ಮಹಾರಾಷ್ಟ್ರ : ಮನೆಯಲ್ಲಿ ಬೆಂಕಿ ಅವಘಡ: 3 ವರ್ಷದ ಮಗು ಮೃತ್ಯು, 5 ಮಂದಿಗೆ ಗಾಯ

ಸಮಗ್ರ ನ್ಯೂಸ್ : ಮನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ 3 ವರ್ಷದ ಮಗು ಮೃತಪಟ್ಟು ಐವರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಛತ್ರಪತಿ ಸಾಂಭಾಜಿನಗರದಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Ad Widget ... ..

ಮನೆಯಲ್ಲಿ ಏಳು ಮಂದಿ ವಯಸ್ಕರು ಹಾಗೂ 2–3 ಮಕ್ಕಳು ಇದ್ದರು. ಸಿಲಿಂಡರ್‌ ಬ್ಲಾಸ್ಟ್‌ನಿಂದ ಘಟನೆ ಸಂಭವಿಸಿದೆ ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Ad Widget

ಘಟನೆಯಲ್ಲಿ ಸದಾಫ್ ಇರ್ಫಾನ್ ಶೇಖ್ (3) ಮೃತಪಟ್ಟರೆ, ರಿಜ್ವಾನ್ ಖಾನ್ (40), ರೆಹಾನ್ ಶೇಖ್ (17), ಆದಿಲ್ ಖಾನ್ (10), ಫೈಜಾನ್ ಪಠಾಣ್ (13) ಮತ್ತು ದಿಶಾನ್ ಖಾನ್ (9) ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ನಗರದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *