ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ಮಾಡುತ್ತಿದ್ದಾರೆ… ಬೌರಿಂಗ್ ಆಸ್ಪತ್ರೆ ಬಳಿ ರೇವಣ್ಣ ಆಕ್ರೋಶ

ಸಮಗ್ರ ನ್ಯೂಸ್: ಇಂದು ಎಚ್.ಡಿ ರೇವಣ್ಣ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಮುನ್ನ ಬೋರಿಂಗ್‌ ಆಸ್ಪತ್ರೆಯಲ್ಲಿ ಮತ್ತೊಮ್ಮೆ ವೈದ್ಯಕೀಯ ತಪಾಸಣೆ ಮಾಡಲಾಯಿತು. ಹೃದಯ ತಜ್ಞರು ಮತ್ತು ಗ್ಯಾಸ್ಟ್ರೋಎಂಟರಾಲಜಿಸ್ಟ್ ತಜ್ಞರ ಬಳಿ ತಪಾಸಣೆ ನಡೆಸಲಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಇದೆ ಸಂದರ್ಭದಲ್ಲಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಎಚ್.ಡಿ ರೇವಣ್ಣ ಮಾದ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಮೇಲೆ ಕಿಡ್ನ್ಯಾಪ್ ಕೇಸ್ ಹಾಕಿದ್ದಾರೆ. 40 ವರ್ಷ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ. ಯಾವುದೇ ರೀತಿಯ ಪುರಾವೆಗಳು ಇಲ್ಲದಿದ್ದರೂ ಅನಾವಶ್ಯಕವಾಗಿ ನನ್ನನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ನನ್ನ ವಿರುದ್ಧದ ಆರೋಪಗಳೆಲ್ಲವೂ ಸುಳ್ಳು. ಇದೊಂದು ದುರುದ್ದೇಶಪೂರ್ವಕ ಬಂಧನವಾಗಿದೆ. ಯಾವುದೇ ಸಾಕ್ಷಿಗಳು ಸಹ ಇವರ ಬಳಿ ಇಲ್ಲ ಎಂದು ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಏಪ್ರಿಲ್‌ 28ರಂದು ನಮ್ಮ ವಿರುದ್ಧ ಕೇಸ್‌ ದಾಖಲಿಸಿದರು. ಆಗ ನಮ್ಮ ಮೇಲೆ ಯಾವುದೇ ಸಾಕ್ಷಿಗಳು ಸಿಕ್ಕಿಲ್ಲವೆಂದು ಪುನಃ ಮೇ 2ರಂದು ನನ್ನ ಮೇಲೆ ಸಾಕ್ಷಿಗಳನ್ನು ಸೃಷ್ಟಿ ಮಾಡಿ ಸಿಕ್ಕಿ ಹಾಕಿಸಿದ್ದಾರೆ. ಇದರಲ್ಲಿ ಯಾವುದೇ ರೀತಿಯ ಪುರಾವೆಗಳು ಇಲ್ಲ. ಆದರೂ ನನ್ನನ್ನು ಸಿಕ್ಕಿ ಹಾಕಿಸಲಾಗಿದೆ ಎಂದು ಗುಡುಗಿದರು.

Leave a Comment

Your email address will not be published. Required fields are marked *