April 2024

ಹುಬ್ಬಳ್ಳಿ : ನ್ಯೂಯಾರ್ಕ್ ಗೆ ತಲುಪಿದ ಗಂಡು ಮೆಟ್ಟಿದ ನಾಡಿನ ವಿದ್ಯಾರ್ಥಿಗಳ ಹವಾ

ಸಮಗ್ರ ನ್ಯೂಸ್‌ : ನಮ್ಮ ಗಂಡು ಮೆಟ್ಟಿದ ನಾಡು ಹುಬ್ಬಳ್ಳಿ ಯ ವಿದ್ಯಾರ್ಥಿಗಳು ಎಲ್ಲದಕ್ಕೂ ಸೈ, ನ್ಯೂಯಾರ್ಕ್ ವರೆಗೂ ಪಾದಾರ್ಪಣೆ ಮಾಡುವ ಮೂಲಕ ಸುದ್ದಿಯಾಗಿದ್ದಾರೆ. ನಮ್ಮ ನಾಡು, ನುಡಿ, ಸಂಸ್ಕೃತಿಯನ್ನ ನ್ಯೂಯಾರ್ಕ್ ವರೆಗೆ ಕೊಂಡೊಯ್ಯುವ ಮೂಲಕ ಫ್ಯಾಷನ್ ಲೋಕದಲ್ಲಿ ಕೌದಿ, ಕಸೂತಿ ಕಲೆಯನ್ನು ಮಿಂಚಿಸಿದ್ದಾರೆ. ಇಂಟರ್ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಶನ್ ಡಿಸೈನ್ (INIFD) ಮತ್ತು ಲಂಡನ್ ಸ್ಕೂಲ್ ಆಫ್ ಟ್ರೆಂಡ್ (LST) ಫೆಬ್ರವರಿ 9 ರಂದು ನ್ಯೂಯಾರ್ಕ್ ಫ್ಯಾಶನ್ ವೀಕ್‌ನಲ್ಲಿ ನಡೆದ ವಿಶ್ವದ ಅತ್ಯಂತ ಅತಿರಂಜಿತ ರನ್‌ವೇ […]

ಹುಬ್ಬಳ್ಳಿ : ನ್ಯೂಯಾರ್ಕ್ ಗೆ ತಲುಪಿದ ಗಂಡು ಮೆಟ್ಟಿದ ನಾಡಿನ ವಿದ್ಯಾರ್ಥಿಗಳ ಹವಾ Read More »

ನಂಜನಗೂಡು: ರಂಗೋಲಿಯಲ್ಲಿ ಮೂಡಿದ ಮತದಾನ ಜಾಗೃತಿ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆ ಹಿನ್ನೆಲೆ ನಂಜನಗೂಡು ತಾಲ್ಲೂಕಿನ ದೇಬೂರು ಗ್ರಾಮದ ಗ್ರಾಮ ಪಂಚಾಯಿತಿಯಲ್ಲಿ ಮಹಿಳೆಯರು ರಂಗೋಲಿ ಬಿಡಿಸುವ ಮೂಲಕ ಮತದಾನ ಜಾಗೃತಿ ಮೂಡಿಸಿದ್ದಾರೆ. ಇಂದು ಗುರುವಾರ ಮಧ್ಯಾಹ್ನ 12 ಗಂಟೆಯ ಸಮಯದಲ್ಲಿ ದೇಬೂರು ಗ್ರಾಮದ ಲಕ್ಷ್ಮೀ ನಾರಾಯಣಸ್ವಾಮಿ ದೇವಾಲಯದ ಮುಂಭಾಗದ ರಸ್ತೆಯಲ್ಲಿ ಗ್ರಾಮದ ಸ್ವ ಸಹಾಯ ಸಂಘದ ಮಹಿಳೆಯರು ಸೇರಿದಂತೆ ಇತರರು ಬಣ್ಣದ ಬಣ್ಣದ ರಂಗೋಲಿ ಬಿಡಿಸಿ, ಮತದಾನದ ಜಾಗೃತಿ ಘೋಷವಾಕ್ಯಗಳನ್ನು ಬರೆದು ಕಡ್ಡಾಯವಾಗಿ ಮತದಾನ ಮಾಡುವಂತೆ ಅರಿವು ಮೂಡಿಸಿದರು. ವೇದಿಕೆ ಕಾರ್ಯಕ್ರಮವನ್ನು ತಾಲ್ಲೂಕು

ನಂಜನಗೂಡು: ರಂಗೋಲಿಯಲ್ಲಿ ಮೂಡಿದ ಮತದಾನ ಜಾಗೃತಿ Read More »

ಶಿವಮೊಗ್ಗ : ಲಾಡ್ಜ್‌ ನಲ್ಲಿ ಯುವತಿಯ ಕತ್ತು ಸೀಳಿ ಬರ್ಬರ ಹತ್ಯೆ

ಸಮಗ್ರ ನ್ಯೂಸ್‌ : ಲಾಡ್ಜ್‌ವೊಂದರಲ್ಲಿ ಯುವತಿಯೊಬ್ಬಳ ಬರ್ಬರ ಹತ್ಯೆ ನಡೆದಿರುವ ಘಟನೆ ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯ ಚೌಡೇಶ್ವರಿ ದೇವಸ್ಥಾನದ ಪಕ್ಕದ ಲಾಡ್ಜ್‌ನಲ್ಲಿ ನಡೆದಿದೆ. ಕಳೆದ ಸೋಮವಾರ (ಏ.1)ರಂದು ಲಾಡ್ಜ್‌ಗೆ ಬಂದಿದ್ದ ಯುವಕ-ಯುವತಿ ರೂಂ ಬಾಡಿಗೆ ಪಡೆದಿದ್ದರು. ಲಾಡ್ಜ್‌ನಲ್ಲಿ ತಂಗಿದ್ದಾಗ ಜತೆಗೆ ಇದ್ದ ಯುವಕನೇ ಯುವತಿಯ ಕತ್ತು ಸೀಳಿ ಕೊಲೆ ಮಾಡಿ ಓಡಿ ಹೋಗಿದ್ದಾನೆ ಎಂಬ ಮಾಹಿತಿ ತಿಳಿದು ಬಂದಿದೆ. ಲಾಡ್ಜ್‌ ಸಿಬ್ಬಂದಿ ರೂಮಿಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಮೃತಳ ಗುರುತು ಇನ್ನೂ ಪತ್ತೆಯಾಗಿಲ್ಲ.

ಶಿವಮೊಗ್ಗ : ಲಾಡ್ಜ್‌ ನಲ್ಲಿ ಯುವತಿಯ ಕತ್ತು ಸೀಳಿ ಬರ್ಬರ ಹತ್ಯೆ Read More »

ಸಾವು ಗೆದ್ದ ಸಾತ್ವಿಕ್| ಕೊಳವೆ ಬಾವಿ ದುರಂತ ಸುಖಾಂತ್ಯ

ಸಮಗ್ರ ನ್ಯೂಸ್: ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದ ತೋಟದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಸಾತ್ವಿಕ್‌ನನ್ನು ರಕ್ಷಣೆ ಮಾಡುವಲ್ಲಿ ಎನ್‌ಡಿಆರ್‌ಎಫ್‌ ತಂಡವು ಯಶಸ್ವಿಯಾಗಿದೆ. ಬದುಕಿ ಬಂದ ಕಂದಮ್ಮನನ್ನು ಆಸ್ಪತ್ರೆಯತ್ತ ಕರೆದೊಯ್ಯಲಾಗುತ್ತಿದೆ. ಸತೀಶ್, ಪೂಜಾ ದಂಪತಿಯ ಮಗ ಸಾತ್ವಿಕ್ ಆಟವಾಡುತ್ತಾ ಆಯತಪ್ಪಿ 20 ಅಡಿ ಆಳದ ಕೊಳವೆ ಬಾವಿಗೆ ಬಿದ್ದು ಸಾವು ಬದುಕಿನ ಮಧ್ಯೆ ಹೋರಾಟ ಆರಂಭಿಸಿದ್ದ. ವಿಷಯ ತಿಳಿಯುತ್ತಿದ್ದಂತೆ ರಾತ್ರಿಯೇ ಸ್ಥಳಕ್ಕಾಗಮಿಸಿದ ಬೆಳಗಾವಿ, ಕಲಬುರಗಿ ಹಾಗೂ ಹೈದರಾಬಾದ್‌ ಎನ್‌ಡಿಆರ್‌ಎಫ್‌ ತಂಡವು ರಕ್ಷಣಾ ಕಾರ್ಯಾಚರಣೆ

ಸಾವು ಗೆದ್ದ ಸಾತ್ವಿಕ್| ಕೊಳವೆ ಬಾವಿ ದುರಂತ ಸುಖಾಂತ್ಯ Read More »

ಉಡುಪಿ : ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆ ಸೋಲು ನಿಶ್ಚಿತ: ಎ.ಎಸ್. ಪಾಟೀಲ್‌ ನಡಹಳ್ಳಿ

ಸಮಗ್ರ ನ್ಯೂಸ್‌ : ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಜಾರಿಯಾಗಿದ್ದ ರೈತಪರ ಯೋಜನೆಗಳನ್ನು ಕಾಂಗ್ರೆಸ್‌ ನೇತೃತ್ವದ ಸರ್ಕಾರ ರದ್ದುಗೊಳಿಸುವ ಮೂಲಕ ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್. ಪಾಟೀಲ್‌ ನಡಹಳ್ಳಿ ಆರೋಪಿಸಿದರು. ಉಡುಪಿಯ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಹಾಲಿನ ಪ್ರೋತ್ಸಾಹ ಧನವನ್ನು ₹7ಕ್ಕೆ ಹೆಚ್ಚಿಸುವುದಾಗಿ ಹೇಳಿತ್ತು. ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿ ಸರ್ಕಾರದ ಅವಧಿಯಲ್ಲಿದ್ದ ₹5

ಉಡುಪಿ : ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆ ಸೋಲು ನಿಶ್ಚಿತ: ಎ.ಎಸ್. ಪಾಟೀಲ್‌ ನಡಹಳ್ಳಿ Read More »

ನವದೆಹಲಿ: ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ ವಕ್ತಾರ ಗೌರವ್ ವಲ್ಲಭ್

ಸಮಗ್ರ ನ್ಯೂಸ್‌ : ನಾಯಕ ಮತ್ತು ವಕ್ತಾರ ಪ್ರೊ.ಗೌರವ್ ವಲ್ಲಭ್ ಅವರು ಕಾಂಗ್ರೆಸ್ ನಡೆಯ ಬಗ್ಗೆ ಅಸಮಾಧಾನ ಉಂಟಾಗಿ ಪಕ್ಷಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದ ಪತ್ರದಲ್ಲಿ ವಲ್ಲಭ್ ಅವರು, ಕಾಂಗ್ರೆಸ್ ಪಕ್ಷ ಸಾಗುತ್ತಿರುವುದರ ಬಗ್ಗೆ ನನಗೆ ಸಮಾಧಾನವಿಲ್ಲ, ಪಕ್ಷಕ್ಕೆ ದಿಕ್ಕು ತೋಚದಂತಾಗಿದೆ, ಅಲ್ಲದೆ ಸನಾತನ ವಿರೋಧಿ ಘೋಷಣೆಗಳನ್ನು ಕೂಗಲು ಸಾಧ್ಯವಿಲ್ಲ, ಜತೆಗೆ ದೇಶದ ಸಂಪತ್ತನ್ನು ಸೃಷ್ಟಿಸಿದವರನ್ನು ಬೆಳಗ್ಗೆ ಮತ್ತು ಸಂಜೆ ನಿಂದಿಸಲು ಸಾಧ್ಯವಿಲ್ಲ. ಹೀಗಾಗಿ ನನ್ನ ಹುದ್ದೆ ಮತ್ತು

ನವದೆಹಲಿ: ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ ವಕ್ತಾರ ಗೌರವ್ ವಲ್ಲಭ್ Read More »

ಬೆಳ್ತಂಗಡಿ : ಗೋದಾಮಿಗೆ ನುಗ್ಗಿ 1.35 ಲಕ್ಷ ರೂ. ಮೌಲ್ಯದ ಅಡಿಕೆ ಕಳವು

ಸಮಗ್ರ ನ್ಯೂಸ್:‌ ಗೋದಾಮಿನ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು 1.35 ಲಕ್ಷ ರೂ. ಮೌಲ್ಯದ ಅಡಿಕೆ ಕಳವುಗೈದ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತಣ್ಣೀರುಪಂಥ ಎಂಬಲ್ಲಿ ನಡೆದಿದೆ. ತಣ್ಣೀರುಪಂಥ ನಿವಾಸಿ ಅಬ್ದುಲ್ ಹಕೀಂ ಎಂಬವರು ಈ ಬಗ್ಗೆ ಪೊಲೀಸ್ ದೂರು ನೀಡಿದ್ದಾರೆ. ಎ.2ರಂದು ಸಂಜೆಯ ವೇಳೆ ಸುಲಿಯದ ಅಡಿಕೆಯನ್ನು 75 ಗೋಣಿ ಚೀಲಗಳಲ್ಲಿ ತುಂಬಿಸಿ ಮನೆ ಸಮೀಪವೇ ಇರುವ ಗೋದಾಮಿನಲ್ಲಿ ಇಟ್ಟು ಬೀಗ ಹಾಕಿದ್ದರು. ಎ 3ರಂದು ಬೆಳಗ್ಗೆ ನೋಡಿದಾಗ ಗೋದಾಮಿನ ಬಾಗಿಲು ತುಂಡಾಗಿ ಬಿದ್ದಿರುವುದು

ಬೆಳ್ತಂಗಡಿ : ಗೋದಾಮಿಗೆ ನುಗ್ಗಿ 1.35 ಲಕ್ಷ ರೂ. ಮೌಲ್ಯದ ಅಡಿಕೆ ಕಳವು Read More »

ಸುಳ್ಯ: ಕೆಲಸ ಕೇಳಿಕೊಂಡು ಬಂದಾವನಿಂದಲೇ ಮೊಬೈಲ್‌, ಬೈಕ್‌ ಕಳವು

ಸಮಗ್ರ ನ್ಯೂಸ್ : ಕೆಲಸ ಕೇಳಿಕೊಂಡು ಬಂದವನಿಂದ ಮೊಬೈಲ್‌, ಬೈಕ್‌ ಕಳವು ಮಾಡಿ ಪರಾರಿಯಾಗಿರುವ ಬಗ್ಗೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಬರಾಯದ ರಿಯಾಜ್‌ ಸುಳ್ಯ ಠಾಣೆಗೆ ದೂರು ನೀಡಿದ್ದಾರೆ. ರಿಯಾಜ್‌ ಅವರು ಅರಂತೋಡಿನ ಹೊಟೇಲ್‌ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಅವರಲ್ಲಿಗೆ ಅವರ ಪರಿಚಯದ ಹರ್ಷಿಕೇಶ್‌ ಕೆಲಸ ಕೇಳಿಕೊಂಡು ಹೋಗಿದ್ದು, ಆತನನ್ನು ರಿಯಾಜ್‌ ಹೊಟೇಲ್‌ಗೆ ಕರೆದುಕೊಂಡು ಹೋಗಿದ್ದಾನೆ. ಮಧ್ಯಾಹ್ನ ರಿಯಾಜ್‌ ವಿಶ್ರಾಂತಿ ಪಡೆದು ಎದ್ದು ನೋಡಿದಾಗ ಹರ್ಷಿಕೇಶ್‌ ರೂಂನಲ್ಲಿ ಕಾಣಿಸಲಿಲ್ಲ. ಜೊತೆಗೆ ರಿಯಾಜ್‌

ಸುಳ್ಯ: ಕೆಲಸ ಕೇಳಿಕೊಂಡು ಬಂದಾವನಿಂದಲೇ ಮೊಬೈಲ್‌, ಬೈಕ್‌ ಕಳವು Read More »

ವಿಟ್ಲ: ಬಸ್-ಪಿಕಪ್‌ ಢಿಕ್ಕಿ; ಹಲವರಿಗೆ ಗಾಯ

ಸಮಗ್ರ ನ್ಯೂಸ್‌ : ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡ ಘಟನೆ ವಿಟ್ಲ-ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ನಡೆದಿದೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ ಢಿಕ್ಕಿಯಾಗಿದೆ. ಪಿಕಪ್ ನಲ್ಲಿ ಕಾಂಕ್ರೀಟ್ ಹಾಕಲು ಹಲವು ಮಂದಿ ಇದ್ದರು ಎಂಬ ಮಾಹಿತಿ ತಿಳಿದು ಬಂದಿದೆ.

ವಿಟ್ಲ: ಬಸ್-ಪಿಕಪ್‌ ಢಿಕ್ಕಿ; ಹಲವರಿಗೆ ಗಾಯ Read More »

ಉಪ್ಪಿನಂಗಡಿ: ಬಸ್, ಕಂಟೈನರ್ ನಡುವೆ ಢಿಕ್ಕಿ; ಹಲವು ಮಂದಿಗೆ ಗಾಯ

ಸಮಗ್ರ ನ್ಯೂಸ್‌ : ಖಾಸಗಿ ಬಸ್ ಮತ್ತು ಕಂಟೈನರ್ ನಡುವೆ ಢಿಕ್ಕಿಯಾಗಿ ಹಲವು ಮಂದಿ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾ. ಹೆ. 75ರ ಉಪ್ಪಿನಂಗಡಿ ಉದನೆ ಬಳಿಯ ನೇಲ್ಯಡ್ಕದಲ್ಲಿ ನಡೆದಿದೆ. ಪಿರಿಯಾಪಟ್ಟಣದಿಂದ ಧರ್ಮಸ್ಥಳಕ್ಕೆ ಆಗಮಿಸುತ್ತಿದ್ದ ವರನ ಕಡೆಯವರ ಮದುವೆಯ ಖಾಸಗಿ ಬಸ್ ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ವೇಳೆ ಎದುರುಗಡೆಯಿಂದ ಬರುತ್ತಿದ್ದ ಕಂಟೈನರ್ ಗೆ ಢಿಕ್ಕಿ ಹೊಡೆದಿದೆ. ಅವಘಡದಲ್ಲಿ ಬಸ್ ನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ

ಉಪ್ಪಿನಂಗಡಿ: ಬಸ್, ಕಂಟೈನರ್ ನಡುವೆ ಢಿಕ್ಕಿ; ಹಲವು ಮಂದಿಗೆ ಗಾಯ Read More »