ಸಮಗ್ರ ನ್ಯೂಸ್ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲೂ ಒಂದು ಲೈಂಗಿಕ ಕಿರುಕುಳ ಹಾಗೂ ಅಪಹರಣ ಪ್ರಕರಣ ಪ್ರಜ್ವಲ್ ರೇವಣ್ಣ ವಿರುದ್ಧ ದೂರು ದಾಖಲಾಗಿದೆ.
ತಾಯಿಯನ್ನು ಅಪಹರಣ ಮಾಡಲಾಗಿದೆ ಎಂದು ಆರೋಪಿಸಿ ಪುತ್ರ ಪೊಲೀಸರಿಗೆ ದೂರು ನೀಡಿರುವ ಘಟನೆ ಕೆ.ಆರ್.ನಗರ ತಾಲೂಕಿನಲ್ಲಿ ನಡೆದಿದೆ.
ಪ್ರಜ್ವಲ್ ರೇವಣ್ಣ ಅವರಿಂದ ನನ್ನ ತಾಯಿಯೂ ಲೈಂಗಿಕ ದೌರ್ಜನ್ಯಕ್ಕೆ ಒಳಪಟ್ಟಿದ್ದರು. ಈ ಸಂಬಂಧ ಫೋಟೋಗಳು ಬಹಿರಂಗ ಆಗಿದ್ದವು. ಬಳಿಕ ನನ್ನ ತಾಯಿ ನಾಪತ್ತೆ ಆಗಿದ್ದಾರೆ. ಶಾಸಕ ಎಚ್.ಡಿ.ರೇವಣ್ಣ, ಪತ್ನಿ ಭವಾನಿ ರೇವಣ್ಣ ಅಪಹರಣ ಮಾಡಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ದೂರಿನ ಬಗ್ಗೆ ಪೊಲೀಸರು ಪ್ರಾಥಮಿಕ ಮಾಹಿತಿ ಕಲೆಹಾಕುತ್ತಿದ್ದಾರೆ. ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಹಾಗೂ ಎಚ್.ಡಿ ರೇವಣ್ಣ ವಿರುದ್ಧ ದಾಖಲಾಗಿರುವ ದೂರಿನ ತನಿಖೆಗೆ ಎಸ್ಐಟಿ ರಚನೆ ಮಾಡಿರುವಂತೆ ಈ ದೂರು ಕೂಡ ಹೊರಬಂದಿದೆ.