Ad Widget .

ಶಾಸ್ತ್ರಗಳನ್ನು ಪೂರೈಸದ ಮದುವೆಗೆ ಮಾನ್ಯತೆ ಇಲ್ಲ/ ಸ್ಪಷ್ಟಪಡಿಸಿದ ಸುಪ್ರೀಂ

ಸಮಗ್ರ ನ್ಯೂಸ್: ಸಪ್ತಪದಿ ಸೇರಿದಂತೆ ಅಗತ್ಯ ಶಾಸ್ತ್ರಗಳನ್ನು ಪೂರೈಸದೆ ನಡೆಸುವ ಮದುವೆಗೆ ಕಾನೂನಿನ ಮಾನ್ಯತೆಯೇ ಇಲ್ಲ. ಅಲ್ಲದೆ ಇಂಥ ಆಚರಣೆಗಳಿಲ್ಲದೆ ಮಾಡಿಸುವ ಮದುವೆ ನೋಂದಣಿ ಕೂಡಾ ಮದುವೆಗೆ ಮಾನ್ಯತೆ ದೊರಕಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಪೈಲಟ್ ದಂಪತಿಯ ವಿಚ್ಛೇದನ ಪ್ರಕರಣದಲ್ಲಿ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಮತ್ತು ನ್ಯಾ.ಅಗಾಸ್ಟಿನ್ ಜಾರ್ಜ್ ಅವರನ್ನೊಳಗೊಂಡ ಪೀಠ ಈ ಮಹತ್ವದ ತೀರ್ಪು ನೀಡಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಹಿಂದೂ ವಿವಾಹವೆಂದರೆ ಅದು ಹಾಡು, ನೃತ್ಯ, ಊಟದ ಕಾರ್ಯಕ್ರಮವಾಗಲೀ ಅಥವಾ ಹಣಕಾಸಿನ ವಹಿವಾಟಿನ ವ್ಯವಹಾರವಲ್ಲ. ಬದಲಾಗಿ ಅದೊಂದು ಸಂಸ್ಕøತಿ ಸಂಸ್ಕಾರ ಎಂಬುದು ಭಾರತೀಯ ಸಮಾಜದಲ್ಲಿ ಭಾರೀ ಮಹತ್ವವನ್ನು ಪಡೆದಿದೆ. ಸಪ್ತಪದಿ ಎಂಬುದು ಪತಿ-ಪತ್ನಿಯರು ಪರಸ್ಪರರಿಗೆ ಕೊಡುವ ವಾಗ್ದಾನವಾಗಿದ್ದು, ಜೀವನದುದ್ದಕ್ಕೂ ಸಮಾನವಾಗಿ ಗೌರವಿಸಿ ಬಾಳುವ ಪ್ರತಿಜ್ಞೆಗೈಯ್ಯುತ್ತಾರೆ. ಇದನ್ನೇ ಹಿಂದೂ ವಿವಾಹ ಕಾಯ್ದೆಯೂ ತಿಳಿಸಿದೆ ಎಂದು ಸುಪ್ರೀಂ ಕೋರ್ಟ್ ಬಣ್ಣಿಸಿದೆ.

Ad Widget . Ad Widget . Ad Widget .

ಮದುವೆ ನೋಂದಣಿ ಮಾಡಿಸಿದರೆ ಅದೇ ಅಂತಿಮವಾಗುವುದಿಲ್ಲ. ಯಾವುದೇ ಶಾಸ್ತ್ರೋಕ್ತ ಆಚರಣೆ ಇಲ್ಲದೇ, ಕೇವಲ ಸಂಸ್ಥೆಯೊಂದು ನೋಂದಣಿಯ ದಾಖಲೆ ಪತ್ರ ವಿತರಿಸಿದರೆ ಅದು ವೈವಾಹಿಕ ಜೀವನದ ಯಾವುದೇ ಸ್ಥಿತಿಯನ್ನು ಖಚಿತಪಡಿಸುವುದಿಲ್ಲ ಮತ್ತು ಹಿಂದೂ ವಿವಾಹ ಕಾಯ್ದೆ ಅನ್ವಯ ವಿವಾಹವನ್ನು ಮಾನ್ಯಗೊಳಿಸುವುದೂ ಇಲ್ಲ.ನೋಂದಣಿ ಕೇವಲ ಮದುವೆಯ ಸಾಕ್ಷಿಯಷ್ಟೇ. ಅದು ಮದುವೆಗೆ ಮಾನ್ಯತೆ ನೀಡದು. ಹಿಂದೂ ವಿವಾಹ ಕಾಯ್ದೆಗೆ ಅನುಸಾರವಾಗಿ ಹಿಂದೂ ಧರ್ಮೀಯರು ವಿವಾಹವಾಗಿದ್ದರೆ ಮಾತ್ರ ವಿಚ್ಛೇದನ ಪ್ರಕರಣಗಳಲ್ಲಿ ನೋಂದಣಿಗೆ ಸಿಂಧುತ್ವ ಇರುತ್ತದೆ ಎಂದು ನ್ಯಾಯಾಲಯ ಮಹತ್ವದ ಹೇಳಿಕೆ ನೀಡಿದೆ.

ವಾಣಿಜ್ಯ ಪೈಲಟ್ ದಂಪತಿಯ ವಿಚ್ಛೇದನ ಪ್ರಕರಣದಲ್ಲಿ ಮದುವೆ ನೋಂದಣಿ ಮಾಡಿಸಿದ್ದರೂ ಹಿಂದೂ ವಿವಾಹ ಕಾಯ್ದೆಯ ಅನುಸಾರ ಸಪ್ತಪದಿ ನೆರವೇರಿರಲಿಲ್ಲ ಎಂಬುದು ನ್ಯಾಯಾಲಯಕ್ಕೆ ಗಮನಕ್ಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನೋಂದಣಿಯನ್ನು ಅಮಾನ್ಯ ಮಾಡಿ ಮದುವೆಯನ್ನು ರದ್ದುಗೊಳಿಸಿ ಪತ್ನಿ ದಾಖಲಿಸಿದ್ದ ವರದಕ್ಷಿಣೆ ಮತ್ತು ವಿಚ್ಛೇದನ ಪ್ರಕರಣವನ್ನು ನ್ಯಾಯಾಲಯ ರದ್ದುಗೊಳಿಸಿದೆ.

Leave a Comment

Your email address will not be published. Required fields are marked *