Ad Widget .

ಅಶ್ಲೀಲ‌ ವಿಡಿಯೋ ಪ್ರಕರಣ| ಮೊತ್ತಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ಪ್ರಜ್ವಲ್

ಸಮಗ್ರ ನ್ಯೂಸ್: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಭಾರಿ ಸದ್ದು ಮಾಡುತ್ತಿದ್ದು, ಈ ಬಗ್ಗೆ ಸ್ವತಃ ಪ್ರಜ್ವಲ್ ರೇವಣ್ಣ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. “ನಾನು ಬೆಂಗಳೂರಿನಲ್ಲಿ ಇಲ್ಲ, ಸತ್ಯ ಆದಷ್ಟು ಬೇಗ ಹೊರಬರಲಿದೆ” ಎಂದು ಹೇಳಿದ್ದಾರೆ.

Ad Widget . Ad Widget .

ಪ್ರಜ್ವಲ್ ಲೈಂಗಿಕ ಪ್ರಕರಣದ ಕುರಿತು ಎಸ್​ಐಟಿ ತನಿಖೆ ಚುರುಕುಗೊಳಿಸಿದ್ದು, ಇಂದೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಹೀಗಾಗಿ, ಪ್ರಜ್ವಲ್ ಪರ ವಕೀಲರು, ನಮ್ಮ ಕಕ್ಷಿದಾರರು ಬೆಂಗಳೂರಿನಿಂದ ಹೊರಗಡೆ ಪ್ರವಾಸದಲ್ಲಿದ್ದು ಏಳು ದಿನ ಕಾಲಾವಕಾಶ ಕೊಡಿ ಎಂದು ಮನವಿ ಮಾಡಿದ್ದಾರೆ.

Ad Widget . Ad Widget .

ಈ ಬೆನ್ನಲ್ಲೇ ಪ್ರಜ್ವಲ್ ಪೋಸ್ಟ್ ಮಾಡಿದ್ದು, ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ ಸಿಐಡಿ (CID) ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

Leave a Comment

Your email address will not be published. Required fields are marked *