Ad Widget .

ಮಂಡ್ಯ: ಚಾರ್ಜ್​ಗೆ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟ

ಸಮಗ್ರ ನ್ಯೂಸ್‌ : ಚಾರ್ಜ್​ಗೆ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟಗೊಂಡ ಘಟನೆ ಮಂಡ್ಯದ ಮಳವಳ್ಳಿ ಪಟ್ಟಣದ NES ಬಡಾವಣೆಯಲ್ಲಿ ನಡೆದಿದೆ.

Ad Widget . Ad Widget .

ಪರಿಣಾಮ ಎಲೆಕ್ಟ್ರಿಲ್ ಸ್ಕೂಟರ್ ಮತ್ತು ಹತ್ತಿರದ ಶಾಮಿಯಾನ‌ ಅಂಗಡಿ ಸುಟ್ಟು ಕರಕಲಾಗಿದೆ. ಪಟ್ಟಣದ ಉಮಾಶಂಕರ್ ಎಂಬುವರಿಗೆ ಸೇರಿದ ಎಲೆಕ್ಟ್ರಿಕ್ ಸ್ಕೂಟರ್ ಇದಾಗಿದ್ದು, ತಮ್ಮ ಶಾಮಿಯಾನದ ಅಂಗಡಿಯಲ್ಲಿ ಸ್ಕೂಟರ್ ಚಾರ್ಜ್ ಗೆ ಹಾಕಿದ್ದ ವೇಳೆ ಸ್ಫೋಟಗೊಂಡಿದೆ.

Ad Widget . Ad Widget .

ಸ್ಕೂಟರ್ ಭಸ್ಮಗೊಂಡು ಶಾಮಿಯಾನಗಳು ಬೆಂಕಿಗಾಹುತಿಯಾಗಿವೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

Leave a Comment

Your email address will not be published. Required fields are marked *