Ad Widget .

ನವದೆಹಲಿ: ದುಷ್ಕರ್ಮಿಗಳಿಂದ ಶಾಲಾ ಆವರಣದಲ್ಲೇ ವಿದ್ಯಾರ್ಥಿನಿ ಮುಖದ ಮೇಲೆ ಬ್ಲೇಡ್‌ನಿಂದ ಹಲ್ಲೆ

ಸಮಗ್ರ ನ್ಯೂಸ್‌ : ಶಾಲಾ ಆವರಣದಲ್ಲೇ ವಿದ್ಯಾರ್ಥಿನಿಯ ಮುಖದ ಮೇಲೆ ಬ್ಲೇಡ್‌ನಿಂದ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಘಟನೆಯು ದೆಹಲಿಯ ಗುಲಾಬಿ ಬಾಗ್ ಟೈಪ್-1 CO-ED ಸರ್ವೋದಯ ವಿದ್ಯಾಲಯದಲ್ಲಿ ನಡೆದಿದೆ.

Ad Widget . Ad Widget .

ದುಷ್ಕರ್ಮಿಗಳು ಶಾಲಾ ಆವರಣದಲ್ಲೇ ಬಾಲಕಿ ಮೇಲೆ ಬ್ಲೇಡ್​ನಿಂದ ಹಲ್ಲೆ ಮಾಡಿದ್ದಾರೆ. ಕೆನ್ನೆ ಮೇಲೆ ಕುಯ್ದುದಿದ್ದರಿಂದ ಸಾಕಷ್ಟು ರಕ್ತ ಹೋಗುತ್ತಲೇ ಇದೆ. ನೋವು ತಾಳಲಾರದೇ ವಿದ್ಯಾರ್ಥಿನಿಯು ಕಿರುಚಿಕೊಂಡು ಅಳುತ್ತಿದ್ದಾಳೆ. ಅಲ್ಲದೇ ಆಕೆಯ ಗೆಳೆತಿಯರು ಕೂಡ ಗಾಬರಿಗೊಂಡಿದ್ದಾರೆ. ಸದ್ಯ ಇದನ್ನು ಅಲ್ಲಿದ್ದ ಮಹಿಳೆಯೊಬ್ಬರು ಮೊಬೈಲ್​​ನಲ್ಲಿ ವಿಡಿಯೋ ಮಾಡಿದ್ದಾರೆ ಎಂದು ಹೇಳಲಾಗಿದೆ.

Ad Widget . Ad Widget .

ಹಲ್ಲೆ ಮಾಡಿದವರು ಯಾರು ಎಂಬುದು ಇನ್ನು ತಿಳಿದು ಬಂದಿಲ್ಲ. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದ್ದು, ಈ ಬಗ್ಗೆ ಪೊಲೀಸರು ಶೀಘ್ರ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Leave a Comment

Your email address will not be published. Required fields are marked *