ತಮಿಳುನಾಡು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್‌

ಸಮಗ್ರ ನ್ಯೂಸ್ : ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿರುವ ಘಟನೆ ಸೇಲಂ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ನಡೆದಿದೆ.

. Ad Widget . Ad Widget

ತಮಿಳುನಾಡಿನ ಯೆರ್ಕೇಡ್ನಿಂದ ಸೇಲಂಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ತಿರುವಿನಲ್ಲಿದ್ದ ಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರು ಜೋರಾಗಿ ಕಿರುಚಿಕೊಂಡಿದ್ದಾರೆ.

. Ad Widget . . Ad Widget . Ad Widget

ಅಷ್ಟರಲ್ಲೇ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ. ಕೂಡಲೇ ಅಲ್ಲಿದ್ದ ಇತರೆ ಪ್ರಯಾಣಿಕರು ವಾಹನ ನಿಲ್ಲಿಸಿ ಸಹಾಯಕ್ಕೆ ಮುಂದಾಗಿದ್ದಾರೆ. ದುರ್ಘಟನೆಯಲ್ಲಿ ಓರ್ವ ಬಾಲಕ ಸೇರಿ ಒಟ್ಟು ಐವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ 45 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಇನ್ನೂ ಅಪಘಾತದ ಸ್ಥಳಕ್ಕೆ ಸ್ಥಳೀಯರೊಂದಿಗೆ ರಕ್ಷಣಾ ತಂಡಗಳು ಧಾವಿಸಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸೇಲಂ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

Leave a Comment

Your email address will not be published. Required fields are marked *