Ad Widget .

ಪ್ರಜ್ವಲ್ ಜಾಗದಲ್ಲಿ ಮುಸ್ಲಿಂ ವ್ಯಕ್ತಿ ಇದ್ದಿದ್ದರೆ ಹೋರಾಟದ ಸ್ವರೂಪವೇ ಬೇರೆ: ನಟಿ ಸ್ವರಾ ಭಾಸ್ಕರ್

ಸಮಗ್ರ ನ್ಯೂಸ್‌ : ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಪ್ರತಿಕ್ರಿಯಿಸಿದ್ದು, ತಪ್ಪು ಮಾಡಿರುವ ವ್ಯಕ್ತಿ ಯಾವ ಧರ್ಮದವನು ಎನ್ನುವುದರ ಮೇಲೆ ಹೋರಾಟಗಳು ಆಗುತ್ತದೆ. ಪ್ರಜ್ವಲ್ ಜಾಗದಲ್ಲಿ ಮುಸ್ಲಿಂ ವ್ಯಕ್ತಿ ಇದ್ದಿದ್ದರೆ ಹೋರಾಟ ಬೇರೆಯ ಸ್ವರೂಪವನ್ನೇ ಪಡೆದುಕೊಳ್ಳುತ್ತಿತ್ತು ಎಂದು ನಟಿ ಸ್ವರಾ ಭಾಸ್ಕರ್ ಹೇಳಿದರು.

Ad Widget . Ad Widget .

ಶಿವರಾಜ್ ಕುಮಾರ್ ನಟನೆಯ ಬಂಧು ಬಳಗ ಸಿನಿಮಾ ಸೇರಿದಂತೆ ನಾನಾ ಭಾಷೆಗಳ ಚಿತ್ರಗಳಲ್ಲಿ ನಟಿಸಿರುವ ಪೂನಂ ಕೌರ್ ಸಿಡಿದೆದ್ದಿದ್ದಾರೆ. ಪ್ರಜ್ವಲ್ ರೇವಣ್ಣರಂಥ ನೀಚ ವ್ಯಕ್ತಿಗಳನ್ನು ಗೆಲ್ಲಿಸಬೇಕಾ ಎಂದು ಅವರು ಪ್ರಶ್ನೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಪೂನಂ ಹೇಳಿಕೆ ಮಹತ್ವ ಪಡೆದುಕೊಂಡಿದೆ.

Ad Widget . Ad Widget .

ಮಹಿಳೆಯರಿಗೆ ಬೆದರಿಕೆ ಹಾಕಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಸಾವಿರಾರು ವಿಡಿಯೋಗಳು ಹರಿದಾಡುತ್ತಿವೆ. ಹಣ ಮತ್ತು ರಾಜಕೀಯ ಕಾರಣದಿಂದಾಗಿ ಅವರು ತಪ್ಪಿಸಿಕೊಂಡು ಹೋಗಿದ್ದಾರೆ. ಜರ್ಮನಿಯಲ್ಲಿ ಪ್ರಜ್ವಲ್ ನೆಮ್ಮದಿಯಾಗಿದ್ದಾರೆ. ಇವರಿಗೆ ಶಿಕ್ಷೆ ಆಗಬೇಕು ಎಂದರೆ ಜನರು ತಿರುಗಿ ಬೀಳಬೇಕು ಎಂದು ಅವರು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

Leave a Comment

Your email address will not be published. Required fields are marked *