May 2024

ಸ್ಪೋಕನ್ ಇಂಗ್ಲಿಷ್ ಕ್ಲಾಸ್/ ಸರ್ಕಾರಿ ಶಾಲೆಗಳಲ್ಲಿ ಶುರುವಾದ ತಯಾರಿ

ಸಮಗ್ರ ನ್ಯೂಸ್: “How to make English easy” ಎಂಬ ಪರಿಕಲ್ಪನೆಯೊಂದಿಗೆ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲಿಷ್ ಕ್ಲಾಸ್ ಶುರು ಮಾಡಲು ತಯಾರಿ ನಡೆದಿದ್ದು, ಈ ಯೋಜನೆಯನ್ನು ರೂಪಿಸುವಂತೆ ಶಾಲಾ ಶಿಕ್ಷಕರಿಗೆ ನಿರ್ದೇಶನ ನೀಡಲಾಗಿದೆ 2024- 25ರ ಶೈಕ್ಷಣಿಕ ವರ್ಷದಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು (ಡಿಎಸ್‍ಇಎಲ್) ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿಗಳನ್ನು ಪರಿಚಯಿಸಲಿದೆ. 40 ನಿಮಿಷಗಳ ಸ್ಪೋಕನ್ ಇಂಗ್ಲಿಷ್ ತರಗತಿಯನ್ನು ಪ್ರತಿ ಶನಿವಾರ […]

ಸ್ಪೋಕನ್ ಇಂಗ್ಲಿಷ್ ಕ್ಲಾಸ್/ ಸರ್ಕಾರಿ ಶಾಲೆಗಳಲ್ಲಿ ಶುರುವಾದ ತಯಾರಿ Read More »

ಪ್ರಧಾನಿ ಸ್ಥಾನದ ಗೌರವಕ್ಕೆ ಚ್ಯುತಿ ತಂದ ಮೊದಲ ಪ್ರಧಾನಿ ಮೋದಿ| ಮಾಜಿ ಪಿಎಂ ಮನಮೋಹನ್ ಸಿಂಗ್ ಟೀಕೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕ್ಷಣಗಣನೆ ಶುರುವಾಗಿರುವಾಗ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಲಿ ಪ್ರಧಾನಿ ಮೋದಿ ಬಗ್ಗೆ ಟೀಕೆ ಮಾಡಿದ್ದಾರೆ. ಪ್ರಧಾನಿ ಹುದ್ದೆಯ ಗೌರವಕ್ಕೆ ಚ್ಯುತಿ ತಂದ ಮೊದಲ ಪ್ರಧಾನಿ ಮೋದಿ ಎಂದು ಟೀಕಿಸಿದ್ದಾರೆ. ಕಳೆದ ತಿಂಗಳು ರಾಜಸ್ಥಾನದಲ್ಲಿ ಚುನಾವಣಾ ಸಮಾವೇಶದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದ ಪ್ರಧಾನಿ ಮೋದಿ, ‘ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನಿಮ್ಮ ಆಸ್ತಿಯನ್ನು ಕಸಿದುಕೊಂಡು ಹೆಚ್ಚು ಮಕ್ಕಳಿರುವವರಿಗೆ ಹಂಚುವುದಾಗಿ ಹೇಳಿದೆ. ಈ ದೇಶದ ಪ್ರಧಾನಿಯಾಗಿದ್ದವು ಹಿಂದೊಮ್ಮೆ ದೇಶದ ಸಂಪತ್ತಿನ ಮೊದಲ

ಪ್ರಧಾನಿ ಸ್ಥಾನದ ಗೌರವಕ್ಕೆ ಚ್ಯುತಿ ತಂದ ಮೊದಲ ಪ್ರಧಾನಿ ಮೋದಿ| ಮಾಜಿ ಪಿಎಂ ಮನಮೋಹನ್ ಸಿಂಗ್ ಟೀಕೆ Read More »

ವಿದ್ಯುತ್ ಲೈನ್ ದುರಸ್ಥಿ ವೇಳೆ ಚಾರ್ಜ್ ಮಾಡಲೆತ್ನಿಸಿದ ಯುವಕ| ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ

ಸಮಗ್ರ ನ್ಯೂಸ್: ವಿದ್ಯುತ್‌ ಲೆ„ನ್‌ ದುರಸ್ತಿ ವೇಳೆ ಲೈನ್‌ ಆಫ್‌ ಮಾಡಲಾಗಿದ್ದನ್ನು ಆನ್‌ ಮಾಡಲು ಯತ್ನಿಸಿದ ಯುವಕನ ಕೃತ್ಯ ಸಿಸಿ ಕೆಮರಾದಲ್ಲಿ ಪತ್ತೆಯಾದ ಘಟನೆ ಬುಧವಾರ ಸುಳ್ಯ ತಾಲೂಕಿನ ಕರಿಕ್ಕಳ ಎಂಬಲ್ಲಿ ನಡೆದಿದೆ. ಘಟನೆಯಿಂದ ಕೂದಲೆಳೆ ಅಂತರದಲ್ಲಿ ಬಾರೀ ದುರಂತವೊಂದು ತಪ್ಪಿದೆ. ಪಂಜ ಮೆಸ್ಕಾಂ ವ್ಯಾಪ್ತಿಯ ಸಿಬ್ಬಂದಿಗಳು ಕರಿಕ್ಕಳ ಸಮೀಪ ವಿದ್ಯುತ್‌ ಲೆ„ನ್‌ಗೆ ತಾಗುತ್ತಿದ್ದ ಮರದ ಗೆಲ್ಲು ತೆರವು ಮಾಡಲು ವಿದ್ಯುತ್‌ ಸಂಪರ್ಕ ಕಡಿತಗೊಳಿಸಿ ಯಾರೂ ಕೂಡ ಆಫ್‌ ಮಾಡದಂತೆ ಅದನ್ನು ತಂತಿಯಲ್ಲಿ ಕಟ್ಟಿ ಬಳಿಕ ಕೆಲಸ

ವಿದ್ಯುತ್ ಲೈನ್ ದುರಸ್ಥಿ ವೇಳೆ ಚಾರ್ಜ್ ಮಾಡಲೆತ್ನಿಸಿದ ಯುವಕ| ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ Read More »

ನಾಳೆಯಿಂದ 6 ದಿನ ರಾಜ್ಯದಲ್ಲಿ ಮದ್ಯ ಮಾರಾಟ ಬಂದ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಜೂನ್ 1 ರಿಂದ 6ರ ವರೆಗೆ ವೈನ್ ಶಾಪ್‌, ಎಂಆರ್‌ಪಿ ಔಟ್‌ಲೇಟ್‌ಗಳು ಬಂದ್ ಆಗಲಿವೆ ಎನ್ನಲಾಗಿದೆ. ಜೂನ್ 1 ರಂದು ಸಂಜೆ 4 ರಿಂದ ಜೂನ್ 3 ರ ಸಂಜೆ 4 ರವರೆಗೆ ವಿಧಾನ ಪರಿಷತ್ ಚುನಾವಣೆಯ ಕಾರಣ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಜೂನ್ 1 ರಂದು ಸಂಜೆ 4 ರ ಒಳಗೆ ಮತ್ತು ಜೂನ್ 3 ರ ಸಂಜೆ 4 ರ ನಂತರ ಮದ್ಯ ಮಾರಾಟಕ್ಕೆ ಅವಕಾಶವಿದೆ. ಲೋಕಸಭೆ ಚುನಾವಣೆಯ

ನಾಳೆಯಿಂದ 6 ದಿನ ರಾಜ್ಯದಲ್ಲಿ ಮದ್ಯ ಮಾರಾಟ ಬಂದ್ Read More »

ಉಡುಪಿ: ಗ್ಯಾಂಗ್ ವಾರ್ ಪ್ರಕರಣ- ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸರು

ಸಮಗ್ರ ನ್ಯೂಸ್‌ : ಉಡುಪಿ ಕುಂಜಿಬೆಟ್ಟುವಿನಲ್ಲಿ ನಡೆದ ಗ್ಯಾಂಗ್ ವಾರ್ ಪ್ರಕರಣದ ಆರೋಪಿಗಳನ್ನು ಉಡುಪಿಯ ಪ್ರಧಾನ ಸಿವಿಲ್ ನ್ಯಾಯಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ಶುಕ್ರವಾರ ನಗರ ಠಾಣಾ ಪೊಲೀಸರು ಹಾಜರುಪಡಿಸಿದರು. ಪ್ರಕರಣದಲ್ಲಿ ಬಂಧಿತರಾಗಿರುವ ಆರು ಆರೋಪಿಗಳ ಪೈಕಿ ಅಲ್ಫಾಝ್, ಮಜಿದ್, ರಾಕಿಬ್, ಶರೀಫ್ ನನ್ನು ಬಾಡಿ ವಾರೆಂಟ್ ಮೂಲಕ ತನಿಖೆಗೆ ಪಡೆಯಲಾಗಿದ್ದು, ತನಿಖೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಆರೋಪಿಗಳ ಮಹಜರು ಪ್ರಕ್ರಿಯೆಯನ್ನು ನಡೆಸಿದ್ದು, ತನಿಖೆಯಲ್ಲಿ ಆರೋಪಿಗಳ ಕೃತ್ಯಕ್ಕೆ ಬಳಸಿದ 2

ಉಡುಪಿ: ಗ್ಯಾಂಗ್ ವಾರ್ ಪ್ರಕರಣ- ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸರು Read More »

ಪೊಲೀಸರು ಭಯೋತ್ಪಾದಕರನ್ನು ಹಿಡಿದು ತಂದಾಗಲೂ ಠಾಣೆಗೆ ನುಗ್ತೀರಾ? ಶಾಸಕ ಹರೀಶ್ ಪೂಂಜಾಗೆ ಛಾಟಿ ಬೀಸಿದ ಹೈಕೊರ್ಟ್

ಸಮಗ್ರ ನ್ಯೂಸ್: ಪೊಲೀಸರು ಭಯೋತ್ಪಾದಕರನ್ನು ಹಿಡಿದು ತಂದಾಗಲೂ ಪೊಲೀಸ್ ಠಾಣೆಗೆ ನುಗ್ತೀರಾ? ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ಉಚ್ಚ ನ್ಯಾಯಾಲಯ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರನ್ನು ನಿಂದಿಸಿ, ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಆರೋಪದಡಿ ದಾಖಲಾದ ಎಫ್‌ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಉಚ್ಚ ನ್ಯಾಯಾಲಯ ಶಾಸಕರ ವಿರುದ್ಧ ಅಸಮಾಧಾನ ಹೊರಹಾಕಿದೆ. ಪೊಲೀಸ್ ಠಾಣೆಗೆ ಏಕೆ ಹೋಗಿದ್ದು? ಶಾಸಕರಾದ ಮಾತ್ರಕ್ಕೆ ಠಾಣೆಗೆ ಹೋಗಿ ಪೊಲೀಸರ ಕೆಲಸಕ್ಕೆ

ಪೊಲೀಸರು ಭಯೋತ್ಪಾದಕರನ್ನು ಹಿಡಿದು ತಂದಾಗಲೂ ಠಾಣೆಗೆ ನುಗ್ತೀರಾ? ಶಾಸಕ ಹರೀಶ್ ಪೂಂಜಾಗೆ ಛಾಟಿ ಬೀಸಿದ ಹೈಕೊರ್ಟ್ Read More »

ಭವಾನಿ ರೇವಣ್ಣ ಜಾಮೀನು ಅರ್ಜಿ ವಜಾ| ಯಾವುದೇ ಕ್ಷಣ ಬಂಧನದ ಸಾಧ್ಯತೆ

ಸಮಗ್ರ ನ್ಯೂಸ್: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕೆ.ಆರ್.ನಗರ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಭವಾನಿ ರೇವಣ್ಣ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ. ಪ್ರಜ್ವಲ್ ರೇವಣ್ಣ ಅವರಿಗೆ ಜಾಮೀನು ನಿರಾಕರಿಸಿ ಆರು ದಿನ ಎಸ್​​ಐಟಿ ವಶಕ್ಕೆ ನೀಡಿದ ಬೆನ್ನಲ್ಲೇ ಅವರ ತಾಯಿ ಭವಾನಿ ಅವರಿಗೆ ಆಘಾತ ಎದುರಾಗಿದೆ. ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ವಜಾಗೊಂಡಿರುವ ಕಾರಣ ಎಸ್​ಐಟಿ ಅಧಿಕಾರಿಗಳು ಅವರನ್ನು ಬಂಧಿಸುವ ಸಾಧ್ಯತೆಗಳಿವೆ. ಪ್ರಕರಣದ ತನಿಖೆ

ಭವಾನಿ ರೇವಣ್ಣ ಜಾಮೀನು ಅರ್ಜಿ ವಜಾ| ಯಾವುದೇ ಕ್ಷಣ ಬಂಧನದ ಸಾಧ್ಯತೆ Read More »

6 ದಿನಗಳ ಕಾಲ ಎಸ್ಐಟಿ ವಶಕ್ಕೆ ಪ್ರಜ್ವಲ್ ರೇವಣ್ಣ|

ಸಮಗ್ರ ನ್ಯೂಸ್: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಜೆಡಿಎಸ್ ಮುಖಂಡ, ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೂಡಲೇ ಬಂಧಿಸಲಾಗಿದೆ. ಹಾಸನದ 33 ವರ್ಷದ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಅವರ ವಿರುದ್ಧದ ಆರೋಪಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ವಿಮಾನ ನಿಲ್ದಾಣದಿಂದ ವಶಕ್ಕೆ ತೆಗೆದುಕೊಂಡಿದೆ. ದೇಶವನ್ನು ತೊರೆದ ಸುಮಾರು ಒಂದು ತಿಂಗಳ ನಂತರ ಅವರು ಗುರುವಾರ ಮಧ್ಯರಾತ್ರಿ ಜರ್ಮನಿಯಿಂದ ಭಾರತಕ್ಕೆ ಮರಳಿದರು.

6 ದಿನಗಳ ಕಾಲ ಎಸ್ಐಟಿ ವಶಕ್ಕೆ ಪ್ರಜ್ವಲ್ ರೇವಣ್ಣ| Read More »

ಉಡುಪಿ: ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

ಸಮಗ್ರ ನ್ಯೂಸ್‌ : ಮಳೆಗಾಲದ ಅವಧಿಯಲ್ಲಿ ಉಡುಪಿ ಜಿಲ್ಲೆಯೂ ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು, ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮೀನುಗಾರಿಕೆ ನಡೆಸುವಂತಿಲ್ಲ. ಯಾಂತ್ರೀಕೃತ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ ಒಟ್ಟು 61 ದಿನಗಳ ನಿಷೇಧವನ್ನು ಹೇರಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ

ಉಡುಪಿ: ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ Read More »

ಎಚ್ ಬಿ ಸಿ ನೌಕರ ನೇಣಿಗೆ ಶರಣು

ಅಥಣಿ : ಪಟ್ಟಣದ ಹಿಪ್ಪರಗಿ ಆಣೆಕಟ್ಟು ಹಿನ್ನೀರು ನೀರಾವರಿ ನಿಗಮದ ನೌಕರ ಕಚೇರಿ ಹೊರಾಂಗಣದಲ್ಲಿ ನೇಣಿಗೆ ಶರಣಾದ ಘಟನೆ ನಡೆದಿದೆ. ಕುಮಾರ ಬಸಯ್ಯ ಧುಮ್ಕಿಮಠ (49) ಮೃತ ದುರ್ದೈವಿಯಾಗಿದ್ದು ಇಲಾಖೆ ಆವರಣದ ಪಕ್ಕದಲ್ಲಿದ್ದ ಬೇವಿನ ಮರಕ್ಕೆ ನಿನ್ನೆ ತಡ ರಾತ್ರಿ ನೇಣಿಗೆ ಶರಣಾಗಿದ್ದಾನೆ. ಸುಮಾರು 20 ವರ್ಷ ಸರ್ಕಾರಿ ನೌಕರಿಯಲ್ಲಿ ಸೇವೆಸಲ್ಲಿಸುತ್ತಿದ್ದ ಕುಮಾರ ಕಳೆದ ಮೂರು ತಿಂಗಳಿಂದ ಕೆಲಸಕ್ಕೆ ಬಾರದೆ ರಜೆಯಲ್ಲಿದ್ದ ಎಂದು ತಿಳಿದುಬಂದಿದೆ.ಘಟನೆ ಸಂಬಂಧ ಅಥಣಿ ಪೊಲೀಸ್ ರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು

ಎಚ್ ಬಿ ಸಿ ನೌಕರ ನೇಣಿಗೆ ಶರಣು Read More »