘ಇಂದ್ರಧ್ವಜ’ ಎಂದೂ ಹೇಳುತ್ತಾರೆ. ಈ ಧ್ವಜವು ವಿಜಯದ ಮತ್ತು ಆನಂದದ ಪ್ರತೀಕವಾಗಿದೆ, ಆದುದರಿಂದ ಮನೆಮನೆಗಳಲ್ಲಿ ಬ್ರಹ್ಮಧ್ವಜವನ್ನು ನಿಲ್ಲಿಸುತ್ತಾರೆ. ವಿಜಯದ ಪ್ರತೀಕವು ಎತ್ತರವಾಗಿರುತ್ತದೆ; ಆದುದರಿಂದ ಬ್ರಹ್ಮಧ್ವಜವನ್ನು ಎತ್ತರವಾಗಿ ನಿಲ್ಲಿಸುತ್ತಾರೆ. ಪದ್ಧತಿ: ಸೂರ್ಯೋದಯದ ನಂತರ ಬ್ರಹ್ಮಧ್ವಜವನ್ನು ಕೂಡಲೇ ನಿಲ್ಲಿಸಬೇಕಾಗಿರುತ್ತದೆ. ಅಪವಾದಾತ್ಮಕ ಸ್ಥಿತಿಯಲ್ಲಿ ಪಂಚಾಂಗವನ್ನು ನೋಡಿ ಬ್ರಹ್ಮಧ್ವಜವನ್ನು ನಿಲ್ಲಿಸಬೇಕು. ಎತ್ತರವಾಗಿರುವ ಬಿದಿರಿನ ತುದಿಗೆ ಹಳದಿ ಬಣ್ಣದ ಜರತಾರಿಯ

ಯುಗಾದಿಯಂದು ಏರಿಸುವ ʼಬ್ರಹ್ಮಧ್ವಜʼ Read More »