Ad Widget .

ಹಾಸನ: ಸಂಸದ ಪ್ರಜ್ವಲ್‌ ಗೆ ಅಭಿಮಾನಿಯಿಂದ ಶುಭಾಶಯ ಪತ್ರ

ಸಮಗ್ರ ನ್ಯೂಸ್‌ : ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋಗಳು ದೇಶಾದ್ಯಂತ ಭಾರೀ ಚರ್ಚೆ ಯಾಗುತ್ತಿದ್ದು, ಈ ನಡುವೆ ಅಭಿಮಾನಿಯೊಬ್ಬ ಪ್ರಜ್ವಲ್‌ ರೇವಣ್ಣಗೆ ಶುಭಾಶಯಗಳನ್ನು ತಿಳಿಸಿದ್ದಾನೆ.

Ad Widget . Ad Widget .

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಚುನಾವಣಾ ಅಖಾಡಕ್ಕೆ ಇಳಿದಿರುವ ಪ್ರಜ್ವಲ್‌ ರೇವಣ್ಣಗೆ ಅಭಿಮಾನಿ ಶುಭಾಶಯಗಳನ್ನು ತಿಳಿಸಿ ಪತ್ರ ಬರೆದಿದ್ದಾನೆ. ಈ ಪತ್ರ ಹಾಸನ ನಗರದ ಆರ್.ಸಿ. ರಸ್ತೆಯಲ್ಲಿರುವ ಸಂಸದರ ಕಚೇರಿ ಬಾಗಿಲ ಬಳಿ ಸಿಕ್ಕಿದೆ.

Ad Widget . Ad Widget .

ನೀವು ಈಗಾಗಲೇ ಹಾಸನ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದ್ದೀರಿ. ಈ ಸಲವೂ ತಾವುಗಳೇ ಚುನಾಯಿತರಾಗುತ್ತೀರಿ ಎಂದು ನಾನು ನಂಬುತ್ತೇನೆ. ಇನ್ನು ಮುಂದೆಯೂ ಹಾಸನ ಮತ್ತು ಕರ್ನಾಟಕಕ್ಕೆ ತಮ್ಮಿಂದ ಅಭಿವೃದ್ಧಿ ಕೆಲಸಗಳು ಆಗುತ್ತವೆ ಎಂದು ನನಗೆ ವಿಶ್ವಾಸವಿದೆ ಎಂದು ಕುಷ್ಟಗಿ ಮೂಲದ ಶಂಕರಗೌಡ ಎಂಬವರು ಪತ್ರದಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *