ಆಫ್ರಿಕಾ : ಧಾರಾಕಾರ ಮಳೆಯಿಂದ ಮಹಾ ಪ್ರವಾಹ: 90 ಜನ ಕಾಣೆ, 350ಕ್ಕೂ ಅಧಿಕ ಜನ ಮೃತ್ಯು

ಸಮಗ್ರ ನ್ಯೂಸ್ : ಕಳೆದೊಂದು ವಾರದಿಂದ ಕೀನ್ಯಾ ಮತ್ತು ತಂಜಾನಿಯಾದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ರಸ್ತೆಗಳೆಲ್ಲ ನದಿಯಂತಾಗಿವೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಹಾಗೂ ಸಾಕು ಪ್ರಾಣಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.

Ad Widget ... ..

ಪ್ರವಾಹದಿಂದಾಗಿ ಸುಮಾರು 350ಕ್ಕೂ ಅಧಿಕ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಪ್ರವಾಹಕ್ಕೆ ಮನೆಗಳು, ರಸ್ತೆಗಳು ಕೊಚ್ಚಿ ಹೋಗಿದ್ದು, ಹಲವು ಪ್ರದೇಶಗಳಲ್ಲಿ ಸಂಪರ್ಕ ಕಡಿತಗೊಂಡಿದೆ. ಇನ್ನೂ ಭೀಕರ ಮಳೆಯಿಂದಾಗಿ ಕಿನ್ಯಾದ ಲಕ್ಷಕ್ಕೂ ಅಧಿಕ ಜನರನ್ನ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ.

Ad Widget

ಅಲ್ಲಿನ ಸರ್ಕಾರ ನೀಡಿರುವ ಮಾಹಿತಿ ಪ್ರಕಾರ, 100ಕ್ಕೂ ಹೆಚ್ಚು ಗಂಜಿ ಕೇಂದ್ರಗಳನ್ನು ತೆರೆಯಲಾಗಿದೆ. 90 ಜನರು ಕಾಣೆಯಾಗಿದ್ದಾರೆ. 27500 ಮಂದಿಯನ್ನು ಕ್ಯಾಂಪ್ನಲ್ಲಿರಿಸಿ ಆರೈಕೆ ಮಾಡಲಾಗುತ್ತಿದೆ. ಸುಮಾರು 1,90,000 ಜನರು ಪ್ರವಾಹ ಮತ್ತು ಮಳೆಯಿಂದಾಗಿ ಬೀದಿಗೆ ಬಂದಿದ್ದಾರೆ ಎಂದು ತಿಳಿಸಿದೆ.

Leave a Comment

Your email address will not be published. Required fields are marked *