ಕುಕ್ಕೆಸುಬ್ರಹ್ಮಣ್ಯ: ಉಪನ್ಯಾಸಕರೊಂದಿಗೆ ಅನುಚಿತ ವರ್ತನೆ ನಡೆಸಿದ ವಿದ್ಯಾರ್ಥಿ ಸಸ್ಪೆಂಡ್

ಸಮಗ್ರ ನ್ಯೂಸ್: ವಿದ್ಯಾರ್ಥಿಯೊಬ್ಬ ಕಾಲೇಜಿನ ಉಪನ್ಯಾಸಕರ ಜೊತೆ ಅನುಚಿತ ವರ್ತನೆ ನಡೆಸಿದ ಹಿನ್ನಲೆಯಲ್ಲಿ ಆತನನ್ನು ತರಗತಿಯಿಂದ ಅಮಾನತು ಮಾಡಿದ ಘಟನೆ ಕುಕ್ಕೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ.

Ad Widget ... ..

ಇಲ್ಲಿನ ಪ್ರತಿಷ್ಟಿತ ಕಾಲೇಜೊಂದರ ವಿದ್ಯಾರ್ಥಿ ಮೊಬೈಲ್ ವಿಷಯದಲ್ಲಿ ಉಪನ್ಯಾಸಕರ ಜೊತೆಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಯತ್ನ ಮಾಡಿದ್ದಾಗಿ ಹೇಳಲಾಗಿದ್ದು, ಈ ಕುರಿತು ಸ್ಥಳೀಯ ಪೋಲಿಸ್ ಠಾಣೆಯಲ್ಲಿ ವಿಧ್ಯಾರ್ಥಿಯಿಂದ ಮುಚ್ಚಳಿಕೆ ಬರೆಸಿ ಕಳುಹಿಸಲಾಗಿತ್ತು. ಆದರೆ ಶಿಸ್ತು ಹಾಗೂ ಗುಣಮಟ್ಟದ

Ad Widget

ಉತ್ತಮ ಶಿಕ್ಷಣಕ್ಕೆ ಹೆಸರಾಗಿದ್ದ ಕಾಲೇಜಿನಲ್ಲಿ ಈ ರೀತಿಯ ಘಟನೆಯಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಹಿನ್ನಲೆಯಲ್ಲಿ ಪುಂಡತನ ಮೆರೆದ ವಿದ್ಯಾರ್ಥಿಯನ್ನು ಕಾಲೇಜಿನಿಂದ ಪ್ರಾಂಶುಪಾಲರು ಅಮಾನತು ಮಾಡಿರುವುದಾಗಿ ತಿಳಿದುಬಂದಿದೆ.

Leave a Comment

Your email address will not be published. Required fields are marked *