Ad Widget .

ಕೋವಿಶೀಲ್ಡ್ ಹಾಕಿಸಿಕೊಂಡವರು ತಂಪು ಪಾನೀಯ ಸೇವಿಸಬಾರದೇ? ವೈರಲ್ ಆಗಿರುವ ಪೋಸ್ಟರ್ ನ ಕುರಿತು ಆರೋಗ್ಯ ಇಲಾಖೆ ನೀಡಿದ ಸ್ಪಷ್ಟನೆ ಏನು?

ಸಮಗ್ರ ನ್ಯೂಸ್: ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡಿರುವ ಪರಿಣಾಮ ರಕ್ತ ಹೆಪ್ಪುಗಟ್ಟುವುದು, ದಿಢೀ‌ರ್ ಹೃದಯಾಘಾತ ಸಂಭವಿಸಿ ಪ್ರಾಣ ಹಾನಿಯಾಗುವುದು ವರದಿ ಆಗುತ್ತಿದೆ. ಆದರೆ ಕೋವಿಶೀಲ್ಡ್ ಲಸಿಕೆ ಪರಿಣಾಮಗಳ ಬಗ್ಗೆ ಯಾವುದೇ ಸುತ್ತೋಲೆ ಹೊರಡಿಸಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.

Ad Widget . Ad Widget .

ಈ ಕುರಿತಂತೆ ಆರೋಗ್ಯ ಇಲಾಖೆಯು ಸಮಯೋಚಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದು, ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡಿರುವ ಪರಿಣಾಮ ರಕ್ತ ಹೆಪ್ಪುಗಟ್ಟುವುದು, ದಿಢೀ‌ರ್ ಹೃದಯಾಘಾತ ಸಂಭವಿಸಿ ಪ್ರಾಣ ಹಾನಿಯಾಗುವುದು ವರದಿ ಆಗುತ್ತಿದೆ. ಆದ ಕಾರಣ ಆರೋಗ್ಯ ಇಲಾಖೆಯು ತಿಳಿಸಿರುವ ಮಾಹಿತಿ ಪ್ರಕಾರ ವಿದ್ಯಾರ್ಥಿಗಳು, ಪೋಷಕರು ಪ್ರಿಡ್ಜ್‌ನಲ್ಲಿ ಇಟ್ಟಿರುವ ನೀರು, ತಂಪು ಪಾನೀಯಗಳು ಕುಡಿಯಬಾರದು.

Ad Widget . Ad Widget .

ಐಸ್ ಕ್ರೀಮ್ ಸೇವಿಸಬಾರದು ಎಂದು ಚಿಕ್ಕಬಳ್ಳಾಪುರ ನಗರದ ಸಿದ್ದರಾಮಯ್ಯ ಕಾನೂನು ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆ ಹೊರಡಿಸಿದ್ದರು. ಇದು ಚರ್ಚೆಗೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಆರೋಗ್ಯ ಇಲಾಖೆ ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಸ್ಪಷ್ಟನೆ ನೀಡಿದೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *