ರಾಯಚೂರು ಕಾಂಗ್ರೆಸ್ ಅಭ್ಯರ್ಥಿ ಜಿ ಕುಮಾರ ನಾಯಕ್ ಪರವಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಪ್ರಚಾರ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ನಿಮಿತ್ತ ರಾಯಚೂರು ನಗರದ ತಿಮ್ಮಾಪುರ ಪೇಟೆ ಬಡಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ಜಿ ಕುಮಾರ ನಾಯಕ್ ಪರವಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ ರವರು ಬಹಿರಂಗ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

Ad Widget ... ..

ಈ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಜನಪ್ರಿಯ ಗ್ಯಾರಂಟಿ ಯೋಜನೆಗಳ ಬಗ್ಗೆ ತಿಳಿಸಿ, ವಿದ್ಯಾವಂತರನ್ನು ಲೋಕಸಭೆಗೆ ಆರಿಸಿ ಕಳುಹಿಸುವ ಜವಾಬ್ದಾರಿ ಜನರ ಮೇಲಿದೆ, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಬೇಕಾಗಿದೆ ಎಂದು ಮನವಿ ಮಾಡಿದರು.

Ad Widget

ಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ ಕುಮಾರ ನಾಯಕ್, ಕಾಂಗ್ರೆಸ್ ಮುಖಂಡ ರವಿ ಭೋಸರಾಜುರವರು ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರುಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *