ನಂಜನಗೂಡು : ಬಿರುಗಾಳಿ ಮಳೆಗೆ ಮುರಿದು ಬಿದ್ದ ನಾಲ್ಕು ಎಕರೆ ಬಾಳೆ

ಸಮಗ್ರ ನ್ಯೂಸ್ : ಬಿರುಗಾಳಿ ಸಹಿತ ಸುರಿದ ಮಳೆಗೆ ಸುಮಾರು ನಾಲ್ಕು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಬೆಳೆ ಸಂಪೂರ್ಣವಾಗಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಗ್ರಾಮದ ರೈತರಾದ ಬಸವರಾಜಪ್ಪ ಎಂಬುವರಿಗೆ ಸೇರಿದ ಬಾಳೆ ಬೆಳೆ ಇದಾಗಿದ್ದು, ತಮ್ಮ ನಾಲ್ಕು ಎಕರೆ ಪ್ರದೇಶದಲ್ಲಿ ಸಾಲ ಸೋಲ ಮಾಡಿ ಬಾಳೆ ಬೆಳೆ ಬೆಳೆದಿದ್ದರು. ಹಗಲು ರಾತ್ರಿ ಎನ್ನದೆ ಕಾಡುಪ್ರಾಣಿಗಳ ಹಾವಳಿಯ ನಡುವೆಯೂ ಕೂಡ ಬೆಳೆಯನ್ನು ರಕ್ಷಣೆ ಮಾಡಿಕೊಂಡಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಆದರೆ ಬಿರುಗಾಳಿ ಸಹಿತ ಸುರಿದ ಮಳೆಗೆ ಬಾಳೆ ಮುರಿದು ಬಿದ್ದು ಸುಮಾರು ಮೂರು ಲಕ್ಷಕ್ಕೂ ಹೆಚ್ಚು ನಷ್ಟ ಉಂಟಾಗಿದೆ. ಕೂಡಲೇ ಸರ್ಕಾರ ಪರಿಹಾರ ನೀಡಬೇಕು ಎಂದು ಒತ್ತಾಯ ಮಾಡಿದ್ದಾರೆ.

Leave a Comment

Your email address will not be published. Required fields are marked *