ಪೆನ್ ಡ್ರೈವ್ ಕಾಮಕಾಂಡ| ಬಂಧನ ಭೀತಿಯಲ್ಲಿ ಪ್ರಜ್ವಲ್| ಎಸ್ಐಟಿ ನಿಂದ ಲುಕ್ ಔಟ್ ನೋಟೀಸ್

ಸಮಗ್ರ ನ್ಯೂಸ್: ಅಶ್ಲೀಲ ವಿಡಿಯೋಗಳ ಪೆನ್‌ ಡ್ರೈವ್‌ ಪ್ರಕರಣ ಸಂಬಂಧ ಪ್ರಮುಖ ಆರೋಪಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget .

ಸಂಸದ ಪ್ರಜ್ವಲ್‌ ಹಾಗೂ ಎಚ್‌.ಡಿ.ರೇವಣ್ಣ ವಿರುದ್ಧ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಈ ಸಂಬಂಧ ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ಈಗಾಗಲೇ ದೂರು ದಾಖಲಿಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಪ್ರಕರಣ ದಾಖಲಾಗುವ‌ ಮುನ್ನವೇ ಪ್ರಜ್ವಲ್‌ ರೇವಣ್ಣ ದೇಶದಿಂದ‌ ಪರಾರಿಯಾಗಿದ್ದಾರೆ. ವಿಚಾರಣೆಗೆ ನೋಟಿಸ್ ನೀಡಿದರೂ ಹಾಜರಾಗಿಲ್ಲ. ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿರುವ ಬಗ್ಗೆ ಎಸ್‌ಐಟಿ ಅಧಿಕಾರಿಗಳು ಮಾಹಿತಿ ಕಲೆ‌ ಹಾಕಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಅವರ ಪತ್ತೆಗಾಗಿ‌ ಲುಕ್ ಔಟ್ ನೋಟಿಸ್ ಜಾರಿ‌ ಮಾಡಿ, ವಿಮಾನ ನಿಲ್ದಾಣ ಅಧಿಕಾರಿಗಳು ಹಾಗೂ ಅಂತರರಾಷ್ಟ್ರೀಯ ತನಿಖಾ ಸಂಸ್ಥೆಗಳಿಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ.

ಎಸ್‌ಐಟಿ ನೀಡಿದ ಲುಕ್‌ಔಟ್ ನೋಟಿಸ್ ಬಳಿಕವೂ ಪ್ರಜ್ವಲ್‌ ರೇವಣ್ಣ ಪತ್ತೆಯಾಗದಿದ್ದರೆ, ಅವರ ಪತ್ತೆಗೆ ಕೋರ್ಟ್‌ನಿಂದ ಜಾಮೀನು ರಹಿತ ವಾರೆಂಟ್ ಜಾರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Leave a Comment

Your email address will not be published. Required fields are marked *