Ad Widget .

ಲೋಕಸಭೆ ಚುನಾವಣೆ ಪ್ರಚಾರ – ಇಂದು ರಾಹುಲ್ ಗಾಂಧಿ ಶಿವಮೊಗ್ಗಕ್ಕೆ ಭೇಟಿ

ಸಮಗ್ರ ನ್ಯೂಸ್‌ : ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶಿವಮೊಗ್ಗ ನಗರಕ್ಕೆ ಭೇಟಿ ನೀಡಿ ಲೋಕಸಭೆ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಕೈ ಅಭ್ಯರ್ಥಿ ಪರ ಮತಯಾಚನೆ ನಡೆಸಲಿದ್ದಾರೆ.

Ad Widget . Ad Widget .

ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರ ರಾಹುಲ್ ಗಾಂಧಿ ಪ್ರಚಾರ ನಡೆಸಲಿದ್ದು, ಅವರ ಜೊತೆಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಿಎಂ ಸಿದ್ದರಾಮಯ್ಯ ), ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

Ad Widget . Ad Widget .

ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಕುಟುಂಬದ ಮಗಳನ್ನು ಕಣಕ್ಕಿಳಿಸಿದ್ದು, ಪ್ರಚಾರಕ್ಕೆ ಜನಪ್ರಿಯ ಸ್ಟಾರ್‌ ಶಿವರಾಜ್‌ಕುಮಾರ್‌ ಕೂಡ ಆಗಮಿಸಿ ಪತ್ನಿಯ ಪರ ಬಿರುಗಾಳಿಯಂತೆ ಪ್ರಚಾರ ನಡೆಸುತ್ತಿದ್ದಾರೆ. ಸ್ವತಃ ಸಚಿವ ಮಧು ಬಂಗಾರಪ್ಪ, ತಮ್ಮ ಸೋದರಿಯ ಗೆಲುವಿಗಾಗಿ ಟೊಂಕ ಕಟ್ಟಿ ನಿಂತುಬಿಟ್ಟಿದ್ದಾರೆ. ಇನ್ನೊಂದು ಕಡೆ ಬಿಜೆಪಿಯ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರು ಈಶ್ವರಪ್ಪನವರ ಬಂಡಾಯದಿಂದಾಗಿ ಸಂಕಷ್ಟ ಅನುಭವಿಸುತ್ತಿದ್ದಾರೆ.

ಮತ್ತೊಂದು ಕಡೆ ಪ್ರಜ್ವಲ್‌ ರೇವಣ್ಣ ಅವರ ಪ್ರಕರಣದಿಂದಾಗಿ ಬಿಜೆಪಿ ಹಾಗೂ ಜೆಡಿಎಸ್‌ ಮುಜುಗರ ಅನುಭವಿಸುತ್ತಿವೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಹೋದಲ್ಲಿ ಬಂದಲ್ಲಿ ಈ ವಿಚಾರ ಎತ್ತಿ ಅಣಕಿಸುತ್ತಿದ್ದಾರೆ. ರಾಹುಲ್ ರಾಜ್ಯಕ್ಕೆ ಬಂದಾಗ ಪ್ರಚಾರದ ಕಣದಲ್ಲಿ ಈ ವಿಚಾರವನ್ನು ಎತ್ತಿ ಟೀಕಿಸಲಿದ್ದಾರೆಯೇ ಎಂಬ ಕುತೂಹಲ ಮೂಡಿದೆ.

ಇಂದು ನಗರದ ಪ್ರೀಡಂ ಪಾರ್ಕ್‌ನ ಅಲ್ಲಮಪ್ರಭು ಮೈದಾನದಲ್ಲಿ ಕಾಂಗ್ರೆಸ್‌ನ ಬೃಹತ್ ಪ್ರಜಾಧ್ವನಿ ಸಮಾವೇಶ ನಡೆಯಲಿದೆ. ಸಚಿವ ಮಧು ಬಂಗಾರಪ್ಪ ಉಸ್ತುವಾರಿಯಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ಶಿವಮೊಗ್ಗ ನಗರದಲ್ಲಿ ಇಂದು ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಯಲಿದೆ. ಗೀತಾರನ್ನು ಗೆಲ್ಲಿಸಲು ಪಣ ತೊಟ್ಟಿರುವ ನಟ ಶಿವರಾಜ್ ಕುಮಾರ್, ಮಧು ಬಂಗಾರಪ್ಪ ಕ್ಷೇತ್ರದ ತುಂಬಾ ಓಡಾಡಿ ಗೆಲ್ಲಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ.

ಇಂದು ರಾಹುಲ್‌ ಗಾಂಧಿ ಭಾಗವಹಿಸಲಿರುವ ಪ್ರಜಾ ಧ್ವನಿ ಯಾತ್ರೆ ನಗರದ ಅಲ್ಲಮ ಪ್ರಭು ಮೈದಾನದಲ್ಲಿ ಬೆಳಿಗ್ಗೆ 11:30ರಿಂದ ಶುರುವಾಗಲಿದೆ. ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸುವ ಸಾಧ್ಯತೆ ಇದೆ. ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಬೃಹತ್ ವೇದಿಕೆ ನಿರ್ಮಾಣ ಮಾಡಿಕೊಳ್ಳಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

Leave a Comment

Your email address will not be published. Required fields are marked *