ಸಮಗ್ರ ನ್ಯೂಸ್: ಕೋವಿಡ್ ಲಸಿಕೆ ಪಡೆದ ಬಳಿಕ ಡೌನ್‍ಲೋಡ್ ಮಾಡಲಾಗುವ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿ ಪೋಟೋ ಹಾಕಲಾಗುತ್ತಿದ್ದು, ಆದರೆ ಈಗ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ಮೋದಿ ಪೋಟೋ ತೆರವು ಮಾಡಲಾಗಿದೆ. ಇದು ಕೋವಿಶೀಲ್ಡ್ ಅಡ್ಡಪರಿಣಾಮದ ಬಳಿಕ ಕೇಂದ್ರ ಬಿಜೆಪಿ ಸರ್ಕಾರ ತೆಗೆದಿದೆ ಎಂದು ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದ್ದು, ಲೋಕಸಭಾ ಚುನಾವಣೆ ನೀತಿ ಸಂಹಿತೆ ಕಾರಣ ಪ್ರಮಾಣಪತ್ರ, ವೆಬ್‍ಸೈಟ್ ಸೇರಿದಂತೆ ಅಲ್ಲೆಡೆಯಿಂದ ಪೋಟೋಗಳನ್ನು ತೆಗೆದು ಹಾಕಲಾಗಿದೆ ಎಂದು ತಿಳಿಸಿದೆ.
ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಜಾರಿಯಾಗಿರುವ ನೀತಿ ಸಂಹಿತೆ ಪ್ರಕಾರ ಸರ್ಕಾರದ ಎಲ್ಲಾ ವೆಬ್‍ಸೈಟ್, ಆಪ್‍ಗಳಿಂದ ಪ್ರಧಾನಿ ಮೋದಿ, ಆಯಾ ಸಚಿವಾಲಯದ ಸಚಿವರ ಪೋಟೋಗಳನ್ನು ತೆಗೆದು ಹಾಕಲಾಗಿದೆ. ಪೋಟೋ ತೆಗೆದು ಹಾಕಿದ್ದ ಹಿಂದೆ ಬೇರೆ ಯಾವುದೇ ಉದ್ದೇಶವಾಗಲಿ,ವಿವಾದವಾಗಲಿ ಇಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.
ವಿಧಾನಸಭಾ ಚುನಾವಣೆ ವೇಳೆ ಆಯಾ ರಾಜ್ಯಗಳಲ್ಲೂ ಪ್ರಧಾನಿ ಮೋದಿ ಪೋಟೋವನ್ನು ಕೋವಿಡ್ ಲಸಿಕೆ ಪ್ರಮಾಣಪತ್ರದಿಂದ ತೆಗೆದು ಹಾಕಲಾಗಿತ್ತು. ನೀತಿ ಸಂಹಿತೆ ಗೆ ಧಕ್ಕೆಯಾಗದಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.
ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಲು ಕಾರಣ ಸಾಮಾಜಿಕ ಮಾಧ್ಯಮಗಳಲ್ಲಿ ಕೋವೀಶೀಲ್ಡ್ ಲಸಿಕೆ ಅಡ್ಡಪರಿಣಾಮ ಬಳಿಕ ಪೋಟೋ ತೆಗೆದು ಹಾಕಲಾಗಿದೆ ಅನ್ನೋ ಮಾಹಿತಿ ಹರಿದಾಡಿತ್ತು.