Ad Widget .

ಲಕ್ನೋ: ರೈಲಿನಲ್ಲಿಯೇ ತನ್ನ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ಪರಾರಿ

ಸಮಗ್ರ ನ್ಯೂಸ್‌ : ವ್ಯಕ್ತಿಯೊಬ್ಬ ಚಲಿಸುತ್ತಿರುವ ರೈಲಿನಲ್ಲಿಯೇ ತನ್ನ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ಪರಾರಿಯಾದ ಘಟನೆ ಉತ್ತರ ಪ್ರದೇಶದ ಝಾನ್ಸಿ ಜಂಕ್ಷನ್‌ ಸಮೀಪ ನಡೆದಿದೆ.

Ad Widget . Ad Widget .

ಪ್ರಕರಣ ಏಪ್ರಿಲ್‌ 29ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 28 ವರ್ಷದ ಮೊಹಮ್ಮದ್‌ ಅರ್ಷದ್‌ ತ್ರಿವಳಿ ತಲಾಕ್‌ ನೀಡಿದ ಪರಾರಿಯಾದ ವ್ಯಕ್ತಿ. ಮೊಹಮ್ಮದ್ ಅರ್ಷದ್ ತನ್ನ ಪತ್ನಿ ಅಫ್ಸಾನಾ (26),

Ad Widget . Ad Widget .

ರೈಲು ಝಾನ್ಸಿ ನಿಲ್ದಾಣಕ್ಕೆ ಬರುತ್ತಿದ್ದಂತೆ ಅರ್ಷದ್ ತನ್ನ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ರೈಲಿನಿಂದ ಇಳಿದಿದ್ದಾನೆ. ಹೋಗುವ ಮುನ್ನ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದ ಎಂದು ಮೂಲಗಳು ತಿಳಿಸಿವೆ. ಅನಿರೀಕ್ಷಿತ ಆಘಾತದಿಂದ ತಬ್ಬಿಬ್ಬಾದ ಅಫ್ಸಾನಾ ಕೂಡಲೇ ರೈಲ್ವೇ ಪೊಲೀಸರನ್ನು ಸಂಪರ್ಕಿಸಿದ್ದರು. ಪೊಲೀಸರು ಅವರನ್ನು ಕಾನ್ಪುರ್ ದೆಹತ್‌ನ ಪುಖ್ರಾಯನ್‌ಗೆ ಕಳುಹಿಸಿದರು. ಅಲ್ಲಿಂದ ಅವರು ಭೋಪಾಲ್‌ಗೆ ರೈಲು ಹತ್ತಿದ್ದರು. ಕೊನೆಗೆ ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿ ಮೊಹಮ್ಮದ್ ಅರ್ಷದ್‌ಗಾಗಿ ಹುಡುಕಾಟ ನಡೆಸಿದ್ದಾರೆ.

ಭೋಪಾಲ್‌ನ ಖಾಸಗಿ ಕಂಪನಿಯೊಂದರಲ್ಲಿ ಕಂಪ್ಯೂಟರ್‌ ಎಂಜಿನಿಯರ್‌ ಆಗಿರುವ ಅರ್ಷದ್‌ ಈ ವರ್ಷದ ಜನವರಿ 12ರಂದು ರಾಜಸ್ಥಾನದ ಕೋಟದ ಅಫ್ಸಾನಾ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ. ಮ್ಯಾಟ್ರಿಮೋನಿ ಜಾಹೀರಾತು ಮೂಲಕ ಪದವೀಧರೆಯಾದ ಅಫ್ಸಾನಾ ಮತ್ತು ಅರ್ಷದ್‌ ಪರಸ್ಪರ ಪರಿಚಿತರಾಗಿದ್ದರು. ದಂಪತಿ ಕಳೆದ ವಾರ ಪುಖ್ರಾಯನ್‌ನಲ್ಲಿರುವ ಅರ್ಷದ್‌ನ ಪೂರ್ವಜರ ಮನೆಗೆ ಭೇಟಿ ನೀಡಿದಾಗ ಅಫ್ಸಾನಾ ಅವರಿಗೆ ಆಘಾತಕಾರಿ ಸತ್ಯವೊಂದು ತಿಳಿಯಿತು. ಅರ್ಷದ್‌ಗೆ ಅದಾಗಲೇ ಮದುವೆಯಾಗಿತ್ತು ಎನ್ನುವುದು ಅಫ್ಸಾನಾ ಅವರಿಗೆ ಆಗಷ್ಟೇ ತಿಳಿದು ಬಂದಿತ್ತು.

ಈ ಬಗ್ಗೆ ಅಫ್ಸಾನಾ ಪ್ರಶ್ನಿಸಿದಾಗ ಕಿರುಕುಳ ಆರಂಭವಾಗಿತ್ತು. ಅರ್ಷದ್‌ ಮತ್ತು ಆತನ ತಾಯಿ ವರದಕ್ಷಿಣೆ ನೀಡುವಂತೆ ಪೀಡಿಸತೊಡಗಿದರು ಎಂದು ಅಫ್ಸಾನಾ ದೂರಿನಲ್ಲಿ ತಿಳಿಸಿದ್ದಾರೆ. ಕೊನೆಗೆ ರೈಲಿನಲ್ಲಿ ಆತ ತ್ರಿವಳಿ ತಲಾಕ್‌ ಕೊಟ್ಟು ನಾಪತ್ತೆಯಾಗಿದ್ದಾನೆ ಎಂದು ಅಫ್ಸಾನಾ ವಿವರಿಸಿದ್ದಾರೆ.

ಅಫ್ಸಾನಾ ಈ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಮನವಿ ಸಲ್ಲಿಸಿ ತನಗೆ ನೆರವಾಗಬೇಕು ಎಂದು ಕೋರಿದ್ದಾರೆ. ಹೀಗೆ ತ್ರಿವಳಿ ತಲಾಕ್‌ ಕೊಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದೂ ಆಗ್ರಹಿಸಿದ್ದಾರೆ. ಸರ್ಕಲ್‌ ಆಫೀಸರ್‌ ಪ್ರಿಯಾ ಸಿಂಗ್‌ ಈ ಬಗ್ಗೆ ಮಾತನಾಡಿ, ʼʼಅಫ್ಸಾನಾ ಅವರ ದೂರಿನ ಮೇರೆಗೆ ಅರ್ಷಾದ್‌, ಆತನ ಮಾವ ಅಖೀಲ್‌, ತಂದೆ ನಫೀಸುಲ್ ಹಸನ್ ಮತ್ತು ತಾಯಿ ಪರ್ವೀನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ಕೈಗೆತ್ತಿಕೊಳ್ಳಲಾಗಿದೆʼʼ ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *