April 2024

ಧಾರವಾಡ : ಹೆಂಡತಿ ಮೇಲೆ ಸಂಶಯ ಪಟ್ಟು ಕೊಡಲಿಯಿಂದ ಕೊಚ್ಚಿ ಕೊಂದ ಗಂಡ

ಸಮಗ್ರ ನ್ಯೂಸ್‌ : ಪತ್ನಿ ಮೇಲೆ ಸಂಶಯ ಪಟ್ಟು ಪತಿಯೊಬ್ಬ ಕೊಡಲಿಯಿಂದ ಕೊಂದ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಆಯಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಮಲ್ಲವ್ವ ಬಳ್ಳೂರ ಮೃತ ದುರ್ದೈವಿ. ಶಿವಪ್ಪ ಬಳ್ಳೂರ ಎಂಬಾತ ಪತ್ನಿ ಕೊಂದ ಆರೋಪಿ, ಶಿವಪ್ಪ ಶುಕ್ರವಾರ ರಾತ್ರಿ ಕುಡಿದು ಬಂದು ಪತ್ನಿ ಮಲ್ಲವ್ವಳ ಜತೆಗೆ ಜಗಳ ಮಾಡಿದ್ದಾನೆ. ಇಂದು ಬೆಳಗಿನ ಜಾವ ಕೊಡಲಿಯಿಂದ ಪತ್ನಿಯನ್ನು ಕೊಚ್ಚಿ ಕೊಂದಿದ್ದಾನೆ. ಮದುವೆ ಆಗಿ 15 ವರ್ಷವಾದರೂ ಶಿವಪ್ಪ ಪತ್ನಿ ಮೇಲೆ ಸಂಶಯ ಪಡುತ್ತಿದ್ದನು. […]

ಧಾರವಾಡ : ಹೆಂಡತಿ ಮೇಲೆ ಸಂಶಯ ಪಟ್ಟು ಕೊಡಲಿಯಿಂದ ಕೊಚ್ಚಿ ಕೊಂದ ಗಂಡ Read More »

ರಾಜ್ಯದಲ್ಲಿ ಮೊದಲ ಹಂತದ ಮತದಾನ ಮುಕ್ತಾಯ/ ದೋಣಿಯಲ್ಲಿ ಬಂದು ಮತ ಚಲಾಯಿಸಿದ ಮತದಾರರು

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮೊದಲ ಹಂತದ ಮತದಾನ ಮುಕ್ತಾಯಗೊಂಡಿದ್ದು, ಈ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಹೊರವಲಯದ ಕೊಣಾಜೆ ಸಮೀಪದ ಪಾವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳಿಯ ದ್ವೀಪದ ಮತದಾರರು ದೋಣಿಯ ಮೂಲಕ ನೇತ್ರಾವತಿ ನದಿಯನ್ನು ದಾಟಿ ಬಂದು ಪಾವೂರು ಗ್ರಾಮದ ಗಾಡಿಗದ್ದೆ ಶಾಲೆಯ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಿದರು. ಈ ದ್ವೀಪದ ಜನರು ಇಲ್ಲಿ ಸಂಪರ್ಕ ಸೇತುವೆ ಇಲ್ಲದೆ ಸಂಕಷ್ಟದ ಜೀವನ ನಡೆಸುತ್ತಿದ್ದಾರೆ. ಈ ದ್ವೀಪದಲ್ಲಿ ಸುಮಾರು 40 ಕ್ಕೂ ಹೆಚ್ಚು ಕುಟುಂಬಗಳಿದ್ದು, ಸುಮಾರು

ರಾಜ್ಯದಲ್ಲಿ ಮೊದಲ ಹಂತದ ಮತದಾನ ಮುಕ್ತಾಯ/ ದೋಣಿಯಲ್ಲಿ ಬಂದು ಮತ ಚಲಾಯಿಸಿದ ಮತದಾರರು Read More »

ಟಿ20 ವಿಶ್ವಕಪ್/ಬ್ರಾಂಡ್ ಅಂಬಾಸಿಡರ್ ಆಗಿ ಯುವರಾಜ್ ಸಿಂಗ್

ಸಮಗ್ರ ನ್ಯೂಸ್: ಇಂಡೀಸ್ ಮತ್ತು ಅಮೆರಿಕದ ಜಂಟಿ ಆತಿಥ್ಯದಲ್ಲಿ ಜೂನ್ 6 ರಿಂದ 2024 ರ ಆರಂಭವಾಗಲಿರುವ ಟಿ20 ವಿಶ್ವಕಪ್‍ನ ಬ್ರಾಂಡ್ ಅಂಬಾಸಿಡರ್ ಆಗಿ ಟೀಂ ಇಂಡಿಯಾದ ಮಾಜಿ ಆಟಗಾರ ಹಾಗೂ ಎರಡು ವಿಶ್ವಕಪ್‍ಗಳ ಹೀರೋ ಯುವರಾಜ್ ಸಿಂಗ್ ಅವರನ್ನು ಐಸಿಸಿ ನೇಮಿಸಿದೆ. ಯುವರಾಜ್ ಸಿಂಗ್ ಹೊರತಾಗಿ, ಪ್ರಸ್ತುತ ಕ್ರಿಸ್ ಗೇಲ್ ಮತ್ತು ಉಸೇನ್ ಬೋಲ್ಟ್ ಕೂಡ ಈ ಪಂದ್ಯಾವಳಿಯ ಬ್ರಾಂಡ್ ಅಂಬಾಸಿಡರ್‍ಗಳಾಗಿದ್ದಾರೆ. 2007ರ ಟಿ20 ವಿಶ್ವಕಪ್‍ನಲ್ಲಿ ಅವರು ಬಾರಿಸಿದ ಆರು ಸಿಕ್ಸರ್‍ಗಳು, ಅಲ್ಲದೆ ಟಿ20 ವಿಶ್ವಕಪ್‍ನಲ್ಲಿ

ಟಿ20 ವಿಶ್ವಕಪ್/ಬ್ರಾಂಡ್ ಅಂಬಾಸಿಡರ್ ಆಗಿ ಯುವರಾಜ್ ಸಿಂಗ್ Read More »

ಉಡುಪಿ- ಚಿಕ್ಕಮಗಳೂರು ಲೋಕಸಭೆ ಚುನಾವಣೆ- ಸ್ಟ್ರಾಂಗ್ ರೂಂನಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರ

ಸಮಗ್ರ ನ್ಯೂಸ್‌ : ಉಡುಪಿಯ ಸೈಂಟ್ ಸಿಸಿಲೀಸ್‌ನಲ್ಲಿರುವ ಸ್ಟ್ರಾಂಗ್ ರೂಮ್ ನಲ್ಲಿ ಕ್ಷೇತ್ರದ ಹತ್ತು ಅಭ್ಯರ್ಥಿಗಳ ಭವಿಷ್ಯ ಭದ್ರವಾಗಿದೆ. ಸ್ಟ್ರಾಂಗ್ ರೂಮ್ ಗೆ ಮೂರು ಹಂತದಲ್ಲಿ ಭದ್ರತೆ ಒದಗಿಸಲಾಗುತ್ತಿದೆ. ಮೊದಲ ಹಂತದಲ್ಲಿ ಸೆಂಟರ್ ಆರ್ಮ್ಸ್ ಪೊಲೀಸ್ ಪೋರ್ಸ್, ಎರಡನೇ ಹಂತದಲ್ಲಿ ಕೆಎಸ್‌ಆರ್‌ಪಿ, ಮೂರನೇ ಹಂತದಲ್ಲಿ ಜಿಲ್ಲೆಯ ಪೊಲೀಸರು ಭದ್ರತೆ ನೀಡಲಿದ್ದಾರೆ. ಇವರು ದಿನಕ್ಕೆ ಮೂರು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ. ಎಲ್ಲ ವಿಧಾನಸಭಾ ಕ್ಷೇತ್ರಗಳ ಇವಿಎಂ ಗಳು ನಿನ್ನೆಯೇ ಸ್ಟ್ಯಾಂಗ್ ರೂಂ ತಲುಪಿವೆ. ಕೇಂದ್ರದ ಸುತ್ತ ಸೆಕ್ಷನ್‌ ಜಾರಿ

ಉಡುಪಿ- ಚಿಕ್ಕಮಗಳೂರು ಲೋಕಸಭೆ ಚುನಾವಣೆ- ಸ್ಟ್ರಾಂಗ್ ರೂಂನಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರ Read More »

ನವದೆಹಲಿ : ಕೇಂದ್ರದಿಂದ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ

ಸಮಗ್ರ ನ್ಯೂಸ್‌ : ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಿದೆ. ಕರ್ನಾಟಕ ಮಾತ್ರವಲ್ಲದೆ ತಮಿಳುನಾಡಿಗೆ ಚಂಡಮಾರುತ ಹಾಗೂ ಪ್ರವಾಹ ಪರಿಹಾರವೆಂದು 275 ಕೋಟಿ ರೂ. ನೀಡಿದೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ 18,174 ಕೋಟಿ ರೂ. ಹಣದ ಬೇಡಿಕೆ ಇಟ್ಟಿತ್ತು. ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿರದ ಹಿನ್ನೆಲೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‍ನ ಮೊರೆ ಹೋಗಿತ್ತು. ಬಳಿಕ ಕೇಂದ್ರ ಸರ್ಕಾರ ಬರ ಪರಿಹಾರ

ನವದೆಹಲಿ : ಕೇಂದ್ರದಿಂದ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ Read More »

ಕೋಲಾರ : ಇವಿಎಂ ಸಾಗಿಸುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಸ್ಫೋಟ

ಸಮಗ್ರ ನ್ಯೂಸ್‌ : ಇವಿಎಂ‌ ಸಾಗಿಸುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಸ್ಫೋಟಗೊಂಡ ಘಟನೆ ಕೋಲಾರದ ವಡಗೂರ್ ಗೇಟ್ ಬಳಿ ನಡೆದಿದೆ. ಮುಳಬಾಗಿಲಿನಿಂದ ಕೋಲಾರದ‌ ಸ್ಟ್ರಾಂಗ್ ರೂಂಗೆ ಇವಿಎಂ ಸಾಗಿಸಲಾಗುತ್ತಿತ್ತು. ಈ ವೇಳೆ ಕ್ಯಾಂಟರ್‌ ವಾಹನದ ಟೈರ್‌ ಸ್ಫೋಟಗೊಂಡಿದೆ. ಅದೃಷವಶಾತ್‌ ಕ್ಯಾಂಟರ್‌ ವಾಹನದಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸಿಬ್ಬಂದಿಯಿಂದ ವಾಹನದ ಟೈರ್ ಬದಲಾಯಿಸುವ ಕಾರ್ಯ ಮುಂದುವರಿದಿದ್ದು, ವಾಹನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಇವಿಎಂ ಇರುವ ಕ್ಯಾಂಟರ್‌ ಅನ್ನು ಸೀಲ್ ಮಾಡಿರುವುದರಿಂದ‌ ವಾಹನದ ರಿಪೇರಿಯಾದ‌ ನಂತರ ಸ್ಟ್ರಾಂಗ್

ಕೋಲಾರ : ಇವಿಎಂ ಸಾಗಿಸುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಸ್ಫೋಟ Read More »

ಭಾರತೀಯ ಮೂಲದ 3 ಕಂಪೆನಿಗಳಿಗೆ ಅಮೆರಿಕ ನಿರ್ಬಂಧ

ಸಮಗ್ರ ನ್ಯೂಸ್: ಇರಾನಿಯನ್‌ ಸೇನೆ ಜೊತೆ ಅಕ್ರಮ ವ್ಯಾಪಾರ ವಹಿವಾಟು ಹೊಂದಿರುವ 12ಕ್ಕೂ ಅಧಿಕ ಕಂಪನಿಗಳು, ಹಡುಗುಗಳು ಮತ್ತು ಉದ್ಯಮಿಗಳ ಮೇಲೆ ಇದೀಗ ಅಮೆರಿಕ ನಿರ್ಬಂಧ ವಿಧಿಸಿದೆ. ಇದರಲ್ಲಿ ಭಾರತ ಮೂರು ಕಂಪನಿಗಳು ಸೇರಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ರಷ್ಯಾ-ಉಕ್ರೇನ್‌ ಯುದ್ಧ ಸಂದರ್ಭದಲ್ಲಿ ಈ ಕಂಪನಿಗಳು, ಹಡಗುಗಳು ಮತ್ತು ವ್ಯಕ್ತಿಗಳು ಇರಾನ್‌ನ ಮಾನವ ರಹಿತ ವೈಮಾನಿಕ ವಾಹನ- ಡ್ರೋನ್‌(UAVs) ಗಳನ್ನು ರಷ್ಯಾಗೆ ಪೂರೈಕೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದವು ಎಂದು ಅಮೆರಿಕದ ಹೇಳಿದೆ. ಇರಾನ್‌ನ ಸಾಗರೋತ್ತರ

ಭಾರತೀಯ ಮೂಲದ 3 ಕಂಪೆನಿಗಳಿಗೆ ಅಮೆರಿಕ ನಿರ್ಬಂಧ Read More »

ಪರೀಕ್ಷೆಯಲ್ಲಿ “ಜೈ ಶ್ರೀ ರಾಮ್” ಘೋಷಣೆ ಬರೆದವರು ಪಾಸ್: ಶಿಕ್ಷಕರಿಗೆ ಎದುರಾಯ್ತು ಸಂಕಷ್ಟ

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳು ಉತ್ತರ ಪತ್ರಿಕೆಯಲ್ಲಿ ಉತ್ತರಗಳ ಬದಲು “ಜೈ ಶ್ರೀ ರಾಮ್” ಘೋಷಣೆ ಮತ್ತು ಕ್ರಿಕೆಟಿಗರ ಹೆಸರನ್ನು ಬರೆದಿದ್ದಾರೆ. ಅವರೆ ಅವರೆಲ್ಲಾ ಪಾಸ್ ಆಗಿದ್ದಾರೆ. ಆದರೆ ಈಗ ಶಿಕ್ಷಕರಿಗೆ ತಲೆ ನೋವು ತಂದಿಟ್ಟಿದೆ. ಉತ್ತರ ಪತ್ರಿಕೆಯಲ್ಲಿ ಸಿನಿಮಾ ಹಾಡುಗಳು, ಮ್ಯೂಸಿಕ್‌ ಮತ್ತು ಧಾರ್ಮಿಕ ಘೋಷಣೆಗಳನ್ನು ಬರೆದು, ಅದಕ್ಕೆ ಅಂಕಗಳನ್ನು ನೀಡುವುದಕ್ಕಾಗಿ ವಿದ್ಯಾರ್ಥಿಗಳಿಂದ ಹಣವನ್ನು ಲಂಚ ಪಡೆದ ಆರೋಪದ ಮೇಲೆ ಜೌನ್‌ಪುರದ ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ್ ವಿಶ್ವವಿದ್ಯಾಲಯದ

ಪರೀಕ್ಷೆಯಲ್ಲಿ “ಜೈ ಶ್ರೀ ರಾಮ್” ಘೋಷಣೆ ಬರೆದವರು ಪಾಸ್: ಶಿಕ್ಷಕರಿಗೆ ಎದುರಾಯ್ತು ಸಂಕಷ್ಟ Read More »

ಬ್ರೌಸರ್ ನಲ್ಲಿ ಹಿಸ್ಟರಿ ಬಗ್ಗೆ ತುಂಬಾ ಭಯ ಇದ್ಯ? ಮೊದಲು ಈ ಕೆಲ್ ಮಾಡಿ ಸಾಕು

ಇತ್ತೀಚಿನ ದಿನಗಳಲ್ಲಿ ಬ್ರೌಸರ್‌ಗಳಲ್ಲಿ ಹಲವು ತಾಂತ್ರಿಕ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಇದರಿಂದ ಕೋಟಿಗಟ್ಟಲೆ ಬಳಕೆದಾರರ ಭದ್ರತೆ ಅಪಾಯದಲ್ಲಿದೆ ಎಂದು ಹೇಳಬಹುದು. ಈ ತಾಂತ್ರಿಕ ಸಮಸ್ಯೆಗಳು ಉದ್ಭವಿಸುವುದಿಲ್ಲ. ಆದರೆ ಭಾರತ ಸರ್ಕಾರವು ಇವುಗಳ ಬಗ್ಗೆ ಕಾಲಕಾಲಕ್ಕೆ ತಿಳಿಸುತ್ತದೆ ಮತ್ತು ಬಳಕೆದಾರರನ್ನು ಎಚ್ಚರವಾಗಿರಿಸುತ್ತದೆ. ಮೈಕ್ರೋಸಾಫ್ಟ್ ಎಡ್ಜ್ ವೆಬ್ ಬ್ರೌಸರ್‌ನಲ್ಲಿನ ನಿರ್ಣಾಯಕ ಭದ್ರತಾ ದೋಷದ ಬಗ್ಗೆ ಈ ವಾರ ಮೈಕ್ರೋಸಾಫ್ಟ್ ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಈ ಮಾಹಿತಿಯನ್ನು ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ (ಸಿಇಆರ್‌ಟಿ-ಇನ್) ಭದ್ರತಾ ಬುಲೆಟಿನ್‌ನಲ್ಲಿ ಬಹಿರಂಗಪಡಿಸಿದ್ದು, ಇದು ಪ್ರಮುಖ ಭದ್ರತಾ

ಬ್ರೌಸರ್ ನಲ್ಲಿ ಹಿಸ್ಟರಿ ಬಗ್ಗೆ ತುಂಬಾ ಭಯ ಇದ್ಯ? ಮೊದಲು ಈ ಕೆಲ್ ಮಾಡಿ ಸಾಕು Read More »

ನೇಹಾ ನಿವಾಸಕ್ಕೆ ಪೊಲೀಸ್ ಭದ್ರತೆ, ತಂದೆಗೆ ಗನ್ ಮ್ಯಾನ್ ವ್ಯವಸ್ಥೆ ಮಾಡಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊನ್ನೆ ಸಿಎಂ ಸಿದ್ದರಾಮಯ್ಯ ಅವರು ನೇಹಾ ಹಿರೇಮಠ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ ಸಂದರ್ಭದಲ್ಲಿ ಮಗಳು ನೇಹಾ ಹತ್ಯೆ ನಡೆದ ಮೇಲೆ ತಮಗೂ ಜೀವ ಬೆದರಿಕೆ ಇದೆ ಎಂದು ನೇಹಾ ತಂದೆ ನಿರಂಜನ ಹಿರೇಮಠ್‌ ಅವರು ಹೇಳಿದರು. ಈ ಹಿನ್ನೆಲೆಯಲ್ಲಿ ಅವರಿಗೆ ಗನ್ ಮ್ಯಾನ್, ಮನೆಗೆ ಪೊಲೀಸ್ ಭದ್ರತೆಯನ್ನು ರಾಜ್ಯ ಸರ್ಕಾರ ಏರ್ಪಡಿಸಿದೆ. ಈ ಸಂದರ್ಭದಲ್ಲಿ ಸಿಎಂ ಬೆದರಿಕೆ ಇದ್ದರೆ ಭದ್ರತೆ ಒದಗಿಸುವುದಾಗಿ

ನೇಹಾ ನಿವಾಸಕ್ಕೆ ಪೊಲೀಸ್ ಭದ್ರತೆ, ತಂದೆಗೆ ಗನ್ ಮ್ಯಾನ್ ವ್ಯವಸ್ಥೆ ಮಾಡಿದ ರಾಜ್ಯ ಸರ್ಕಾರ Read More »