April 2024

ನವದೆಹಲಿ: ಕೇಂದ್ರ ಸರ್ಕಾರದಿಂದ ಐಫೋನ್‌ ಬಳಕೆದಾರರಿಗೆ ಎಚ್ಚರಿಕೆ

ಸಮಗ್ರ ನ್ಯೂಸ್‌ : ಭಾರತದಲ್ಲಿ ಅತಿ ಹೆಚ್ಚು ಜನ ಆ್ಯಪಲ್‌ ಕಂಪನಿಯ ಐಫೋನ್‌ ಸೇರಿ ಹತ್ತಾರು ಉತ್ಪನ್ನಗಳನ್ನು ಬಳಸುತ್ತಿದ್ದು, ದೇಶದಲ್ಲಿ ಆ್ಯಪಲ್‌ ಕಂಪನಿಯ ಉತ್ಪನ್ನಗಳನ್ನು ಬಳಸುವುದೇ ಹೆಗ್ಗಳಿಕೆಯ ಸಂಕೇತ. ಇಂತಹ ಪರಿಸ್ಥಿತಿಯ ಮಧ್ಯೆಯೇ, ಆ್ಯಪಲ್‌ ಕಂಪನಿಯ ಐಫೋನ್‌, ಮ್ಯಾಕ್‌ಬುಕ್ಸ್‌, ಐಪ್ಯಾಡ್ಸ್‌ ಹಾಗೂ ವಿಷನ್‌ ಪ್ರೊ ಹೆಡ್‌ಸೆಟ್‌ಗಳನ್ನು ಬಳಸುವವರಿಗೆ ಕೇಂದ್ರ ಸರ್ಕಾರ ಎಚ್ಚರಿಕೆಯನ್ನು ನೀಡಿದೆ. ರಿಮೋಟ್‌ ಕೋಡ್‌ ಎಕ್ಸಿಕ್ಯೂಷನ್‌ಗೆ ಕನೆಕ್ಷನ್‌ ಮಾಡುವಾಗ ಏರುಪೇರಾಗಿದೆ. ಇದರಿಂದಾಗಿ ಐಫೋನ್‌, ಮ್ಯಾಕ್‌ಬುಕ್ಸ್‌, ಐಪ್ಯಾಡ್ಸ್‌ ಹಾಗೂ ವಿಷನ್‌ ಪ್ರೊ ಹೆಡ್‌ಸೆಟ್‌ ಬಳಸುವುದು ಅಪಾಯಕಾರಿಯಾಗಿದೆ ಎಂದು […]

ನವದೆಹಲಿ: ಕೇಂದ್ರ ಸರ್ಕಾರದಿಂದ ಐಫೋನ್‌ ಬಳಕೆದಾರರಿಗೆ ಎಚ್ಚರಿಕೆ Read More »

ವಯನಾಡ್ ಲೋಕಸಭಾ ಕ್ಷೇತ್ರದಿಂದ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ನಾಮಪತ್ರ ಸಲ್ಲಿಸಿದರು. ರಾಹುಲ್ ಗಾಂಧಿ ಅವರು ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಸೇರಿದಂತೆ ಪಕ್ಷದ ಇತರ ಹಿರಿಯ ನಾಯಕರೊಂದಿಗೆ ಚುನಾವಣಾಧಿಕಾರಿಯೂ ಆಗಿರುವ ವಯನಾಡ್ ಜಿಲ್ಲಾಧಿಕಾರಿಗೆ ಇಂದು ನಾಮಪತ್ರ ಸಲ್ಲಿಸಿದರು. ಇಂದು ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ವಯನಾಡಿಗೆ ಆಗಮಿಸಿದ ರಾಹುಲ್ ಗಾಂಧಿ, ನಾಮಪತ್ರ ಸಲ್ಲಿಸುವ ಮುನ್ನ ಇಲ್ಲಿನ ಕಲ್ಪೆಟ್ಟಾದಿಂದ ಸಿವಿಲ್ ಸ್ಟೇಷನ್

ವಯನಾಡ್ ಲೋಕಸಭಾ ಕ್ಷೇತ್ರದಿಂದ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ Read More »

ಚಾಮರಾಜನಗರದ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್‌ : ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸುನೀಲ್‌ ಬೋಸ್ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ಎಸ್.ಬಾಲರಾಜ್ ಅವರು ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ನಾಯಕರಿಂದ ಭರ್ಜರಿ ರೋಡ್ ಷೋವನ್ನು ನಡೆಸಲಾಯಿತು. ಮೈಸೂರಿನಿಂದ ಹೆಲಿಕಾಪ್ಟರ್ ಮೂಲಕ ನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು ನಗರದಲ್ಲಿ ಭರ್ಜರಿ ರೋಡ್ ಷೋ ನಡೆಸಿದರು. ನಗರದ ಭುವನೇಶ್ವರಿ ವೃತ್ತದಿಂದ ತೆರೆದ ವಾಹನ ಏರಿದ ಕಾಂಗ್ರೆಸ್ ನಾಯಕರು ಪಚ್ಚಪ್ಪ ವೃತ್ತದಿಂದ ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನದ

ಚಾಮರಾಜನಗರದ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ Read More »

ಹೈಕೋರ್ಟ್​ನ ಹಾಲ್ ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ

ಸಮಗ್ರ ನ್ಯೂಸ್: ಹೈಕೋರ್ಟ್​ನ ಹಾಲ್ 1ರಲ್ಲಿ ಮುಖ್ಯ ನ್ಯಾಯಮೂರ್ತಿ ಮುಂದೆ ವ್ಯಕ್ತಿಯೋರ್ವ ಬ್ಲೇಡ್ ನಿಂದ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಮೈಸೂರಿನ ಶ್ರೀರಾಂಪುರ ಮೂಲದ ಶ್ರೀನಿವಾಸ್ ಚಿನ್ನಮ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಶ್ರೀನಿವಾಸ್ ಅವರಿ​ಗೆ ಸಂಬಂಧಿಸಿದ ಪ್ರಕರಣದೊಂದು ಹೈಕೋರ್ಟ್​ ಮೆಟ್ಟಿಲೇರಿದೆ. ಪ್ರಕರಣ ವಿಚಾರಣೆ ನಡೆಯುತ್ತಿತ್ತು. ಪ್ರಕರಣದ ವಿಚಾರಣೆ ಅಂತ್ಯಕ್ಕೆ ತಲುಪಿದ್ದಂತೆ ನ್ಯಾಯಮೂರ್ತಿಗಳ ಎದುರು ಬಂದ ಶ್ರೀನಿವಾಸ್​ ಅರ್ಜಿಯೊಂದನ್ನು ನ್ಯಾಯಾಲಯದ ಸಿಬ್ಬಂದಿಗೆ ನೀಡಿ, ಅನ್ಯಾಯವಾಗಿದೆ ನನಗೆ ಎಂದು ಹೇಳಿ ಬ್ಲೆಡ್ ನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ

ಹೈಕೋರ್ಟ್​ನ ಹಾಲ್ ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ Read More »

ಶಿರಾಡಿ: ಖಾಸಗಿ ಬಸ್ ಮತ್ತು ಕಂಟೈನರ್ ನಡುವೆ ಭೀಕರ ಅಪಘಾತ| ಮದುವೆಗೆ ಹೊರಟವರು ಆಸ್ಪತ್ರೆಗೆ

ಸಮಗ್ರ ನ್ಯೂಸ್: ಖಾಸಗಿ ಬಸ್ ಹಾಗೂ ಕಂಟೈನರ್ ವಾಹನದ ನಡುವೆ ಅಪಘಾತ ಸಂಭವಿಸಿ ಹಲವರು ಗಂಭೀರ ಗಾಯಗೊಂಡ ಘಟನೆ ಏ.3 ರಂದು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಸಮೀಪದ ಉದನೆ ಎಂಬಲ್ಲಿ ನಡೆದಿದೆ. ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲು ಹೊರಟ ಖಾಸಗಿ ಬಸ್ ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಹತ್ತಿರದ ಆಸ್ಫತ್ರೆಗೆ ದಾಖಲಿಸಲಾಗಿದೆ. ವರನ ಮದುವೆ ದಿಬ್ಬಣದ ಖಾಸಗಿ ಬಸ್ಸು ಪಿರಿಯಾಪಟ್ಟಣದಿಂದ ಧರ್ಮಸ್ಥಳಕ್ಕೆ ತೆರಳುತಿತ್ತು ಎನ್ನಲಾಗಿದೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ

ಶಿರಾಡಿ: ಖಾಸಗಿ ಬಸ್ ಮತ್ತು ಕಂಟೈನರ್ ನಡುವೆ ಭೀಕರ ಅಪಘಾತ| ಮದುವೆಗೆ ಹೊರಟವರು ಆಸ್ಪತ್ರೆಗೆ Read More »

ಲೋಕಸಭೆ ಚುನಾವಣೆಯಿಂದ ಹಿಂದೆ ಸರಿದ ಗೌಡ್ತಿ| ಬಿಜೆಪಿ ಸೇರುವ ನಿರ್ಧಾರ ಪ್ರಕಟಿಸಿದ ಸುಮಲತಾ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ವಿಚಾರ ಗದ್ದಲ ಎಬ್ಬಿಸಿತು. ಇದೀಗ ಸುಮಲತಾ ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ಮತ್ತು ನಾನು ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿಕೆ ನೀಡಿದ್ದಾರೆ. ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್​ ತನಗೆ ಸಿಗುತ್ತದೆ ಎಂದು ಸುಮಲತಾ ಅಂಬರೀಶ್​ ನಿರೀಕ್ಷೆಯಲ್ಲಿದ್ದರು. ಆದರೆ ಕೊನೆ ಹಂತದಲ್ಲಿ ಸುಮಲತಾ ಅಂಬರೀಶ್​ ಅವರಿಗೆ ಟಿಕೆಟ್​ ತಪ್ಪಿದೆ. ಹೀಗಾಗಿ ಸುಮಲತಾ ಅಂಬರೀಶ್​ ಅವರ ಮುಂದಿನ ನಡೆ ಬಗ್ಗೆ ಗೊಂದಲವಿತ್ತು. ಈ ಪ್ರಶ್ನೆಗೆ ಮಂಡ್ಯದಲ್ಲಿ ಕಾರ್ಯಕರ್ತರ ಸಭೆ

ಲೋಕಸಭೆ ಚುನಾವಣೆಯಿಂದ ಹಿಂದೆ ಸರಿದ ಗೌಡ್ತಿ| ಬಿಜೆಪಿ ಸೇರುವ ನಿರ್ಧಾರ ಪ್ರಕಟಿಸಿದ ಸುಮಲತಾ Read More »

ಚಿಕ್ಕಮಗಳೂರು: ಮುಸ್ಲಿಂ ಸಮುದಾಯವನ್ನು ಶೈಕ್ಷಣಿಕ, ರಾಜಕೀಯವಾಗಿ ಬಲಗೊಳಿಸಿ;ರಜ್ವಿ

ಸಮಗ್ರ ನ್ಯೂಸ್ : ರಾಜ್ಯದಲ್ಲಿ ಮುಸ್ಲಿಂ ರಾಜಕೀಯ ನಾಯಕರ ಕೊರತೆಯಿರುವ ಹಿನ್ನೆಲೆಯಲ್ಲಿ ಶೈಕ್ಷಣಿಕ ಹಾಗೂ ರಾಜಕೀಯವಾಗಿ ಬಹಳಷ್ಟು ಹಿಂದುಳಿದಿದ್ದಾರೆ ಎಂದು ಸಾಮಾಜಿಕ ಚಿಂತಕ ಫೈರೋಜ್ ಅಹ್ಮದ್ ರಜ್ವಿ ಹೇಳಿದರು. ಈ ಕುರಿತು ಹೇಳಿಕೆ ನೀಡಿರುವ ಅವರು ಮುಸ್ಲೀಂ ಪ್ರಾಮಾಣಿಕ ನಾಯಕರನ್ನು ಗುರುತಿಸಿ ಸಮುದಾಯದವರ ಹಿತದೃಷ್ಟಿಯನ್ನು ಕಾಪಾಡಲು ಹಾಗೂ ರಾಜಕೀಯ ಪ್ರವೃತ್ತಿಯನ್ನು ಬಲಗೊಳಿಸಲು ಪ್ರತಿಯೊಂದು ಸಂಘ-ಸಂಸ್ಥೆಗಳು ಮುಂದಾಗಬೇಕೆಂದು ತಿಳಿಸಿದ್ದಾರೆ. ಕಳೆದ ಬಾರಿಯ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅನೇಕ ಮುಸ್ಲಿಂ ನಾಯಕರು ಸೇವೆ ಸಲ್ಲಿಸಿದ್ದು ರಾಜಕೀಯದಲ್ಲಿ ಮುತವರ್ಜಿಯನ್ನು ವಹಿಸಿದ್ದರ ಕಾರಣ

ಚಿಕ್ಕಮಗಳೂರು: ಮುಸ್ಲಿಂ ಸಮುದಾಯವನ್ನು ಶೈಕ್ಷಣಿಕ, ರಾಜಕೀಯವಾಗಿ ಬಲಗೊಳಿಸಿ;ರಜ್ವಿ Read More »

ಚಾಮರಾಜನಗರ : ಗೋಬ್ಯಾಕ್ ಸುನಿಲ್ ಬೋಸ್ ಪೋಸ್ಟರ್| ಕೈ ಅಭ್ಯರ್ಥಿಗೆ ಮುಜುಗರ

ಸಮಗ್ರ ನ್ಯೂಸ್ : ಚಾಮರಾಜನಗರದ ಗಲ್ಲಿಗಲ್ಲಿಗಳಲ್ಲಿ ಗೋಬ್ಯಾಕ್ ಸುನಿಲ್ ಬೋಸ್ ಪೋಸ್ಟರ್ ಮತ್ತು ಬರಹಗಳು ರಾರಾಜಿಸುತ್ತಿದ್ದು ಲೋಕಸಭಾ ಕೈ ಅಭ್ಯರ್ಥಿ ಸುನಿಲ್ ಬೋಸ್ಗೆ ಮುಜುಗರವನ್ನುಂಟುಮಾಡಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ಸುನಿಲ್ ಬೋಸ್ ವಿರುದ್ಧ ಅನಾಮಿಕರು ಅಸಮಾಧಾನ ಹೊರಹಾಕಿದ್ದಾರೆ, ಪಟ್ಟಣದ ರಸ್ತೆ ಬದಿಯ ಗೋಡೆಗಳಲ್ಲಿ ಗೋಬ್ಯಾಕ್ ಪೋಸ್ಟರ್ ಅಂಟಿಸಿ ಆಕ್ರೋಶ ಹೊರಹಾಕಿದ್ದು, ಗೋಬ್ಯಾಕ್ ಸುನಿಲ್ ಬೋಸ್ ಎಂದು ಬರೆದಿರುವ ಅಪರಿಚಿತರು ಮರಳು ಮಾಫಿಯಾ ದೊರೆಗೆ ಮರುಳಾಗಬೇಡಿ ಎಂದು ಬರೆದು ಪೋಸ್ಟರ್ ಗಳನ್ನು ಎಲ್ಲಾ ಕಡೆ ಅಂಟಿಸಿದ್ದಾರೆ.

ಚಾಮರಾಜನಗರ : ಗೋಬ್ಯಾಕ್ ಸುನಿಲ್ ಬೋಸ್ ಪೋಸ್ಟರ್| ಕೈ ಅಭ್ಯರ್ಥಿಗೆ ಮುಜುಗರ Read More »

ಸ್ಮಾರ್ಟ್ ಫೋನ್ ಬಳಕೆದಾರರಿಗೆ ಭಾರತ ಸರ್ಕಾರ ಎಚ್ಚರಿಕೆ! ಇಲ್ಲಿದೆ ಬಿಗ್ ಅಪ್ಡೇಟ್

ಭಾರತವು ವಿಶ್ವದ ಅತಿದೊಡ್ಡ ಸ್ಮಾರ್ಟ್‌ಫೋನ್ ಮಾರುಕಟ್ಟೆಗಳಲ್ಲಿ ಒಂದಾಗಿದೆ. ಇಲ್ಲಿ ಜನಸಂಖ್ಯೆಯ ಜತೆಗೆ ಮೊಬೈಲ್ ಬಳಕೆದಾರರೂ ಹೆಚ್ಚಿದ್ದಾರೆ. ವಿಮಾನ ನಿಲ್ದಾಣಗಳು, ಹೋಟೆಲ್‌ಗಳು, ಕೆಫೆಗಳಲ್ಲಿ USB ಪೋರ್ಟ್‌ಗಳೊಂದಿಗೆ ಚಾರ್ಜಿಂಗ್ ಸ್ಟೇಷನ್‌ಗಳನ್ನು ನಿಮ್ಮಲ್ಲಿ ಹಲವರು ನೋಡಿರಬಹುದು. ತುರ್ತು ಸಂದರ್ಭದಲ್ಲಿ ಅಂತಹ ಸ್ಥಳಗಳಲ್ಲಿ ಮೊಬೈಲ್ ಚಾರ್ಜಿಂಗ್ ಇರಿಸಬಹುದು. ಅಂತಹ ಸ್ಥಳಗಳಲ್ಲಿ ನಿಮ್ಮ ಫೋನ್ ಅನ್ನು ಚಾರ್ಜ್ ಮಾಡುವ ಮೊದಲು ದಯವಿಟ್ಟು ಜಾಗರೂಕರಾಗಿರಿ. ಇತ್ತೀಚೆಗೆ, ಭಾರತ ಸರ್ಕಾರವು ಸ್ಮಾರ್ಟ್ಫೋನ್ ಬಳಕೆದಾರರಿಗೆ ಪ್ರಮುಖ ಎಚ್ಚರಿಕೆಯನ್ನು ನೀಡಿದೆ. ಸಾರ್ವಜನಿಕ ಚಾರ್ಜಿಂಗ್ ಪೋರ್ಟ್‌ಗಳನ್ನು ಬಳಸಬಾರದು ಎಂದು ಅದು ಹೇಳಿದೆ.

ಸ್ಮಾರ್ಟ್ ಫೋನ್ ಬಳಕೆದಾರರಿಗೆ ಭಾರತ ಸರ್ಕಾರ ಎಚ್ಚರಿಕೆ! ಇಲ್ಲಿದೆ ಬಿಗ್ ಅಪ್ಡೇಟ್ Read More »

ತಿಂಗಳಿಗೆ 40,000 ಕೊಡುವ ಜಾಬ್ ಇಲ್ಲಿದೆ, ಬೇಗ ಅರ್ಜಿ ಸಲ್ಲಿಸಿ!

ಸಮಗ್ರ ಉದ್ಯೋಗ: ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪ್ರಾಜೆಕ್ಟ್​ ಅಡ್ಮಿನಿಸ್ಟ್ರೇಟಿವ್ ಕೋಆರ್ಡಿನೇಟರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಏಪ್ರಿಲ್ 6, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಈಗಲೇ ರೆಸ್ಯೂಮ್ ಕಳುಹಿಸಿ. ಸುರತ್ಕಲ್​​ನಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಶೈಕ್ಷಣಿಕ ಅರ್ಹತೆ:ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ,

ತಿಂಗಳಿಗೆ 40,000 ಕೊಡುವ ಜಾಬ್ ಇಲ್ಲಿದೆ, ಬೇಗ ಅರ್ಜಿ ಸಲ್ಲಿಸಿ! Read More »