ಮಲ್ಪೆ:ಸಮುದ್ರ ಪಾಲಾಗುತ್ತಿದ್ದ ಬಾಲಕನ ರಕ್ಷಣೆ

ಸಮಗ್ರ ನ್ಯೂಸ್‌ : ಸಮುದ್ರ ಪಾಲಾಗುತ್ತಿದ್ದ ಬಾಲಕನನ್ನು ರಕ್ಷಣೆ ಮಾಡಿದ ಘಟನೆ ಉಡುಪಿ ತಾಲೂಕಿನ ಮಲ್ಪೆ ಬೀಚ್ ನಲ್ಲಿ ಸಂಭವಿಸಿದೆ.

Ad Widget ... ..

ಚಿಕ್ಕಬಳ್ಳಾಪುರ ಮೂಲದ ಶ್ರೇಯಸ್ (12) ರಕ್ಷಿಸಲ್ಪಟ್ಟ ಬಾಲಕ. ಈತ ಕುಟುಂಬದೊಂದಿಗೆ ಮಲ್ಪೆ ಬೀಚ್‌ಗೆ ಬಂದಿದ್ದು, ಸಮುದ್ರಕ್ಕಿಳಿದು ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಅಲೆಗಳ ಸೆಳೆತಕ್ಕೆ ಸಿಲುಕಿ ನೀರಿನಲ್ಲಿ‌ ಮುಳುಗಿದ್ದಾನೆ.

Ad Widget

ತಕ್ಷಣವೇ ಮಲ್ಪೆ ಲೈಫ್ ಗಾರ್ಡ್ ಸಿಬ್ಬಂದಿಯು ಬಾಲಕನನ್ನು ರಕ್ಷಣೆ ಮಾಡಿದರು. ಪ್ರಾಥಮಿಕ ಚಿಕಿತ್ಸೆಯ ಬಳಿಕ ಬಾಲಕ ಕುಟುಂಬದವರೊಂದಿಗೆ ತೆರಳಿದ್ದಾನೆ. ಮಲ್ಪೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Leave a Comment

Your email address will not be published. Required fields are marked *