ಬೆಳಗಾವಿ: ಮೋದಿ ತೀರಿಕೊಂಡರೆ 140 ಕೋಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿಯೇ ಇಲ್ವಾ?|ಶಾಸಕ ರಾಜು ಕಾಗೆ

ಸಮಗ್ರ ನ್ಯೂಸ್‌ : ಮೋದಿ ತೀರಿಕೊಂಡರೆ 140 ಕೋಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿಯೇ ಇಲ್ವಾ? ಎಂದು ಹೇಳುವ ಮೂಲಕ ಕಾಂಗ್ರೆಸ್ ಹಿರಿಯ ಶಾಸಕ ರಾಜು ಕಾಗೆ ಕಿಡಿಕಾರಿದ್ದಾರೆ.

Ad Widget ... ..

ಬೆಳಗಾವಿಯ ಕಾಗವಾಡ ತಾಲೂಕಿನ ಮಮದಾಪೂರ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡುವ ವೇಳೆ ಮೋದಿ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ. ನರೇಂದ್ರ ಮೋದಿ ತೀರಿಕೊಂಡರೆ ದೇಶದಲ್ಲಿ ಮುಂದೆ ಯಾರೂ ಪ್ರಧಾನಿ ಆಗೋದೇ ಇಲ್ವಾ ಎಂದು ಪ್ರಶ್ನೆ ಮಾಡಿದ್ದಾರೆ.

Ad Widget

ಈಗಿನ ಯುವಕರು ಮೋದಿ ಮೋದಿ ಅನ್ನುತ್ತಾರೆ, ಮೋದಿನ ತೆಗೆದುಕೊಂಡು ನೆಕ್ಕುತ್ತೀರಾ? ರಾಜ್ಯದಲ್ಲಿ ಮತದಾರುರು ಕಾಂಗ್ರೆಸ್ ಸರ್ಕಾರ ಬೇಕು ಅಂತಾರೆ, ಆದ್ರೆ ಕೇಂದ್ರದಲ್ಲಿ ಮೋದಿನೇ ಬರಬೇಕು ಅಂತಾರೆ. ಮೋದಿ ಇಲ್ಲಿ ಬಂದು ನೋಡುತ್ತಾರಾ? ಇಲ್ಲಿ ಏನಾದರೂ ಸಮಸ್ಯೆ ಆದರೆ ಮೋದಿ ಬರುವುದಿಲ್ಲ. ಇಲ್ಲಿ ನಾವೇ ನಿಮ್ಮ ಸಮಸ್ಯೆ ಆಲಿಸಬೇಕು. ನರೇಂದ್ರ ಮೋದಿ ಅವರು 3,000 ಕೋಟಿ ವಿಮಾನದಲ್ಲಿ ಓಡಾಡ್ತಾರೆ, 4 ಲಕ್ಷ ರೂಪಾಯಿ ಸೂಟ್ ಹಾಕಿಕೊಳ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

Leave a Comment

Your email address will not be published. Required fields are marked *